Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*
  • *ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*
  • *ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*
  • *ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*
  • *ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*
  • *ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*
  • *ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*
  • *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
  • *ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ*

ಜುಲೈ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.12 : ಕೊಡಗು ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಸಮೀಕ್ಷೆಯಲ್ಲಿ ಪತ್ತೆಯಾದ ಬಾಲ ಕಾರ್ಮಿಕರನ್ನು ಜಿಲ್ಲೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರಗಳಲ್ಲಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ ಹಾಗೂ ಮುಖ್ಯವಾಹಿನಿ ಶಾಲೆಗಳಲ್ಲಿ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಕಾಯ್ದೆಯಂತೆ ತಪಾಸಣೆ ಕೈಗೊಂಡ ವರದಿಯನ್ನು ಪ್ರತೀ ಮಾಹೆ ಒದಗಿಸುವಂತೆ ಕಾರ್ಮಿಕ ಅಧಿಕಾರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಬಾರದು. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನಿಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

‘ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ದೊರೆತಲ್ಲಿ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಮಕ್ಕಳು ಶಿಕ್ಷಣದಿಂದ ವಂಚಿತರಾದಲ್ಲಿ ಸಮಾಜದ ಅಭಿವೃದ್ಧಿಗೆ ಹಿನ್ನೆಡೆ ಎಂಬುದನ್ನು ಪ್ರತಿಯೊಬ್ಬರೂ ತಿಳಿಯಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.’

ಹೋಟೆಲ್, ಅಂಗಡಿ, ಕಾರ್ಖಾನೆ, ಕಲ್ಲುಕೋರೆ ಹೀಗೆ ಯಾವುದೇ ಕ್ಷೇತ್ರದಲ್ಲಿ ಬಾಲ ಕಾರ್ಮಿಕರು ಕಂಡು ಬರಬಾರದು. ಕಂಡುಬಂದಲ್ಲಿ ನಿಯಮಾನುಸಾರ ಕ್ರಮವಹಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದರು.

ಕಾರ್ಮಿಕ ಇಲಾಖೆ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಬೀದಿನಾಟಕ ಮೂಲಕ ಹೆಚ್ಚಿನ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ ಕೈಗೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ಕಳೆದ ಮೂರುವರೆ ತಿಂಗಳಲ್ಲಿ ಹೋಟೆಲ್, ಅಂಗಡಿ, ಕಾರ್ಖಾನೆ, ಕಲ್ಲುಕೋರೆ, ತೋಟ, ಸೇರಿದಂತೆ ಸುಮಾರು 5,077 ವಿವಿಧ ಸಂಸ್ಥೆಗಳಲ್ಲಿ ಸಮೀಕ್ಷಾ ಕಾರ್ಯ ಕೈಗೊಂಡು 8 ಸಂಸ್ಥೆಯಲ್ಲಿ 11 ಮಕ್ಕಳನ್ನು ಗುರುತಿಸಿ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ಕಳೆದ ವರ್ಷ 304 ಕಡೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿತ್ತು, ಇದರಲ್ಲಿ 10 ಪ್ರಕರಣ ದಾಖಲಿಸಿ 3 ಪ್ರಕರಣಕ್ಕೆ ಸುಮಾರು 44,000 ದಂಡವನ್ನು ನ್ಯಾಯಾಲಯ ಮೂಲಕ ವಿಧಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಅವರು ಮಾಹಿತಿ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದಂದು ಆಟೋಗಳಿಗೆ ಬ್ಯಾನರ್ ಕಟ್ಟಿ ಜಿಂಗಲ್ಸ್‍ಗಳ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ. ಬಾಲಕಾರ್ಮಿಕ ಪದ್ಧತಿ ದುಷ್ಪರಿಣಾಮ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ಮಾಹಿತಿ ಒಳಗೊಂಡ 2-3 ನಿಮಿಷದ ವಿಡಿಯೋ ಮಾಡಿಸಿ ಜಾಗೃತಿ ಮೂಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿರುವ ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಸದಸ್ಯರನ್ನು ಒಟ್ಟುಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳು ಕೆಲಸ ಮಾಡುತ್ತಿರುವುದು ಕಂಡು ಬಂದರೆ ಮಕ್ಕಳ ವಯಸ್ಸು, ವಾಸಿಸುವ ಸ್ಥಳ, ವಿದ್ಯಾಭ್ಯಾಸದ ಮಟ್ಟ ಇವುಗಳ ಮಾಹಿತಿಯನ್ನು ವಿಚಾರಿಸುವ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಚೈಲ್ಡ್‍ಲೈನ್-1098 ರ ಬಗ್ಗೆ ಬಾಲಕಾರ್ಮಿಕ ಪದ್ಧತಿ ಬಗ್ಗೆ ಕಿರುಚಿತ್ರಗಳನ್ನು ಸಿದ್ಧಪಡಿಸಿ ಪ್ರತಿ ಶಾಲೆಗಳಿಗೆ ಕಳುಹಿಸಿ ಇವುಗಳನ್ನು ಪ್ರತಿ ಶಾಲೆಗಳಲ್ಲಿ ಭಿತ್ತರಿಸುವ ಮೂಲಕ ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಸೆಸ್ಕ್ ಎಇಇ ದೇವಯ್ಯ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಘು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಕವಿತಾ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಕೆ.ಎನ್.ಲೀನಾ, ನಿಕಿಲ್‍ಚಂದ್ರ, ವಿಶೇಷ ಮಕ್ಕಳ ರಕ್ಷಣಾ ಘಟಕದ ಮಹೇಶ್, ಉಪ ವಿಭಾಗಾಧಿಕಾರಿ ಕಚೇರಿಯ ಶಿರಸ್ತೇದಾರರಾದ ಪ್ರವೀಣ್ ಕುಮಾರ್, ವಿಶೇಷ ಮಕ್ಕಳ ರಕ್ಷಣಾ ಪೊಲೀಸ್ ಘಟಕದ ನೋಡಲ್ ಅಧಿಕಾರಿ ಎಂ.ಬಿ.ಸುಮತಿ, ಮಕ್ಕಳ ಕಲ್ಯಾಣ ಸಮಿತಿಯ ಶಿರಾಜ್ ಅಹಮ್ಮದ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*

ಜೂನ್ 22, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*

ಜೂನ್ 22, 2026

*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*

ಜೂನ್ 22, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*

ಜೂನ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಜೂ.22 NEWS DESK :  ಬಸವಣ್ಣನವರ ವಚನಗಳು ಕೇವಲ ಓದು ಅಥವಾ ಉದ್ಯೋಗಕ್ಕಾಗಿ ಸೀಮಿತವಾಗದೆ, ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು…

*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*

ಜೂನ್ 22, 2026

*ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026

*ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*

ಜೂನ್ 22, 2026

*ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*

ಜೂನ್ 22, 2026

*ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*

ಜೂನ್ 22, 2026

*ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*

ಜೂನ್ 22, 2026

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 2026

*ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*

ಜೂನ್ 21, 2026

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.