Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹೋಂ-ಸ್ಟೇಗಳ ನೋಂದಣಿ ಕಡ್ಡಾಯ : ಜು.30 ಕೊನೆ ದಿನ*
ಇತ್ತೀಚಿನ ಸುದ್ದಿಗಳು

*ಹೋಂ-ಸ್ಟೇಗಳ ನೋಂದಣಿ ಕಡ್ಡಾಯ : ಜು.30 ಕೊನೆ ದಿನ*

July 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.7 : ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜು.30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಹೋಂ-ಸ್ಟೇ ನೋಂದಣಿಗೆ ನಿಗಧಿಪಡಿಸಲಾಗಿರುವ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ ಉಲ್ಲಾಳ ತಿಳಿಸಿದ್ದಾರೆ.
2015-20ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ಪರವಾನಿಗೆ ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org/ ಅಥವಾ https://kttf.karnatakatourism.org/ ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದೆ.
ಆನ್‍ಲೈನ್‍ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ, ಕೊಠಡಿ ಛಾಯಾಚಿತ್ರಗಳು, ಹೋಂ-ಸ್ಟೇ ಮಾಲೀಕತ್ವದ ದಾಖಲಾತಿ, ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ನಿರಾಕ್ಷೇಪಣಾ ಪತ್ರ, ಸ್ಥಳೀಯ ಸಂಸ್ಥೆಯವರುಗಳು ನೀಡಿರುವ ನಿರಾಕ್ಷೇಪಣಾ ಪತ್ರ. ವಾಸಸ್ಥಳ ದೃಢೀಕರಣ ಪತ್ರ, ನೋಂದಣಿ ಶುಲ್ಕ ರೂ.500 ಗಳ ಸ್ಕ್ಯಾನ್ ಮಾಡಿದ ದಾಖಲಾತಿಗಳನ್ನು ಅಂತರ್ಜಾಲ ತಾಣದಲ್ಲಿ ಅಪ್‍ಲೋಡ್ ಮಾಡಬೇಕು.
ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು ಎಚ್ಚರಿಸಿದ್ದಾರೆ.
ಈಗಾಗಲೇ ಪರವಾನಿಗೆ ಪಡೆದು ಹೋಂ-ಸ್ಟೇ ನಡೆಸುತ್ತಿರುವ ಮಾಲೀಕರು ಬರುವಂತಹ ಅತಿಥಿಗಳ ವಾಹನ ಸಂಖ್ಯೆ, ಗುರುತಿನ ಚೀಟಿಯ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು. ಹೋಂ-ಸ್ಟೇಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಅನಧಿಕೃತ ಚಟುವಟಿಕೆಗಳನ್ನು ನಡೆಸಬಾರದು. ಹೋಂ-ಸ್ಟೇಗಳಲ್ಲಿ ಬಳಸುವಂತಹ ಗ್ಯಾಸ್ ಗೀಸರ್/ ಕರೆಂಟ್ ಗೀಸರ್‍ಗಳನ್ನು ಕಾಲಕಾಲಕ್ಕೆ ಸರಿಯಾಗಿ ನಿರ್ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಹೋಂ-ಸ್ಟೇನಲ್ಲಿ ಅಳವಡಿಸುವುದು.
ಹೋಂ-ಸ್ಟೇನಲ್ಲಿರುವ ಸಿ.ಸಿ.ಟಿವಿಯ 45 ದಿನಗಳ ಪುಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾರಂಗಿ ಹಿನ್ನೀರಿನ ಹಾಗೂ ಬಾಕ್ ವಾಟರ್ ಹಾಗೂ ಕಾವೇರಿ ನದಿ ದಂಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಮಳೆಗಾಲ ಸಮಯದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು. ಈ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ್ ಉಲ್ಲಾಳ್ ತಿಳಿಸಿದ್ದಾರೆ.
ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ :  adkodagutourism@gmail.com  ಗೆ ತಿಳಿಸಬಹುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜಿಲ್ಲಾ ಕೌಶಲ್ಯ ಸಮಿತಿ ಸಭೆ : ಉದ್ಯೋಗ ಆಧಾರಿತ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
Next Article *ಬಡವರು, ಮಧ್ಯಮ ವರ್ಗ ಹಾಗೂ ರೈತಪರ ಬಜೆಟ್ : ಕೊಡಗು ಕಾಂಗ್ರೆಸ್ ಶ್ಲಾಘನೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.