ಮಡಿಕೇರಿ ಜು.24 : ಕೊಡಗು ಜಿ.ಪಂ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ವಿರಾಜಪೇಟೆ ಅನದಾನಿತ ನೌಕರರ ಸಂಘದ ಸಂಯುಕ್ತಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆ, ಶಿಕ್ಷಕರು ಮತ್ತು ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಮತ್ತು ಶೈಕ್ಷಣಿಕ ಕಾರ್ಯಾಗಾರ ನಡೆಯಿತು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಎಸ್ಎಸ್ಎಲ್ಸಿಯಲ್ಲಿ ಶೇ.100ರಷ್ಟು ಅಂಕ ಪಡೆಯಲು ಕಾರಣರಾದ ಶಿಕ್ಷಕರನ್ನು ಹಾಗೂ ಉತ್ತಮ ಅಂಕ ಪಡೆದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಿದರು.
















