Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಮಳೆ ಇಳಿಮುಖವಾದರೂ ತಗ್ಗದ ಪ್ರವಾಹ : ಹಲವೆಡೆ ಗಾಳಿ, ಪ್ರವಾಹದಿಂದ ಹಾನಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಮಳೆ ಇಳಿಮುಖವಾದರೂ ತಗ್ಗದ ಪ್ರವಾಹ : ಹಲವೆಡೆ ಗಾಳಿ, ಪ್ರವಾಹದಿಂದ ಹಾನಿ

ಜುಲೈ 25, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.25 : ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೆ ನದಿ ನೀರಿನ ಪ್ರವಾಹ ತಗ್ಗದೆ ಇರುವುದರಿಂದ ಜನರ ಜೀವನ ಸಹಜ ಸ್ಥಿತಿಗೆ ಮರಳಿಲ್ಲ. ಗಾಳಿ ಮತ್ತು ಪ್ರವಾಹದಿಂದಾಗಿ ಹಲವೆಡೆ ಹಾನಿ ಸಂಭವಿಸಿದ್ದು, ಹಲವು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ.
ದಾಖಲೆಯ ಮಳೆಯಾಗಿದ್ದ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಶ್ರೀಭಗಂಡೇಶ್ವರ ದೇವಾಲಯವನ್ನು ಆವರಿಸಿದ್ದ ಪ್ರವಾಹದ ನೀರು ತಗ್ಗಿದ್ದು, ಜನರು ಆತಂಕದಿಂದ ಹೊರ ಬಂದಿದ್ದಾರೆ. ಆದರೆ ಸುತ್ತಮುತ್ತಲ ಗ್ರಾಮಗಳ ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿವೆ.
ಮಡಿಕೇರಿ ನಗರದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಸಾಧಾರಣ ಮಳೆ, ಮಂಜು ಮತ್ತು ಚಳಿ ಗಾಳಿಯ ವಾತಾವರಣವಿದೆ. ಹಾರಂಗಿ ಜಲಾಶಯದಿಂದ ಬಿಟ್ಟ ನೀರು ಕುಶಾಲನಗರ ಪಟ್ಟಣದ ಸಾಯಿ ಬಡಾವಣೆ ಮತ್ತು ಕುವೆಂಪು ಬಡಾವಣೆಗೆ ನುಗ್ಗಿದ್ದು, ಇಲ್ಲಿನ ನಿವಾಸಿಗಳು ಕಣ್ಣೀರು ಹಾಕುತ್ತಿದ್ದಾರೆ. ನೀರಿನಿಂದಾಗಿ ವಸ್ತುಗಳಿಗೆ ಹಾನಿಯಾಗಿದ್ದು, ಪ್ರವಾಹಪೀಡಿತ ಪ್ರದೇಶದಲ್ಲಿ ಲೇಔಟ್ ಮಾಡಲು ಆಡಳಿತ ವ್ಯವಸ್ಥೆ ಯಾಕೆ ಅವಕಾಶ ನೀಡಿತು ಎಂದು ಮನೆ ಮಾಲೀಕರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಪೋಕ್ಲು  ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಮಳೆಯ ತೀವ್ರತೆ ಹೆಚ್ಚಾದ ಪರಿಣಾಮ ನಾಪೋಕ್ಲು ನಿವಾಸಿ ಅಜ್ಜೇಟಿರ ಬೋಪಣ್ಣ ಎಂಬುವರಿಗೆ ಸೇರಿದ ಅಂಗಡಿ ಮಳಿಗೆಗಳ ಮೇಲೆ ಪಕ್ಕದಲ್ಲಿದ್ದ ತಡೆಗೋಡೆ ಕುಸಿದುಬಿದ್ದು ನಷ್ಟ ಸಂಭವಿಸಿದೆ. ಸೋಮವಾರ ರಾತ್ರಿ ಅಂಗಡಿ ಮಳಿಗೆ ಮೇಲೆ ತಡೆಗೋಡೆ ಕುಸಿದಿದ್ದು ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಕಾರಿಗೂ ಹಾನಿಯಾಗಿದೆ. ಅಂದಾಜು 10 ಲಕ್ಷ ರೂ ಹಾನಿ ಸಂಭವಿಸಿದ್ದು ಸೂಕ್ತ ಪರಿಹಾರ ನೀಡುವಂತೆ ಮಾಲೀಕ ಅಜ್ಜೇಟಿರ ಬೋಪಣ್ಣ, ಸ್ಥಳೀಯರಾದ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ವಿಶು ಪೂವಯ್ಯ ಆಗ್ರಹಿಸಿದ್ದಾರೆ.
ಸಮೀಪದ ಬಲಮುರಿ ಗ್ರಾಮದಲ್ಲಿ ಬಾರಿ ಗಾಳಿ ಮಳೆಗೆ ಗ್ರಾಮದ ನಿವಾಸಿ ಈರ ಎಂಬುವವರ ವಾಸದ ಮನೆಯ ಮೇಲ್ಚಾವಣಿಯ ಶೀಟ್ ಗಳು ಹಾರಿಹೋಗಿದ್ದು ನಷ್ಟ ಉಂಟಾಗಿದೆ.
ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕೆ.ಎಸ್. ಪೂವಣ್ಣ ಎಂಬುವವರ ಮನೆಯ ಮೇಲ್ಚಾವಣಿಯ ಹೆಂಚು ಹಾಗೂ ಶೀಟ್ ಗಳು ಗಾಳಿ ಮಳೆಗೆ ಹಾರಿಹೋಗಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.
ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗೆ ಅಮೃತ, ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದರು.
ಸೋಮವಾರಪೇಟೆಯ ಬೇಳೂರು ಗ್ರಾ.ಪಂ ವ್ಯಾಪ್ತಿಯ ಬಳಗುಂದ ಗ್ರಾಮದ ಅಶ್ವಿನಿ, ಸುರೇಶ್ ಹಾಗೂ ಗಂಗು ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ತಹಶೀಲ್ದಾರ್ ಎಸ್.ಎನ್. ನರಗುಂದ, ಪಿಡಿಒ, ಕಂದಾಯ ಪರಿವೀಕ್ಷಕರೊಂದಿಗೆ ಸ್ಥಳ ಪರಿಶೀಲಿಸಿದರು.
