Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೆಯ್ಯಂಡಾಣೆ ಗ್ರಾಮಸ್ಥರಿಂದ ರಸ್ತೆ ತಡೆ ಪ್ರತಿಭಟನೆ : ಬೇಡಿಕೆ ಈಡೇರದಿದ್ದಲ್ಲಿ ಆ.15 ರಂದು ಹೋರಾಟ ತೀವ್ರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಯ್ಯಂಡಾಣೆ ಗ್ರಾಮಸ್ಥರಿಂದ ರಸ್ತೆ ತಡೆ ಪ್ರತಿಭಟನೆ : ಬೇಡಿಕೆ ಈಡೇರದಿದ್ದಲ್ಲಿ ಆ.15 ರಂದು ಹೋರಾಟ ತೀವ್ರ

ಜುಲೈ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಜು.10 : ಕಾಡಾನೆಗಳ ನಿರಂತರ ಉಪಟಳದಿಂದ ಬೇಸತ್ತ ಸಮೀಪದ ಚೆಯ್ಯಂಡಾಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಸೋಮವಾರ ವಿರಾಜಪೇಟೆ – ನಾಪೋಕ್ಲು ಮುಖ್ಯ ರಸ್ತೆಯ ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು.  ಕಾಡಾನೆಗಳ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಚೆಯ್ಯಂಡಾಣೆ-ನಾಪೋಕ್ಲು ಮುಖ್ಯರಸ್ತೆಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10 ಗಂಟೆಯಿಂದ 12 ಗಂಟೆ ವರೆಗೆ ಎರಡು ಗಂಟೆಗಳ ಕಾಲ  ಸಂಪರ್ಕ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದರು.    ಕಾಡಾನೆಗಳ ನಿರಂತರ ಧಾಳಿಯಿಂದ ಕಾಫಿ, ಬಾಳೆ, ಅಡಿಕೆ ತೋಟಗಳು ನಾಶವಾಗುತ್ತಿವೆ. ಭತ್ತದ ಗದ್ದೆಗಳಲ್ಲಿ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ.ಕಾರ್ಮಿಕರು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವನ್ಯಜೀವಿ ದಾಳಿಯಿಂದ ಗ್ರಾಮಸ್ಥರು ನಲುಗುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳು  ಕೃಷಿಕರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು 10 ಆನೆಗಳ ಸ್ಥಳಾಂತರಕ್ಕೆ  ಮೇಲಧಿಕಾರಿಗಳ ಅನುಮತಿ ಪಡೆದು ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.    ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು.        ನಂತರ ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ಅರಣ್ಯಾಧಿಕಾರಿ ಎಸಿಎಫ್ ನೆಹರು, ಡಿಎಫ್ಒ ಎ.ಟಿ.ಪೂವಯ್ಯ, ಮಡಿಕೇರಿ ಅರಣ್ಯಾಧಿಕಾರಿ ದೇವಯ್ಯ ಮಾತನಾಡಿ ಆನೆಗಳನ್ನು ಸ್ಥಳಾಂತರಿಸುತ್ತೇವೆ ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆದ ಗ್ರಾಮಸ್ಥರು, ಆಗಸ್ಟ್ 15 ರಂದು ತೀವ್ರ ರೀತಿಯ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.     ಪ್ರತಿಭಟನೆ ಸಂದರ್ಭ ಎಲ್ಲಾ ವಾಹನಗಳ ಸಂಚಾರಕ್ಕೆ ಸಂಪೂರ್ಣ ತಡೆಯೊಡ್ಡಲಾಗಿತ್ತು.     ಕೋಕೇರಿ ಗ್ರಾಮದ ಮಚ್ಚಂಡ ರಂಜು,ಮರಂದೋಡ  ಗ್ರಾಮದ ಚೋಯಮಾಡಂಡ ಹರೀಶ್ ಮೊಣ್ಣಪ್ಪ, ನರಿಯಂದಡ ಗ್ರಾಮದ ಪೊಕ್ಕುಳಂಡ್ರಾ ದಿವ್ಯ ಧನೋಜ್ ಹಾಗೂ ಚೇಲಾವರ ಗ್ರಾಮದ ಪರವಾಗಿ ಮುಂಡ್ಯೋಳಂಡ  ಪ್ರವೀಣ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.       ಪಂಚಾಯತಿ ಅಧ್ಯಕ್ಷರಾದ ರಾಜೇಶ್ ಅಚ್ಚಯ್ಯ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್  ಮೊನ್ನಪ್ಪ ಹಾಗೂ ಚೆಯ್ಯಂಡಾಣೆ ಪಂಚಾಯಿತಿ ಸದಸ್ಯರಾದ ಮುಂಡ್ಯೋಳಂಡ  ಪ್ರವೀಣ್ ಸದಸ್ಯ ಪೆಮ್ಮಂಡ ಕೌಶಿ, ಮರಂದೋಡ ಸ್ಪೋರ್ಟ್ಸ್ ಮತ್ತು ರಿಕ್ರೀಯೇಷನ್ ಕ್ಲಬ್  ಅಧ್ಯಕ್ಷ ಮಾರ್ಚಂಡ  ಪ್ರವೀಣ್ ಗ್ರಾಮಸ್ಥರು, ಮರಂದೋಡ ಕೊಡವ ಸಂಘದ ಅಧ್ಯಕ್ಷ ಅನ್ನಡಿಯ0ಡ ದಿಲೀಪ್ ಕುಮಾರ್ , ಗೌಡ ಸಮಾಜದ ಪದಾಧಿಕಾರವನ್ನು ಸದಸ್ಯರು, ಪಂಚಾಯಿತಿ ಸದಸ್ಯರು ಸೇರಿದಂತೆ ಚುನಾಯಿತ  ಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. (ವರದಿ : ದುಗ್ಗಳ ಸದಾನಂದ)

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.