Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಕಂದಾಯ ಇಲಾಖೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಕಂದಾಯ ಇಲಾಖೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ*

ಜುಲೈ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.11 : ತಾಲ್ಲೂಕು ಕಚೇರಿಯಲ್ಲಿ ಕೆಲ ಅಧಿಕಾರಿಗಳು ಸಿಬ್ಬಂದಿಗಳಿಂದ ರೈತರ ಶೋಷಣೆ ಆಗುತ್ತಿದೆ ಎಂದು ಆರೋಪಿಸಿರುವ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ರೈತರು ತಕ್ಷಣವೇ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಬಿ.ಪಿ.ಅನಿಲ್ ಕುಮಾರ್, ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್, ಕರವೇ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ಸೋಮವಾರಪೇಟೆ ತಾಲ್ಲೂಕು ಆಡಳಿತ ಸೌಧ ಜಮಾಯಿಸಿದ ಪ್ರತಿಭಟನಕಾರರು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಅರ್ಧ ಗಂಟೆಗಳ ಕಾಲ ತಹಶೀಲ್ದಾರ್ ಸ್ಥಳಕ್ಕೆ ಬರದೆ ಇದ್ದಾಗ, ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದರು.
ಇನ್ಸ್‍ಪೆಕ್ಟರ್ ರಾಮಚಂದ್ರನಾಯಕ್ ತಹಸೀಲ್ದಾರ್‍ರನ್ನು ಕರೆತಂದರು. ಪೊಲೀಸ್ ಬಂದೋಬಸ್ತ್‍ನಲ್ಲಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು.
ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಬ್ರೋಕರ್‍ಗಳ ಹಾವಳಿ, ಬಡ ರೈತರ ಪೋಡಿ ದುರಸ್ತಿ ಫೈಲ್‍ಗಳು ವಿಲೇವಾರಿ ಆಗದಿರುವ ಬಗ್ಗೆ ಸಮಾಜಾಯಿಷಿಕೆ ನೀಡಿದರು.
ಮಧ್ಯಾಹ್ನದ ನಂತರ ಉಪವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.
ಈ ಸಂದರ್ಭ ಬ್ರೋಕರ್‍ಗಳ ಮೂಲಕ ದುರಸ್ತಿಗೆ ಬಂದ ಅರ್ಜಿಗಳು ವಿಲೇವಾರಿಯಾಗುತ್ತವೆ. ಬೆಂಗಳೂರು, ಮೈಸೂರು ಸೇರಿದಂತೆ ನಗರ ಪ್ರದೇಶದ ಮಾಲೀಕರ ಜಾಗದ ದುರಸ್ತಿ ಫೈಲ್‍ಗಳು ಒಂದೆರಡು ತಿಂಗಳಿಗೆ ದುರಸ್ತಿಯಾಗಿ ಮಾಲೀಕತ್ವದ ಹಕ್ಕು ಸಿಗುತ್ತಿವೆ. ಆದರೆ ಎರಡು ದಶಕಗಳ ಬಡವರ ಅರ್ಜಿಗಳು ತಾಲ್ಲೂಕು ಕಚೇರಿಯಲ್ಲೇ ಕೊಳೆಯುತ್ತಿವೆ. ಅನೇಕರ ಅರ್ಜಿಗಳು ನಾಪತ್ತೆಯಾಗಿವೆ ಎಂದು ಅನಿಲ್ ಕುಮಾರ್ ಆರೋಪಿಸಿದರು.
