Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
  • *ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*
  • *ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 
  • *ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*
  • *ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*
  • *ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಪ್ರೌಢಶಾಲೆಯಲ್ಲಿ ಮಕ್ಕಳ ಶಾಲಾ ಸಂಸತ್ತು ಚುನಾವಣೆ : ವಿದ್ಯಾರ್ಥಿಗಳಿಗೆ ಚುನಾವಣಾ ಅರಿವು* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಪ್ರೌಢಶಾಲೆಯಲ್ಲಿ ಮಕ್ಕಳ ಶಾಲಾ ಸಂಸತ್ತು ಚುನಾವಣೆ : ವಿದ್ಯಾರ್ಥಿಗಳಿಗೆ ಚುನಾವಣಾ ಅರಿವು* 

ಜುಲೈ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜು.11: ಉತ್ತರ ಕೊಡಗಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು
(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣಾ ಅರಿವು ಮೂಡಿಸಲು ಹಾಗೂ
ವಿದ್ಯಾರ್ಥಿ ಸಂಘದ ರಚನೆಗಾಗಿ ಶಾಲಾ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ
ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.
ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ನಡೆಯಲಿರುವ ಸಾರ್ವಜನಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಸಂಸತ್ತು ಚುನಾವಣೆ ಭಾಗಬಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮತಗಟ್ಟೆಯ ಅಧ್ಯಕ್ಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.  ವಿದ್ಯಾರ್ಥಿ ಸಂಘದ ರೆಕ್ಟರ್ , ಸಾಕ್ಷರತಾ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ,
ಶಿಕ್ಷಕ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎಸ್.ಅನ್ಸಿಲಾ ರೇಖಾ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.
ಮಕ್ಕಳು ಇವಿಎಂ ಮತಯಂತ್ರದ ಮೂಲಕ ಮತ ಚಲಾಯಿಸಿ ಶಾಲಾ ಸಂಸತ್ತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದು ಎಲ್ಲರ ಗಮನ ಸೆಳೆಯಿತು.
ಶಾಲಾ ಸಂಸತ್ತು ರಚನೆ ಮಾಡಿ ಚುನಾವಣೆ ಪ್ರಕ್ರಿಯೆ ಅರಿತುಕೊಳ್ಳಲು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಉಪಕರಣಗಳ ಬಳಕೆಯ ಮೂಲಕ ಚುನಾವಣೆಗೆ ಮೆರುಗು ತರಲಾಯಿತು.
ನಂತರ ರಿಟರ್ನಿಂಗ್‌ ಆಫೀಸರ್‌ಗಳ ನೇಮಕ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಉಮೇದುವಾರಿಕೆ
ಸಲ್ಲಿಸಲು ಅವಕಾಶ ನೀಡಲಾಯಿತು.
ಚುನಾವಣೆಗೆ ಬೇಕಾದ ಸಿಬ್ಬಂದಿ ನೇಮಕ, ಪೊಲೀಸ್‌ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ ಹೀಗೆ ಪ್ರತಿಯೊಂದು ಪಾತ್ರಗಳನ್ನು ನಿರ್ವಹಿಸಲಾಗಿತ್ತು.
ಶಾಲಾ ಅಂಗಳದಲ್ಲಿ ರೂಪಿಸಿದ್ದ ಮತದಾನ ಕೇಂದ್ರದ ಮತಗಟ್ಟೆಯಲ್ಲಿ
ವಿದ್ಯಾರ್ಥಿಗಳು ಇ.ವಿ.ಎಂ.ಮಾದರಿಯ ಮತಯಂತ್ರದಲ್ಲಿ
ಮತ ಚಲಾಯಿಸಿದರು.
ಶಿಕ್ಷಕಿ ಎಸ್.ಎಂ.ಗೀತಾ ಮೊಬೈಲ್ ಆ್ಯಪ್ ಬಳಕೆ ಮಾಡಿಕೊಂಡು ಮತಯಂತ್ರ ಮತ್ತು ಕಂಟ್ರೋಲ್ ಯೂನಿಟ್ ಗಳನ್ನು ವಿನ್ಯಾಸಗೊಳಿಸಿದ್ದು ಗಮನ ಸೆಳೆಯಿತು.
ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳ ಮಾದರಿಯಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಕೆ, ಪರಿಶೀಲನೆ, ನಾಮಪತ್ರ ಹಿಂತೆಗೆತ, ಪ್ರಚಾರಕ್ಕೆ ಅವಕಾಶ, ಮತದಾನ, ಫಲಿತಾಂಶ ಘೋಷಣೆ ಹೀಗೆ ಎಲ್ಲ ಹಂತಗಳನ್ನು ಶಾಲಾ ಸಂಸತ್ತಿನ ಚುನಾವಣೆಯ ಪ್ರಕ್ರಿಯೆಯನ್ನು ರೂಪಿಸಲಾಗಿತ್ತು.
ಪ್ರಜಾಪ್ರಭುತ್ವ ಮಾದರಿಯಲ್ಲಿ ಯಾವ ರೀತಿ ಇವಿಎಂ ಬಳಸಿಮತ ಚಲಾವಣೆ ಮಾಡಲಾಗುತ್ತದೆ ? ಈ ಹಿಂದೆ ಬಳಸುತ್ತಿದ್ದ ಬ್ಯಾಲೆಟ್ ಪೇಪರ್ ಗಳನ್ನು ಬಳಸಿ ಯಾವ ರೀತಿ ಮತ ಚಲಾವಣೆ ಮಾಡಲಾಗುತ್ತಿತ್ತು ಎಂಬ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವರಿಸಿದರು.
ಚುನಾವಣೆ ಪ್ರಕ್ರಿಯೆ ಮುಕ್ತಾಯವಾದ ನಂತರ ತಕ್ಷಣದಲ್ಲೇ ವಿಜೇತಗೊಂಡ ವಿದ್ಯಾರ್ಥಿಗಳ ಹೆಸರನ್ನು ಪ್ರಕಟಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರ ರಚನೆಯ ಸಂದರ್ಭ ಮಡಿಕೇರಿ…

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026

*ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 

ಜೂನ್ 1, 2026

*ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*

ಜೂನ್ 1, 2026

*ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*

ಜೂನ್ 1, 2026

*ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*

ಜೂನ್ 1, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.