Advertisement
5:33 PM Sunday 3-December 2023

*ಮಡಿಕೇರಿ : ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ*

12/07/2023

ಮಡಿಕೇರಿ ಜು.12  : ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24 ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 5 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು. ಎಂ.ಎಸ್ ಆಫೀಸ್‍ನಲ್ಲಿ ಪರಿಣಿತಿ ಇರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.42 ಸಾವಿರ ಗೌರವ ಧನ ನೀಡಲಾಗುತ್ತದೆ.
ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜುಲೈ, 25 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.