ಮಡಿಕೇರಿ ಜು.12 : ಪ್ರಸಕ್ತ(2023) ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. www.awards.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ಕಚೇರಿಗೆ ನೀಡಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.08272 295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.








