Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ರಿವರ್ ರ‍್ಯಾಪ್ಟಿಂಗ್ ನಿರ್ವಹಣಾ ಮತ್ತು ಮೇಲುಸ್ತುವಾರಿ ಸಮಿತಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ರಿವರ್ ರ‍್ಯಾಪ್ಟಿಂಗ್ ನಿರ್ವಹಣಾ ಮತ್ತು ಮೇಲುಸ್ತುವಾರಿ ಸಮಿತಿ ಸಭೆ*

ಜುಲೈ 11, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 : ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.
ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ದುಬಾರೆ, ಬರಪೊಳೆ, ಕುಮಾರಳ್ಳಿ, ಮಾಂದಲ್‍ಪಟ್ಟಿ, ಅಬ್ಬಿ ಜಲಪಾತ, ರಾಜಾಸೀಟು ಹೀಗೆ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಆಗಮಿಸಲಿದ್ದಾರೆ. ಪ್ರವಾಸಿಗರಿಗೆ ಯಾವುದೇ ರೀತಿಯ ಕಹಿ ಘಟನೆ ಉಂಟಾಗದಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಇಡೀ ಕೊಡಗು ಜಿಲ್ಲೆಗೆ ಕೆಟ್ಟ ಹೆಸರು ಬರಲಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಕ್ಕೆ ತೊಂದರೆಯಾಗಲಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯ, ವಿನಮ್ರತೆಯಿಂದ ನಡೆದುಕೊಳ್ಳಬೇಕು. ಇದರಿಂದ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಸಾಧ್ಯ. ಇದರಿಂದ ಉದ್ಯೋಗಗಳು ಹೆಚ್ಚಾಗಲಿದೆ ಎಂದು ತಿಳಿಸಿದರು.
ರಿವರ್ ರ್ಯಾಪ್ಟಿಂಗ್ ಸಂಬಂಧಿಸಿದಂತೆ ಪರವಾನಿಗೆ ನೀಡುವುದು, ಪರವಾನಿಗೆ ನವೀಕರಣ ಮಾಡುವುದು ಈ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ಮಾಡಲಾಗುವುದು. ರಿವರ್ ರ‍್ಯಾಪ್ಟಿಂಗ್ ಅನುಮತಿ ಪಡೆದಿರುವವರು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು. ಯಾವುದೇ ನಿಯಮವನ್ನು ಉಲ್ಲಂಘಿಸಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಪ್ರವಾಸಿ ಸ್ಥಳಗಳಲ್ಲಿ ಸುರಕ್ಷತೆ, ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಮತ್ತಿತರ ಮೂಲ ಸೌಲಭ್ಯಗಳು ಅತ್ಯಗತ್ಯವಾಗಿಬೇಕಿದೆ. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯಕ್ರಮ ರೂಪಿಸಲಿದೆ ಎಂದರು.
ರಿವರ್ ರ‍್ಯಾಪ್ಟಿಂಗ್ ಸಂಬಂಧಿಸಿದಂತೆ ಈಗಾಗಲೇ ನಿಗದಿ ಮಾಡಿರುವ ದರದಂತೆ ಮುಂದುವರೆಸಬೇಕು. ರಿವರ್ ರ‍್ಯಾಪ್ಟಿಂಗ್ ಹಾಗೂ ಪ್ರವಾಸಿ ಸ್ಥಳಗಳು ಸಂಬಂಧಿಸಿದಂತೆ ವೆಬ್‍ಸೈಟ್‍ನಲ್ಲಿ ದಾಖಲಿಸಿ ಮಾಹಿತಿ ದೊರೆಯುವಂತಾಗಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಇತ್ತೀಚೆಗೆ ಅಬ್ಬಿಜಲಪಾತ ಬಳಿ ಪ್ರವಾಸಿಗರ ಜೊತೆ ಅನುಚಿತವಾಗಿ ನಡೆದುಕೊಂಡಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿತ್ತು, ಇಂತಹ ಅಹಿತಕರ ಘಟನೆಗಳು ನಡೆಯಬಾರದು. ನಡೆದಲ್ಲಿ ಪೊಲೀಸ್ ಇಲಾಖೆ ನಿಯಮಾನುಸಾರ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.
