Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅನ್ನಭಾಗ್ಯ ಯೋಜನೆ ಅನುಷ್ಠಾನ : ಬ್ಯಾಂಕ್ ಖಾತೆ ಖಾತರಿಪಡಿಸಲು ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅನ್ನಭಾಗ್ಯ ಯೋಜನೆ ಅನುಷ್ಠಾನ : ಬ್ಯಾಂಕ್ ಖಾತೆ ಖಾತರಿಪಡಿಸಲು ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚನೆ*

ಜುಲೈ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.15 : ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ 170 ರೂ.ನಂತೆ ‘ನೇರ ನಗದು ವರ್ಗಾವಣೆ’ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಲ್ಲಿ 12,930 ಮಂದಿಯ ಬ್ಯಾಂಕ್ ಖಾತೆ ಬಗ್ಗೆ ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಆದ್ಯತೆ ಮೇಲೆ ಮಾಹಿತಿ ಪಡೆದು ಯೋಜನೆ ಅನುಷ್ಠಾನಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುವ ಬಗ್ಗೆ 12,930 ಮಂದಿಯ ಬ್ಯಾಂಕ್ ಖಾತೆ ಪರಿಶೀಲನೆ ಸಂಬಂಧ ಹೋಬಳಿವಾರು ಮಾಹಿತಿ ಸಂಗ್ರಹಿಸಿ ಸರಿಪಡಿಸುವ ಕಾರ್ಯವು ಒಂದು ವಾರದೊಳಗೆ ಸಮರೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಸಂಬಂಧ ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ. ಬ್ಯಾಂಕ್ ಖಾತೆ ಪಟ್ಟಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1,01,660 ಬಿಪಿಎಲ್ ಕುಟುಂಬಗಳಿವೆ. 9,868 ಅಂತ್ಯೋದಯ ಯೋಜನೆ ಕುಟುಂಬಗಳಿವೆ. ಹಾಗೆಯೇ 37,141 ಎಪಿಎಲ್ ಕುಟುಂಬಗಳಿವೆ ಎಂದು ಕುಮುದಾ ಶರತ್ ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೆಎಸ್‍ಆರ್‍ಟಿಸಿ ಘಟಕ ಇದ್ದು, ಕುಶಾಲನಗರದಲ್ಲಿ ಮತ್ತೊಂದು ಘಟಕ ಆರಂಭಿಸುವ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.
ಹೊಸ ಬಸ್‍ಗಳ ಖರೀದಿ ಪ್ರಕ್ರಿಯೆ ನಡೆದಿದ್ದು, ಸದ್ಯದಲ್ಲೇ ಜಿಲ್ಲೆಗಳಿಗೆ ಹೊಸ ಬಸ್‍ಗಳು ಬರಲಿವೆ ಎಂದು ಸಾರಿಗೆ ಇಲಾಖೆಯ ಕಾರ್ಯದರ್ಶಿಯೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಕೆಎಸ್‍ಆರ್‍ಟಿಸಿ ಪುತ್ತೂರು ಘಟಕದ ವ್ಯವಸ್ಥಾಪಕರಾದ ಜಯಕರಶೆಟ್ಟಿ ಅವರು ಮಾಹಿತಿ ನೀಡಿ, ಕುಶಾಲನಗರದ ಬಸವನಹಳ್ಳಿ ಬಳಿ ಕೆಎಸ್‍ಆರ್‍ಟಿಸಿ ಘಟಕ ಆರಂಭಕ್ಕೆ 4 ಎಕರೆ ಜಾಗ ಕಾಯ್ದಿರಿಸಲಾಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕು ಕೇಂದ್ರದಲ್ಲಿ ಕೆಎಸ್‍ಆರ್‍ಟಿಸಿ ಘಟಕ ಆರಂಭಿಸುವ ಸಂಬಂಧ 4-5 ಎಕರೆ ಜಾಗ ಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಶಕ್ತಿ ಯೋಜನೆ ಜಾರಿಯಾದ ನಂತರ ಪ್ರತೀ ದಿನ ಪ್ರಯಾಣಿಸುವವರ ಸಂಖ್ಯೆ 24 ಸಾವಿರದಿಂದ 29 ಸಾವಿರಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.
