Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊಸಳ್ಳಿಯಲ್ಲಿ ಗಮನ ಸೆಳೆದ ತಾಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೊಸಳ್ಳಿಯಲ್ಲಿ ಗಮನ ಸೆಳೆದ ತಾಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಜುಲೈ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.25 : ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಹೊಸಳ್ಳಿಯ ಕುಶಾಲಪ್ಪ ಅವರ ಗದ್ದೆಯಲ್ಲಿ ತಾಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ಒಕ್ಕಲುತನವೇ ಪ್ರಮುಖವಾಗಿರುವ ಒಕ್ಕಲಿಗ ಸಮುದಾಯ ನಾಡಿಗೆ ಅನ್ನ ನೀಡುವ ಅನ್ನದಾತನಿದ್ದಂತೆ. ಸಮುದಾಯ ಬಾಂಧವರು ಕೇವಲ ಕೃಷಿಯಲ್ಲಿ ಮಾತ್ರ ತೊಡಗಿಸಿಕೊಳ್ಳದೇ ಇತರ ಕ್ಷೇತ್ರಗಳತ್ತಲೂ ಗಮನಹರಿಸುತ್ತಿದ್ದಾರೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮುದಾಯ ಮುಂದೆ ಬರಬೇಕಿದೆ ಎಂದರು.
ಕೆಸರು ಗದ್ದೆ ಕ್ರೀಡಾಕೂಟಗಳು ಪರಸ್ಪರ ಸಾಮರಸ್ಯ ವೃದ್ಧಿಗೆ ಸಹಕಾರಿಯಾಗಿವೆ. ಮಕ್ಕಳು ಮಹಿಳೆಯರು, ವೃದ್ದರಾದಿಯಾಗಿ ಎಲ್ಲಾ ವಯೋಮಾನದ ಮಂದಿ ಕೆಸರು ಗದ್ದೆಯ ಕ್ರೀಡಾಕೂಟದಲ್ಲಿ ಒಂದುಗೂಡುವುದರಿಂದ ನವ ಚೈತನ್ಯದೊಂದಿಗೆ ದೈಹಿಕ ಕ್ಷಮತೆಯನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಗೌಡ ಅವರುಗಳು ಭಾಗವಹಿಸಿದ್ದರು. ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ವಹಿಸಿದ್ದರು. ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಉದ್ಯಮಿ ಅರುಣ್ ಕೊತ್ನಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಾಲಿಬಾಲ್ ಪಂದ್ಯಾಟದಲ್ಲಿ ಕೂಗೂರು ಪಂಚಲಿಂಗೇಶ್ವರ ಯುವಕ ಸಂಘ ಪ್ರಥಮ, ಮದಲಾಪುರ ಕಲ್ಪವೃಕ್ಷ ಯುವಕ ಸಂಘ ದ್ವಿತೀಯ, ಥ್ರೋಬಾಲ್‍ನಲ್ಲಿ ಶಾಂತಳ್ಳಿಯಲ್ಲಿ ಭಾಗ್ಯ ಫ್ರೆಂಡ್ಸ್ ಪ್ರಥಮ, ನೇಗಳ್ಳೆಯ ವೀರಭದ್ರೇಶ್ವರ ಯುವತಿ ಮಂಡಳಿ ದ್ವಿತೀಯ ಸ್ಥಾನ ಪಡೆಯಿತು.
ಪುರುಷರ ವಿಭಾಗದ ಹಗ್ಗಜಗ್ಗಾಟದಲ್ಲಿ ನೇಗಳ್ಳೆ ತಂಡ ಪ್ರಥಮ, ನೇರಳೆ ತಂಡ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ನೇಗಳ್ಳೆ ಪ್ರಥಮ ಹಾಗೂ ಆಡಿನಾಡೂರು ದ್ವಿತೀಯ ಸ್ಥಾನ ಪಡೆಯಿತು. ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ರವೀಶ್ ಪ್ರಥಮ, ಅರೆಯೂರು ರಘು ದ್ವಿತೀಯ, ದಂಪತಿ ಓಟದಲ್ಲಿ ಅಬ್ಬೂರುಕಟ್ಟೆ ಸಂಭ್ರಮ್-ಭಾರ್ಗವಿ ಪ್ರಥಮ, ಮೋರಿಕಲ್ಲು ದೀಕ್ಷಿತ್-ನಿಶಾ ದ್ವಿತೀಯ, ಪಾಸಿಂಗ್‍ದ ಬಾಲ್‍ನಲ್ಲಿ ಚಿಕ್ಕಬ್ಬೂರು ವಾಣಿ ಪ್ರಥಮ, ಮೋರಿಕಲ್ಲಿ ಜ್ಯೋತಿ ದ್ವಿತೀಯ, ಪಾಸಿಂಗ್ ದ ಬಾಟಲ್‍ನಲ್ಲಿ ಪವನ್ ನೇಗಳ್ಳೆ ಪ್ರಥಮ ಸ್ಥಾನ ಪಡೆದರು.
ಇದರೊಂದಿಗೆ ಒಂದರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ, ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಗದ್ದೆ ಓಟ ಆಯೋಜಿಸಿ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*

ಸೆಪ್ಟೆಂಬರ್ 2, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು…

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.