ಪ್ರವಾಸಿಗರ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಬೇಕು. ಯಾವುದೇ ರೀತಿಯ ದುರ್ನಡತೆಯಿಂದ ನಡೆದುಕೊಳ್ಳಬಾರದು. ರೌಡಿಸಂ ಮಾಡುವುದು ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು.
ದುಬಾರೆಯ ರತೀಶ್ ಅವರು ಮಾತನಾಡಿ ರಿವರ್ ರ್ಯಾಪ್ಟಿಂಗ್‍ನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಿಕೊಂಡು ಹೋಗಲಾಗುತ್ತದೆ. 73 ರಿವರ್ ರ್ಯಾಪ್ಟ್ ಕಾರ್ಯ ಚಟುವಟಿಕೆಗಳು ನಡೆಸುತ್ತಿವೆ. ದುಬಾರೆಗೆ ವಾರಾಂತ್ಯದಲ್ಲಿ ಹೆಚ್ಚಿನ ಪ್ರವಾಸಿಗರು ಭೇಟಿ ನೀಡಲಿದ್ದು, ವಾಹನ ಪಾರ್ಕಿಂಗ್ ವ್ಯವಸ್ಥೆ ಆಗಬೇಕಿದೆ ಎಂದರು. ರತನ್ ಅವರು ಮಾತನಾಡಿ ಬರಪೊಳೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹೆಚ್ಚಿಸಬೇಕೆಂದು ಮನವಿ ಮಾಡಿದರು.
ರಿವರ್ ರ್ಯಾಪ್ಟಿಂಗ್ ನಡೆಸುವ ನಿಟ್ಟಿನಲ್ಲಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ. ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ(ಜೇತ್ನ) ಮುಖ್ಯ ಪ್ರಶಿಕ್ಷಕರಾದ ದಿನೇಶ್ ಅವರು ಹೇಳಿದರು.
ಜಲಸಾಹಸ ಕ್ರೀಡೆ, ಶಿಲಾರೋಹಣ, ಕ್ರೀಡಾರೋಹಣ ಹೀಗೆ ವಿವಿಧ ರೀತಿಯ ತರಬೇತಿಯನ್ನು ‘ಜೇತ್ನ’ ವತಿಯಿಂದ ನೀಡಲಾಗುತ್ತಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಬರಪೊಳೆಯಲ್ಲಿ ಜಲಸಾಹಸ ಕ್ರೀಡೆಯ ತರಬೇತಿ ನೀಡಲಾಗುವುದು ಎಂದು ಹೇಳಿದರು. ಹಾಗೆಯೇ ಬೋಟ್‍ಗಳ ಸುರಕ್ಷತಾ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದರು. ನಂಜರಾಯಪಟ್ಟಣ ಪಿಡಿಒ ಅವರು ದುಬಾರೆಯಲ್ಲಿ ತೂಗು ಸೇತುವೆ ನಿರ್ಮಾಣ ಮಾಡುವಂತಾಗಬೇಕು ಎಂದು ಕೋರಿದರು.
ಹೋಟೆಲ್, ರೆಸಾರ್ಟ್ ಅಸೋಷಿಯೇಷನ್ ಅವರ ಜೊತೆ ಚರ್ಚೆ :ಬಳಿಕ ಹೋಟೆಲ್, ರೆಸಾರ್ಟ್ ಅಸೋಷಿಯೇಷನ್ ಅವರ ಜೊತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ನೋಂದಣಿಯಾಗಿರುವ ಎಲ್ಲಾ ಹೋಂ ಸ್ಟೇ ರೆಸಾರ್ಟ್‍ಗಳ ಮಾಹಿತಿ ಒಂದೆಡೆ ವೆಬ್‍ಸೈಟ್‍ನಲ್ಲಿ ಲಭ್ಯವಾಗುವಂತಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಲಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ರೆಸಾರ್ಟ್‍ಗಳು ಅನಧಿಕೃತ ಚಟುವಟಿಕೆಯಲ್ಲಿ ನಡೆಯದಂತೆ ಗಮನಹರಿಸಬೇಕು. ಇಂತಹ ಘಟನೆಗಳು ಕಂಡು ಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಮಸ್ಯೆಗಳಿದ್ದಲ್ಲಿ ಪೊಲೀಸ್ ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ತಿಳಿಸಿದರು.
