ಮಡಿಕೇರಿ ಜು.27 : ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಪ್ರವಾಹದ ಪರಿಸ್ಥಿತಿಯಿಂದ ಕಾಫಿ ತೋಟಗಳು ಹಾನಿಗೀಡಾಗಿವೆ.
ಕಾಫಿಗೆ ಕೊಳೆ ರೋಗ ತಗುಲಿದ್ದು, ಕಾಫಿ ಉದುರುತ್ತಿದೆ, ರೋಬಸ್ಟಾ ಕಾಫಿಗೆ ಹೆಚ್ಚು ಹಾನಿಯಾಗಿದೆ. ಬೆಳೆಗಾರರು ನಷ್ಟದ ಆತಂಕವನ್ನು ಎದುರಿಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಮನು ಸೋಮಯ್ಯ ಒತ್ತಾಯಿಸಿದ್ದಾರೆ.
ರೈತ ಸಂಘ ನಡೆಸಿದ ಸಮೀಕ್ಷೆ ಪ್ರಕಾರ ಶೇ.50 ರಷ್ಟು ಬೆಳೆ ನಷ್ಟವಾಗಿದೆ. ಜಿಲ್ಲಾಡಳಿತ ತಕ್ಷಣ ಬೆಳೆಹಾನಿ ಸಮೀಕ್ಷೆಗೆ ಆದೇಶಿಸಬೇಕು ಮತ್ತು ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮೂಲಕ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.









