Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಲಿನ ಹತಾಶೆಯಿಂದ ಬಿಜೆಪಿ ಮಿತ್ರ ಪಕ್ಷಗಳು ವಿದಾಯ ಕೂಟ ಆಯೋಜಿಸುತ್ತಿದೆ  : ಅಖಿಲೇಶ್ ಯಾದವ್ ವ್ಯಂಗ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಲಿನ ಹತಾಶೆಯಿಂದ ಬಿಜೆಪಿ ಮಿತ್ರ ಪಕ್ಷಗಳು ವಿದಾಯ ಕೂಟ ಆಯೋಜಿಸುತ್ತಿದೆ  : ಅಖಿಲೇಶ್ ಯಾದವ್ ವ್ಯಂಗ್ಯ

ಜುಲೈ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.19 :   ಕಾಂಗ್ರೆಸ್, ಸಮಾಜವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ಹೊಸ ಘಟ್ ಬಂಧನ್ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು ಸೋಲಿನ ಹತಾಶೆಯಿಂದ ವಿದಾಯದ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಿ ಮಹಾನ್ ಸೇನಾನಿಯ ಸೇನಾಜೀವನದ ಮಾಹಿತಿ ಪಡೆದ ಬಳಿಕ ಮಾಧ್ಯಮದವರೊಂದಿಗೆ ಅಖಿಲೇಷ್ ಯಾದವ್ ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಹವಾಮಾನದಂತೆ ಮೈತ್ರಿ ಕೂಟದ ಸಭೆಯ ವಾತಾವರಣವೂ ಬಹಳ ಉತ್ತಮವಾಗಿತ್ತು. ಲೋಕಸಭಾ ಚುನಾವಣೆಯನ್ನು ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಎದುರಿಸುತ್ತೇವೆ ಎಂದು ಅವರು ಹೇಳಿದರು. .ಮೈತ್ರಿಕೂಟದ ಸಭೆಯ ದಿನದಂದೇ ಬಿಜೆಪಿಯು ತನ್ನ ಮಿತ್ರ ಪಕ್ಷಗಳ ಸಭೆ ಕರೆದಿದ್ದು ಅವರಿಗೆ ಮೈತ್ರಿ ಕೂಟದ ಬಗ್ಗೆ ಬಿಜೆಪಿ ಮುಖಂಡರಿಗೆ ಪ್ರಾರಂಭವಾಗಿರುವ ಭಯಕ್ಕೆ ನಿದಶ೯ನವಾಗಿದೆ. ಬಿಜೆಪಿ ನೇತೖತ್ವದ ಪಕ್ಷಗಳ ಸಭೆ ವಿದಾಯ ಕೂಟದ ಸಭೆಯಾಗಲಿದೆ. ಇಲ್ಲಿಯವರೆಗೆ ಮೋಜುಮಸ್ತಿ ಅನುಭವಿಸಿದ್ದಾಯಿತು. ಇನ್ನು ಅಧಿಕಾರದಿಂದ ವಿದಾಯ ಹೇಳುವ ಕಾಲ ಬರುತ್ತಿದೆ. ಹೊಸ ಘಟ್ ಬಂಧನ್ ಭಾರತವನ್ನು ಹೊಸದಿಶೆಯತ್ತ ಸಾಗಿಸಲಿದೆ ಎಂದು ಅಖಿಲೇಶ್ ಯಾದವ್ ಆಶಾಭಾವನೆ ವ್ಯಕ್ತಪಡಿಸಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಬಡತನ, ಹಾಗೇ ಇದೆ. ದಿನಬಳಕೆಯ ವಸ್ತುಗಳ ದರ ಹೆಚ್ಚುತ್ತಲೇ ಇದೆ. ನೋಟು ಅಮಾನ್ಯಕರಣದ ನಂತರವೂ ದೇಶದಲ್ಲಿ ಭ್ರಷ್ಟಾಚಾರ ಕೊನೆಯಾಗಲಿಲ್ಲ ಎಂದರೆ ನೋಟು ಅಮಾನ್ಯಕರಣ ನಿಧಾ೯ರವೇ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದು ಎಂದು ಹೇಳಬೇಕಾಗುತ್ತದೆ. ನೋಟು ಅಮಾನ್ಯಕರಣವನ್ನು ಸಮಥಿ೯ಸುವ ಒಂದೇ ಒಂಂದು ಕಾರಣವನ್ನೂ ಈವರೆಗೂ ಬಿಜೆಪಿಯಿಂದ ನೀಡಲಾಗಲಿಲ್ಲ. ಕನಾ೯ಟಕದಲ್ಲಿ ಶೇ.40 ರಷ್ಟು ಕಮಿಷನ್ ಆರೋಪ ಎದುರಿಸುತ್ತಿದ್ದ ಬಿಜೆಪಿ ಅಧಿಕಾರ ಕಳೆದುಕೊಂಡಂತೆಯೇ ಕೇಂದ್ರದಲ್ಲಿ ಭ್ರಷ್ಟಾಚಾರಿಗಳಿಗೆ ಬೆಂಬಲ ನೀಡುತ್ತಾ ಬಂದಿರುವ ಬಿಜೆಪಿ ಸಕಾ೯ರ ಕೂಡ ಅಧಿಕಾರ ಕಳೆದುಕೊಳ್ಳಲಿದೆ ಎಂದು ಅಖಿಲೇಶ್ ಭವಿಷ್ಯ ನುಡಿದರು.

