Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*
  • *ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*
  • *ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*
  • *ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
  • *ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*
  • *ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕುಶಾಲನಗರದಲ್ಲಿ ಆರೋಗ್ಯ ಶಿಕ್ಷಣ ಕುರಿತು ತರಬೇತಿ ಕಾರ್ಯಾಗಾರ” : ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತೆ ಅಗತ್ಯ : ಡಾ ಶ್ರೀನಿವಾಸ್ *
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಕುಶಾಲನಗರದಲ್ಲಿ ಆರೋಗ್ಯ ಶಿಕ್ಷಣ ಕುರಿತು ತರಬೇತಿ ಕಾರ್ಯಾಗಾರ” : ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತೆ ಅಗತ್ಯ : ಡಾ ಶ್ರೀನಿವಾಸ್ *

ಜುಲೈ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜು.28 : ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವ ಮೂಲಕ ಉತ್ತಮ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು
ಎಂದು ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ|ಬಿ.ಎಲ್. ಶ್ರೀನಿವಾಸ್
ಹೇಳಿದರು.
ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರಾಷ್ಟ್ರೀಯ ಮಲೇರಿಯಾ ಮಾಸಾಚರಣೆ : 2022 ರ ಅಂಗವಾಗಿ ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಒಂದು ದಿನದ ಕಾರ್ಯಾಗಾರದ
ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ತಡೆಗಟ್ಟುವ ಕುರಿತು ಮಾಹಿತಿ ನೀಡಿದ ಅವರು, ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು ಎಂದರು.
“ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ” ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಸಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಮಲೇರಿಯಾ ನಿವಾರಣೆಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ವಿಧಾನಗಳೇ ನಮ್ಮ ಅಸ್ತ್ರವಾಗಬೇಕು ಡಾ.ಶ್ರೀನಿವಾಸ್ ಹೇಳಿದರು.
ಸಾಂಕ್ರಾಮಿಕ ರೋಗಗಳ ಹರಡುವಿಕೆ, ಸೊಳ್ಳೆಗಳ ಉತ್ಪತ್ತಿ ಮತ್ತು ಅವುಗಳ ನಿರ್ಮೂಲನೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ನಿಯಂತ್ರಣ ಕ್ರಮ ಕೈಗೊಳ್ಳಬೇಕು ಎಂದು ಡಾ ಶ್ರೀನಿವಾಸ್ ಹೇಳಿದರು.
ಸೊಳ್ಳೆಗಳು ಉತ್ಪತ್ತಿಯಾಗುವ ಆಶ್ರಿತ ತಾಣಗಳನ್ನು ನಾಶಪಡಿಸಬೇಕು.
ಸೊಳ್ಳೆಗಳಿಂದ ಹರಡುವ ಡೆಂಗಿ, ಮಲೇರಿಯಾ, ಚಿಕುನ್ ಗುನ್ಯ ರೋಗಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ ಇತ್ತೀಚೆಗೆ ಸಾಂಕ್ರಾಮಿಕ ರೋಗ ಪ್ರಕರಣಗಳಲ್ಲಿ ಇಳಿಮುಖವಾಗಿದೆ. ರೋಗದ ತೀವ್ರತೆಯ ಮೇಲೆ ಜನ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಮಲೇರಿಯಾ, ಡೆಂಗಿ ಸೇರಿ ಯಾವುದೇ ಸಾಂಕ್ರಾಮಿಕ ರೋಗ ಕಂಡುಬಂದರೂ ರೋಗಿ ವಾಸವಿರುವ ಏರಿಯಾದಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಡಾ ಶ್ರೀನಿವಾಸ್ ಹೇಳಿದರು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್,  ಶಿಕ್ಷಕರು ತಮ್ಮ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವುದರೊಂದಿಗೆ ಆರೋಗ್ಯ ಮತ್ತು ನೈರ್ಮಲ್ಯ ರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕಿದೆ ಎಂದರು.
ಶಿಕ್ಷಕರು ಮಕ್ಕಳಲ್ಲಿ ಆರೋಗ್ಯ ಶಿಕ್ಷಣದ ಕುರಿತು ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು.
ಹದಿ ಹರೆಯದ ಮಕ್ಕಳಲ್ಲಿ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯ ಹಾಗೂ
ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಸುರೇಶ್ ಹೇಳಿದರು.
“ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಶಾಲಾ ಶಿಕ್ಷಕರ ಪಾತ್ರ” ಕುರಿತು ಮಾಹಿತಿ ನೀಡಿದ
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಸಮುದಾಯದಲ್ಲಿ ಆರೋಗ್ಯ, ನೈರ್ಮಲ್ಯ ಹಾಗೂ ಸ್ವಚ್ಛತೆ ಕಾಪಾಡುವುದು ಮತ್ತು ಶಾಲೆಗಳಲ್ಲಿ ಆರೋಗ್ಯ ಅರಿವು ಹಾಗೂ ಕಾರ್ಯಕ್ರಮ ನಿರ್ವಹಣೆ’ ಕುರಿತು ಮಾಹಿತಿ ನೀಡಿದರು.
ಮಕ್ಕಳ ವೈದ್ಯ ಡಾ ಶಿವಕುಮಾರ್, ‘ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆ’ ಕುರಿತು ಹಾಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ‘ಆರೋಗ್ಯ ರಕ್ಷಣೆ’ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕಿ ಎನ್.ಕೆ.ಮಾಲಾದೇವಿ ವಿಜ್ಞಾನ ಗೀತೆ ಹಾಡಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಎಂ.ಎನ್.ವೆಂಕಟನಾಯಕ್, ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ,
ಪುರಸಭೆಯ ಆರೋಗ್ಯ ನಿರೀಕ್ಷಕ ಉದಯಕುಮಾರ್, ತಾಲ್ಲೂಕು ಪಂಚಾಯ್ತಿಯ ಅಧಿಕಾರಿ ಸುರೇಶ್, ಡಾ ತೇಜಶ್ರೀ, ವೈದ್ಯರಾದ ಡಾ ನಿಶಾ, ಡಾ ದರ್ಶನ್, ಆರೋಗ್ಯ ಇಲಾಖೆಯ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅಶ್ವಿನಿ, ನಿರೀಕ್ಷಕ ವಿಶ್ವಜ್ಞ, ತಾಲ್ಲೂಕಿನ ವಿವಿಧ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಹಾಗೂ
ಆರೋಗ್ಯ ಸಿಬ್ಬಂದಿ ಹಾಜರಿದ್ದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ…

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*

ಜೂನ್ 14, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*

ಜೂನ್ 14, 2026

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*

ಜೂನ್ 13, 2026

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.