ಹೋಂ ಸ್ಟೇ ಅಸೋಷಿಯೇಷನ್‍ನ ಕಾರ್ಯದರ್ಶಿ ಮೋಂತಿ ಗಣೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ 200 ಕ್ಕೂ ಹೆಚ್ಚು ನೋಂದಾಯಿತ ಹೋಂ ಸ್ಟೇಗಳಿದ್ದು, ಹೋಂ ಸ್ಟೇ ನೋಂದಣಿ ಸರಳೀಕರಣ ಮಾಡಬೇಕು. ಇದರಿಂದ ಹೆಚ್ಚಿನ ಜನರು ನೋಂದಣಿ ಮಾಡಲು ಸಹಕಾರಿಯಾಗಲಿದೆ ಎಂದರು.
ಅಗತ್ಯ ಇರುವ ಕಡೆಗಳಲ್ಲಿ ‘ಪ್ರವಾಸಿ ಮಾಹಿತಿ ಕೇಂದ್ರ’ಗಳನ್ನು ತೆರೆಯುವಂತಾಗಬೇಕು. ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.
ಹೋಟೆಲ್ ಅಸೋಷಿಯೇಷನ್‍ನ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ಪ್ರವಾಸಿ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು. ವಾರಾಂತ್ಯದಲ್ಲಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಅಬಕಾರಿಯಿಂದ ಹೆಚ್ಚಿನ ಆದಾಯ ಬರುತ್ತಿದ್ದು, ಪ್ರವಾಸಿ ಸ್ಥಳಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಸಲಹೆ ಮಾಡಿದರು.
ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಅಂಬೆಕಲ್ಲು ನವೀನ್ ಅವರು ಮಾತನಾಡಿ ಪ್ರವಾಸಿಗರು ಎಲ್ಲೆಂದರಲ್ಲಿ ಅಡುಗೆ ಮಾಡುತ್ತಾರೆ. ಇದರಿಂದಾಗಿ ಅಡುಗೆ ಮಾಡಲು ಸ್ಥಳ ನಿಗದಿ ಮಾಡಬೇಕು ಎಂದು ಕೋರಿದರು.
ಕೊಡಗು ಬ್ರಾಂಡೆಡ್ ಹೆಸರಿನಲ್ಲಿ ಜೇನು, ವೈನ್, ಸಾಂಬಾರು ಪದಾರ್ಥಗಳು ನಕಲಿಯಾಗಿ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕು ಎಂದು ಸಲಹೆ ಮಾಡಿದರು.
ಸೋಮವಾರಪೇಟೆ ತಾಲ್ಲೂಕು ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಸಿ.ಕೆ.ರೋಹಿತ್ ಅವರು ಕೋಟೆಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಯಾವುದೇ ಸೂಚನಾ ಫಲಕ ಇಲ್ಲ. ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಅಳವಡಿಸುವಂತಾಗಬೇಕು ಎಂದು ಕೋರಿದರು.
ಪುಷ್ಪಗಿರಿ ಬೆಟ್ಟಕ್ಕೆ ತೂಗುಸೇತುವೆ ನಿರ್ಮಾಣ ಮಾಡಬೇಕು. ಮಲ್ಲಳ್ಳಿ ಜಲಪಾತದಲ್ಲಿ ರೂಪ್‍ವೇ ನಿರ್ಮಾಣ ಮಾಡಬೇಕು ಎಂದರು.
ನೋಂದಣಿಯಾಗಿರುವ ಹೋಂ ಸ್ಟೇಗಳ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ಅಳವಡಿಸಬೇಕು ಎಂದರು. ಸೋಮವಾರಪೇಟೆ ತಾಲ್ಳೂಕು ಹೋಂ ಸ್ಟೇ ಅಸೋಷಿಯೇಷನ್‍ನ ನಿಕಟಪೂರ್ವ ಅಧ್ಯಕ್ಷರಾದ ಮಲ್ಲೇಶ್, ಕಾರ್ಯದರ್ಶಿ ಅಭಿನಂದನ್, ಉಪಾಧ್ಯಕ್ಷರಾದ ಯೋಗೇಶ್, ಖಜಾಂಚಿ ಪ್ರೀತಂ, ಅಗ್ನಿ ಶಾಮಕ ಇಲಾಖೆಯ ಅಧಿಕಾರಿ ಚಂದನ್, ಪಿ.ಸಿ.ವಸಂತ, ಸಿ.ಎಸ್.ರತನ್, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕರಾದ ಜತೀನ್, ಕುಮಾರಧಾರದ ಪ್ರದೀಪ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.