2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ಕಲ್ಪಿಸುವಂತಾಗಬೇಕು. ನಮೂನೆ 50, 53, 94ಸಿ, 94ಸಿಸಿ ರಡಿ ಸಾಗುವಳಿ ಚೀಟಿಯನ್ನು ಎಷ್ಟು ಮಂದಿಗೆ ನೀಡಲಾಗಿದೆ. ಸಾಗುವಳಿ ಚೀಟಿ ನೀಡಿರುವುದಕ್ಕೆ ಆರ್‍ಟಿಸಿ ಆಗಿದೆಯೇ ಎಂದು ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಇದುವರೆಗೆ ಸಾಗುವಳಿ ಚೀಟಿ ನೀಡದಿದ್ದಲ್ಲಿ ಅಂತಹ ಪ್ರಕರಣಗಳನ್ನು ತಿರಸ್ಕøರಿಸಬೇಕು. ಈ ಸಂಬಂಧ ಒಂದು ವಾರದೊಳಗೆ ಮಾಹಿತಿ ಒದಗಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಪ್ರತೀ ತಿಂಗಳು ಮಾಹಿತಿ ಸಂಗ್ರಹಿಸಬೇಕು. ಜನನ ಮತ್ತು ಮರಣ ನೋಂದಣಿಯನ್ನು ನಿಖರವಾಗಿ ದಾಖಲಿಸುವಂತೆ ಸೂಚಿಸಿದರು.
ಪಿಂಚಣಿ ಪಡೆಯುವವರು ಯಾರಾದರೂ ನಿಧನ ಹೊಂದಿದಲ್ಲಿ ಡಿಲೀಟ್ ಮಾಡಬೇಕು. ಸೇರ್ಪಡೆ ಮಾಡುವವರ ಬಗ್ಗೆ ನಿಖರ ಮಾಹಿತಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಲೈನ್‍ಮನೆಯಲ್ಲಿ ವಾಸಿಸುವ ಕುಟುಂಬಗಳಿಗೆ ಹತ್ತಿರದಲ್ಲಿಯೇ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಬೇಕು. ಆ ನಿಟ್ಟಿನಲ್ಲಿ ಜಾಗ ಕಾಯ್ದಿರಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
ಮಳೆಗಾಲದಲ್ಲಿ ವಿದ್ಯುತ್ ಕಂಬಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಹಳೇ ವಿದ್ಯುತ್ ಕಂಬಗಳನ್ನು ಬದಲಿಸಬೇಕು ಎಂದು ಹೇಳಿದರು.
‘ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಯಾವುದೇ ಕಾರಣಕ್ಕೂ ದೂರುಗಳು ಬರದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.’
ಅಂಗನವಾಡಿ ಕಟ್ಟಡಗಳ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಳೆದ ವರ್ಷ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಪಡೆದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ವಿದ್ಯಾರ್ಥಿ ನಿಲಯಗಳಿಗೆ ಜಾಗ ಬೇಕಿದ್ದಲ್ಲಿ ಜಾಗ ಒದಗಿಸಬೇಕು. ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ತ್ವರಿತವಾಗಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಕಳೆದ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 544 ಮಿ.ಮೀ. ಸರಾಸರಿ ವಾಡಿಕೆ ಮಳೆಗೆ, 106 ಮಿ.ಮೀ. ಮಾತ್ರ ಮಳೆಯಾಗಿದೆ ಎಂದರು.
ಸಾಮಾಜಿಕ ಭದ್ರತಾ ಯೋಜನೆಯಡಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ವಿಕಲಚೇತನರ ವೇತನ, ಮನಸ್ವಿನಿ, ಮೈತ್ರಿ ಯೋಜನೆಯಡಿ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಕಾರ್ಯ ಆಗಬೇಕಿದ್ದು, ಈಗಾಗಲೇ 2,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ಅವರು ಮಾಹಿತಿ ನೀಡಿದರು.
ಭತ್ತ ಸಸಿಮಡಿ ಕಾರ್ಯ ನಡೆದಿದ್ದು, ಜುಲೈ ಅಂತ್ಯದವರೆಗೆ 2 ಅಥವಾ 3 ಬಾರಿ ಉತ್ತಮ ಮಳೆ ಆಗಬೇಕಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ವರ್ಣೀಶ್ ನೇಗಿ ಅವರು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಅನುಷ್ಠಾನ, ಅಂಬೇಡ್ಕರ್ ವಸತಿ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಜಿ.ಪಂ.ಎಂಜಿನಿಯರ್ ಸುರೇಶ್ ಕುಮಾರ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‍ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಸೆಸ್ಕ್ ಇಇ ಅನಿತಾ ಬಾಯಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಅಧಿಕಾರಿ ಎನ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಕಾರ್ಮಿಕ ಅಧಿಕಾರಿ ಹರ್ಷವರ್ಧನ, ತಹಶೀಲ್ದಾರರಾದ ಪ್ರಕಾಶ್, ಕಿರಣ್ ಗೌರಯ್ಯ, ಎಸ್.ಎನ್.ನರಗುಂದ, ಪ್ರಶಾಂತ್, ಪೌರಾಯುಕ್ತರಾದ ವಿಜಯ ಮಾಹಿತಿ ನೀಡಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.