ಒಂದು ಎಕರೆ ದುರಸ್ತಿಗೆ ಒಂದರಿಂದ ಒಂದೂವರೆ ಲಕ್ಷ ರೂ.ಗಳನ್ನು ಫಿಕ್ಸ್ ಮಾಡಿಕೊಂಡಿದ್ದಾರೆ. ಬ್ರೋಕರ್‍ಗಳ ಮೂಲಕ ಹೋದ ಫೈಲ್‍ಗಳಿಗೆ ಮುಕ್ತಿ ಸಿಗುತ್ತದೆ. ಬಡವರಿಂದಲೂ ಹಣ ಕೀಳುತ್ತಾರೆ. ಅನೇಕ ಸಿಬ್ಬಂದಿಗಳಿಗೆ ಕರುಣೆಯೇ ಇಲ್ಲ. ವರ್ಷವಿಡಿ ಕಚೇರಿಗೆ ಅಲೆದರೂ ಮಾನವೀಯ ದೃಷ್ಟಿಯಿಂದಲೂ ಕೆಲಸ ಮಾಡಿಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಅನೇಕ ವರ್ಷಗಳಿಂದ ಇಲ್ಲಿ ಗೂಟ ಹೊಡೆದುಕೊಂಡು ಇದ್ದವರಿಂದ ಸಮಸ್ಯೆಯಾಗುತ್ತಿದೆ. ಅರ್ಜಿಗಳನ್ನು ವರ್ಷಗಟ್ಟಲೇ ಇಟ್ಟುಕೊಂಡಿರುವ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರನ್ನು ಅಮಾನತು ಮಾಡಬೇಕು. ಕಂದಾಯ ಇಲಾಖೆ ಪ್ರತಿಯೊಬ್ಬರನ್ನು ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಯನ್ನು ಒತ್ತಾಯಿಸಿದರು.
ಪ್ರತಿಭಟನಾಕಾರರ ಆರೋಪಗಳನ್ನು ಎರಡು ಗಂಟೆಗಳ ಕಾಲ ಆಲಿಸಿದ ಉಪವಿಭಾಗಧಿಕಾರಿ, ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ನನ್ನ ಹುದ್ದೆಗೆ ಗೌರವ ಸಿಗುವುದಿಲ್ಲ ಎಂದು ಹೇಳಿದರು.
ಕರ್ತವ್ಯ ಲೋಪವೆಸಗಿದ ನೌಕರರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಹ ನೌಕರರನ್ನು ವರ್ಗಾವಣೆ ಮಾಡಲು ಕ್ರಮಕೈಗೊಳ್ಳಲಾಗುವುದು. ಕಚೇರಿಯಲ್ಲಿರುವ ದುರಸ್ತಿ ಕಡತಗಳನ್ನು ನಾಲ್ಕು ವಾರದೊಳಗೆ ವಿಲೇವಾರಿ ಮಾಡಿಕೊಡಲಾಗುವುದು. ಅರ್ಜಿ ಸಲ್ಲಿಕೆಯ ವಿವರಗಳನ್ನು ನಾಳೆಯೇ ನೋಟೀಸ್ ಬೋರ್ಡ್‍ನಲ್ಲಿ ಹಾಕಿಸುತ್ತೇನೆ. ಪೋಡಿ ಮುಕ್ತ ಹೋಬಳಿ ಮಾಡುವ ಬಗ್ಗೆ ರೈತ ಮುಖಂಡರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಪ್ರತಿ ಗುರುವಾರ ಇಲ್ಲಿನ ಕಚೇರಿಯಲ್ಲೇ ಇರುತ್ತೇನೆ. ಸಮಸ್ಯೆಗಳಿದ್ದರೆ ದೂರು ನೀಡಬಹುದು ಎಂದು ಹೇಳಿದರು. ಉಪವಿಭಾಗಧಿಕಾರಿಗಳ ಭರವಸೆಯ ಮೇರೆಗೆ ಇಂದಿನ ಪ್ರತಿಭಟನೆಯನ್ನು ಮುಕ್ತಾಯಗೊಳಿಸುತ್ತೇವೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಅನಿಲ್‍ಕುಮಾರ್ ಹೇಳಿದರು.
ತಹಸೀಲ್ದಾರ್ ಎಸ್.ವಿ.ನರಗುಂದ್, ಡಿಡಿಎಲ್‍ಆರ್ ಶ್ರೀನಿವಾಸ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.