Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೆಕ್ಕಿಲ್ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ  : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೆಕ್ಕಿಲ್ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ  : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ*

ಜುಲೈ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಅರಂತೋಡು ಜು.25 : ಜಾತ್ಯತೀತ ತತ್ವ ಭಾಷೆ ಸಂಸ್ಕೃತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕೃತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವ ಅಹಮ್ಮದ್ ದೇವರ ಕೋವಿಲ್ ಹೇಳಿದ್ದಾರೆ. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್ ಹಾಜಿ ಅವರ 50ನೇ  ಪುಣ್ಯಸ್ಮರಣೆ ಕಾರ್ಯಕ್ರಮ ಮತ್ತು ಶೈಕ್ಷಣಿಕ  ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತೆಕ್ಕಿಲ್ ಮೊಹಮ್ಮದ್ ಹಾಜಿ ಅವರು ಅಗಲಿ 50 ವರ್ಷಗಳು ಸಂದರು ಅವರನ್ನು ಎಲ್ಲರು ನೆನಪಿಸಿ ಗೌರವಿಸುವುದು ಅವರಿಗೆ ಈ ಸಮಾಜ ನೀಡುವ ಗೌರವಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆಯನ್ನು ಟಿ.ಎಂ ಶಹೀದ್ ನೇತೃತ್ವದಲ್ಲಿ ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಜಾತಿ, ಧರ್ಮ,  ಭೇದವಿಲ್ಲದೆ ಶಿಕ್ಷಣ ಆರೋಗ್ಯ ಸಾಮಾಜಿಕ ಸೇವೆ ನೀಡುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು  ಹೇಳಿದರು.

ಶಾಸಕಿ ಭಾಗಿರಥಿ ಮುರುಳ್ಯ ಮಾತನಾಡಿ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮತ್ತಷ್ಟು ಸೇವಾಕಾರ್ಯ ನಡೆಸಲು ಸಾಧ್ಯವಾಗಲಿ ಎಂದು ಶುಭ ಹಾರೈಸಿದರು.

ತೆಕ್ಕಿಲ್ ಮೊಹಮ್ಮದ್ ಹಾಜಿಯ  ಅನುಸ್ಮರಣಾ ಭಾಷಣ ಮಾಡಿದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್ ಗಂಗಾಧರ ಮಾತನಾಡಿ, ಮೊಹಮ್ಮದ್ ಹಾಜಿ ಅವರು ಕೃಷಿ ಉಧ್ಯಮ ನಡೆಸಿ ಯಶಸ್ವಿಯಾಗಿರುವುದರ ಜೊತೆಗೆ ಇಲ್ಲಿ ಸಾಮಾಜಿಕ, ಧಾರ್ಮಿಕ ನಾಯಕರಾಗಿ ಬೆಳೆದಿದ್ದರು. ಕೊಡುಗೈದಾನಿಯಾಗಿ, ಶಿಕ್ಷಣ, ಧಾರ್ಮಿಕ, ಸಾಮಾಜಿಕ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಗೆ ಆಯ್ಕೆಯಾದ ಸ್ಪೀಕರ್ ಖಾದರ್  ತೆಕ್ಕಿಲ್ ಗೆ ಆಗಮಿಸಿ ತುರ್ತು ಕಾರ್ಯಕ್ರಮದ ನಿಮಿತ್ತ  ನಿರ್ಗಮಿಸಿದರು. ಸ್ಪೀಕರ್ ಯು.ಟಿ.ಖಾದರ್ ಅವರ ಅಭಿನಂದನಾ ಭಾಷಣ ಮಾಡಿದ ಎಂ.ಬಿ. ಪೌಂಡೇಶನ್ ಅಧ್ಯಕ್ಷ ಎಂ.ಬಿ ಸದಾಶಿವ ಮಾತನಾಡಿ, ಸ್ಪೀಕರ್ ಆಗಿ ಯು.ಟಿ ಖಾದರ್ ಅವರು ಸದನಕ್ಕೆ ಗೌರವ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರ ಜೊತೆ ಬೆರೆಯುವ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಸುವ ಗುಣ ಅವರಿಗಿದೆ ಎಂದರು.

ತಾಲೂಕಿನ ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಸಾಧಕ್ ವಿಧ್ಯಾರ್ಥಿಗಳನ್ನು ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಮ್ ಭಟ್ ಗೌರವಿಸಿದರು. ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದರು.  ಸುಳ್ಯ ತಹಶೀಲ್ದಾರ್ ಮಂಜುನಾಥ್ ಸಂಪಾಜೆ ಸಂತ ಪ್ರಾನ್ಸಿಸ್ ಚರ್ಚ್ ನ ಧರ್ಮಗುರುಗಳಾದ ಫಾ. ಪೌಲ್ ಕ್ರಾಸ್ತ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೇಸ್ ನ ಅಧ್ಯಕ್ಷ ಪಿ.ಸಿ.ಜಯರಾಮ, ಇಸಾಕ್ ಸಾಹೇಬ್ ಪಾಜಪಳ್ಳ, ಕೆ.ಎಂ ಮುಸ್ತಫ, ಸಂಪಾಜೆ ಗ್ರಾ.ಪಂ ಅಧ್ಯಕ್ಷ ಜಿ.ಕೆ. ಹಮೀದ್, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ನಿವ್ರತ್ತ ಮುಖ್ಯೋಪಾಧ್ಯಾಯ ದಾಮೋದರ್ ಮಾಸ್ತರ್, ಉದ್ಯಮಿ ಮೊಯಿದ್ದೀನ್, ಪ್ರಮುಖರಾದ ಸಮದ್, ಸದಾನಂದ ಮಾವಜಿ, ಕೆ.ಟಿ. ವಿಶ್ವನಾಥ, ಕೆ.ಆರ್ ಜಗದೀಶ್ ರೈ, ಜಿ.ಉಮ್ಮರ್ ಮೂಸನ್ ಹಾಜಿ ತೆಕ್ಕಿಲ್ , ಶರೀಫ್ ಕಂಠಿ, ಮೂಸಾ ಪೈಬೆಂಚಾಲ್, ಸಿದ್ದೀಕ್ ಕೊಕ್ಕೊ, ಟಿ.ಎಂ ಶಮೀರ್ ತೆಕ್ಕಿಲ್, ಟಿ.ಎಂ.ಶಾಝ್ ತೆಕ್ಕಿಲ್, ಟಿ.ಎಂ ಜಾವೇದ್ ತೆಕ್ಕಿಲ್, ಉನೈಸ್ ಪೆರಾಜೆ, ತೆಕ್ಕಿಲ್ ಶಾಲಾ ಮುಖ್ಯೋಪಾಧ್ಯಾಯ ಸಂಪತ್, ಸಾಧಿಕ್ ಮಾಸ್ತರ್, ತಾಜ್ ಮೊಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು. ತೆಕ್ಕಿಲ್ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿದರು. ನೌಫಲ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.