ವಿರಾಜಪೇಟೆ ತಾಲ್ಲೂಕಿನ ತೋರ ಗ್ರಾಮಕ್ಕೆ ಕಂದಾಯ ಮತ್ತು ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿದರು. ಮಳೆಯಿಂದ ಸಂಭವಿಸಬಹುದಾದ ಅನಾಹುತದ ಕುರಿತು ನಿವಾಸಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ನೀಡಿದರು.
ಕುಶಾಲನಗರ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ಮನೆಗಳು ಮತ್ತು ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.
ಭಾಗಮಂಡಲ ಹೋಬಳಿ ಬೇಂಗೂರು ಚೇರಂಬಾಣೆ ವ್ಯಾಪ್ತಿಯ ದೋಣಿ ಕಡ್ ಎಂಬಲ್ಲಿ ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದ್ದು, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನಿರ್ದೇಶನದಂತೆ ಅಗ್ನಿಶಾಮಕ ಠಾಣಾಧಿಕಾರಿ ಜಿಲ್ಲಾ ಅಗ್ನಿಶಾಮಕ ಘಟಕದ ಸಹಕಾರದೊಂದಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ಫೈಬರ್ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ.
ನಾಪೋಕ್ಲು  ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಸಮೀಪದ ಬಲಮುರಿ ಹಾಗೂ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾಗಿದೆ.
ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕೆ.ಎಸ್.ಪೂವಣ್ಣ ಎಂಬುವವರ ಮನೆಯ ಮೇಲ್ಚಾವಣಿಯ ಹೆಂಚು ಹಾಗೂ ಶೀಟ್ ಗಳು ಬಾರಿ ಗಾಳಿ ಮಳೆಗೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಬಲಮುರಿ ಗ್ರಾಮದ ನಿವಾಸಿ ಈರ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್‍ಗಳು ಗಾಳಿ ಮಳೆಗೆ ಹಾರಿ ಹೋಗಿದ್ದು, ನಷ್ಟ ಉಂಟಾಗಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮೂರ್ನಾಡು ನಾಪೋಕ್ಲು, ಚೆರಿಯ ಪರಂಬು-ನಾಪೋಕ್ಲು , ಭಾಗಮಂಡಲ-ನಾಪೋಕ್ಲು ನಡುವಿನ ಸಂಪರ್ಕ ಕಡಿತಗೊಂಡಿದೆ. ಮಳೆ ಗಾಳಿಯಿಂದಾಗಿ ವಿವಿಧಡೆ ಮರಗಳು ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ಮಳೆ ಬಿರುಸಿನಿಂದ ಸುರಿಯುತ್ತಿದ್ದು, ಜೀವ ನದಿ ಕಾವೇರಿ ಪ್ರವಾಹ ತುಂಬಿ ಬಹುತೇಕ ಭಾಗಗಳಲ್ಲಿ ಹಳ್ಳ, ಕೊಳ್ಳಗಳು ಭರ್ತಿಯಾಗಿದೆ. ಕಾವೇರಿ ನದಿತೀರದ ಹಲವು ಗದ್ದೆಗಳು ಜಲಾವೃತವಾಗಿವೆ.
ನಾಪೋಕ್ಲು – ಕೊಟ್ಟಮುಡಿ ಮಡಿಕೇರಿ ರಸ್ತೆಯಲ್ಲಿ ಕಾವೇರಿ ನದಿ ಪ್ರವಾಹ ಬಂದು ಸಂಚಾರ ಸ್ಥಗಿತಗೊಂಡಿದೆ. ಚೆರಿಯ ಪರಂಬು ಕಲ್ಲುಮೊಟ್ಟೆ ರಸ್ತೆಯಲ್ಲಿ ಪ್ರವಾಹದ ಮಟ್ಟ ಹೆಚ್ಚಳವಾಗಿ ಮನೆಗಳಿಗೆ ನೀರು ನುಗ್ಗುತ್ತಿದೆ. ಚೆರಿಯಪರಂಬು ಗ್ರಾಮದ ಹಲವು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಮಂಗಳವಾರವು ವರುಣನ ಆರ್ಭಟ ಮುಂದುವರೆದಿದ್ದು, ಪ್ರವಾಹದ ಮಟ್ಟ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಚೆರಿಯಪರಂಬು ಕಾವೇರಿ ನದಿ ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಸ್ಥರು ಕತ್ತಲೆಯಲ್ಲಿ ಕಾಲ ಕಳೆಯುವಂತ್ತಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.1 : ಮಡಿಕೇರಿ ನಗರದ ಓಂಕಾರ್ ಆಟೋ ಸ್ನೇಹಿತರ ಬಳಗದ ವತಿಯಿಂದ 71 ನೇ ಕನ್ನಡ…

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 2026

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.