ಇಂಡಿಯಾ (ಐಎನ್ ಡಿಐಎ) ಎಂಬ ಹೊಸ ಹೆಸರಿನಲ್ಲಿ ಬಹಳಷ್ಟು ಅಥ೯ವಿದೆ. ಅಭಿವೃದ್ಧಿ, ಸಹಮತ, ಒಗ್ಗಟ್ಟಿನ ಪ್ರತೀಕವಾದಂತಿದೆ ಈ ಹೊಸ ಹೆಸರು ಎಂದು ವಿಶ್ಲೇಷಿಸಿದ ಅಖಿಲೇಷ್, ಇಂಡಿಯಾ ಎಂಬ ಹೆಸರಿನಿಂದ ಸಹಜವಾಗಿಯೇ ಬಿಜೆಪಿ ಆತಂಕಕ್ಕೊಳಗಾಗಿದೆ. ಇಂಡಿಯಾ ಹೆಸರು ತನ್ನದು ಎಂದು ಈವರೆಗೂ ನಮ್ಮನ್ನು ಹೆದರಿಸುತ್ತಿದ್ದ ಬಿಜೆಪಿ ಇದೀಗ ಮೈತ್ಪಿ ಪಕ್ಷಗಳು ಯಾವಾಗ ಇಂಡಿಯಾ ಎಂದು ಹೆಸರಿಟ್ಟಿತೋ ಆಗಲೇ ಗಲಿಬಿಲಿಗೊಳಗಾಗಿದೆ. ಮುಂದಿನ ದಿನಗಳಲ್ಲಿ ಇಂಡಿಯಾವನ್ನು ಪ್ರಬಲಗೊಳಿಸುತ್ತಾ ಭಾರತೀಯರ ಆಶೋತ್ತರಕ್ಕೆ ತಕ್ಕಂತೆ ದೇಶವನ್ನು ಬಿಜೆಪಿ ಹಿಡಿತದಿಂದ ದೂರಮಾಡಲಿದ್ದೇವೆ ಎಂದೂ ಹೇಳಿದರು.

ಭಾರತೀಯರು ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳಿಗೆ ವಿದಾಯ ಹೇಳುವ ದಿನವನ್ನು ಎದುರು ನೋಡುತ್ತಿದ್ದಾರೆ. ಬಿಜೆಪಿಯ ಸೋಲು ಖಚಿತವಾಗಿದೆ. ಮೈತ್ರಿ ಪಕ್ಷಗಳ ಒಗ್ಗಟ್ಟು ಇದಕ್ಕೆ ಕಾರಣವಾಗಲಿದೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.31 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಕರ್ನಾಟಕ…

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿ: ವಿವಿಧ ತಂಡಗಳಿಂದ ಭರ್ಜರಿ ಪ್ರದರ್ಶನ; ನ.1ರಂದು ಸಮಾರೋಪ

ಅಕ್ಟೋಬರ್ 31, 2026

ಸಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.