ಸುಂಟಿಕೊಪ್ಪ ಜು.23 : ಸುಂಟಿಕೊಪ್ಪ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಎನ್‌ಡಿಆರ್‌ಎಫ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ವಿಪತ್ತು ಸಂಬಂವಿಸಿದಾಗ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು.
ಪ್ರವಾಹ, ಭೂಕುಸಿತ, ನೆರೆ, ಕಟ್ಟಡ ಕುಸಿತ ಸಂಭವಿಸಿದಾಗ ಪ್ರಾಣಹಾನಿ ಅನಾಹುತ ತಪ್ಪಿಸಲು ಎನ್‌ಡಿಆರ್‌ಎಫ್ ತಂಡ ಕಾಯೋನ್ಮುಖವಾಗುತ್ತದೆ. ವಿದ್ಯಾರ್ಥಿಗಳು ಆಟವಾಡುವಾಗ ಗಾಯವಾದರೆ ಪ್ರಥಮ ಚಿಕಿತ್ಸೆ ನೀಡುವುದು ಹೇಗೆ ಎನ್ನುವ ಬಗ್ಗೆ ಎನ್‌ಡಿಆರ್‌ಎಫ್ ನ ವಿಜಯವಾಡ ತಂಡದ ಅಧಿಕಾರಿ ಶಾಂತಿಲಾಯ್ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.
ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್‌ಖಾನ್, ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ಬಾಲಕೃಷ್ಣ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಗ್ರಾ.ಪಂ ಮಾಜಿ ಸದಸ್ಯೆ ರಹೆನಾ ಸುಲ್ತಾನ್, ಪ್ರೌಢಶಾಲೆಯ ಶಿಕ್ಷಕ ಪ್ರಕಾಶ್, ಸಹ ಶಿಕ್ಷಕ, ಶಿಕ್ಷಕಿಯರು ಹಾಗೂ ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳು ಇದ್ದರು.









