Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯ 62 ಕಡೆಗಳಲ್ಲಿ ಬಿಎಸ್‍ಎನ್‍ಎಲ್ ಟವರ್ ನಿರ್ಮಾಣಕ್ಕೆ ಅನುಮೋದನೆ : ಸಂಸದ ಪ್ರತಾಪ್ ಸಿಂಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯ 62 ಕಡೆಗಳಲ್ಲಿ ಬಿಎಸ್‍ಎನ್‍ಎಲ್ ಟವರ್ ನಿರ್ಮಾಣಕ್ಕೆ ಅನುಮೋದನೆ : ಸಂಸದ ಪ್ರತಾಪ್ ಸಿಂಹ*

ಜುಲೈ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.28 : ಕೊಡಗು ಜಿಲ್ಲೆಯ 62 ಕಡೆಗಳಲ್ಲಿ 4ಜಿ ಟವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಇದೇ ನವೆಂಬರ್ ಮೊದಲ ವಾರದಲ್ಲಿ ಚಾಲನೆಗೊಳ್ಳಲಿದೆ ಎಂದು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ  ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಜೊತೆ ಸಭೆಯಲ್ಲಿ ಜಾಗ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.

ಈಗಾಗಲೇ ಕಂದಾಯ ಇಲಾಖೆಯಿಂದ 6 ಕಡೆಗಳಲ್ಲಿ ಹೊರತುಪಡಿಸಿ ಉಳಿದಂತೆ ಎಲ್ಲಾ ಕಡೆ ಭೂಮಿ ಕಾಯ್ದಿರಿಸಿದ್ದು, ಆ ನಿಟ್ಟಿನಲ್ಲಿ ಟವರ್ ನಿರ್ಮಾಣ ಮಾಡಿ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಂಸದರು ಹೇಳಿದರು.

ಜಿಲ್ಲೆಯ 6 ಕಡೆಗಳಲ್ಲಿ ಮಾತ್ರ ಅರಣ್ಯ ಹಾಗೂ ಅರಣ್ಯ ಪೈಸಾರಿ ಜಾಗದಲ್ಲಿ ಅರಣ್ಯ ಇಲಾಖೆಯವರು ಜಾಗ ಕಾಯ್ದಿರಿಸುವ ಸಂಬಂಧ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ‘ಕೊಡಗು ಜಿಲ್ಲೆ ಜನತೆಯ ಬಹು ದಿನದ ಬೇಡಿಕೆ ಸದ್ಯ ಈಗ ಈಡೇರುತ್ತಿದೆ ಎಂದು ಸಂಸದರು ನುಡಿದರು.’

ಈ 62 ಸ್ಥಳಗಳ ಜೊತೆಗೆ ಉಳಿದಂತೆ ಪೆರಾಜೆ, ಚೆಂಬು, ಮೇಲ್‍ಚೆಂಬು, ಒಣಚಲು, ವಿ.ಬಾಡಗ ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಟವರ್ ಅಳವಡಿಕೆಗೆ ಬೇಡಿಕೆ ಇದ್ದು, ಅದನ್ನು ಸಹ ಪ್ರಸ್ತಾವನೆ ಪಡೆದು ಇನ್ನೂ ಹೆಚ್ಚಿನ ಟವರ್ ನಿರ್ಮಾಣ ಮಾಡಲಾಗುವುದು ಎಂದು ಸಂಸದರು ಹೇಳಿದರು.

‘ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ ರಸ್ತೆ, ವಿದ್ಯುತ್, ಅಂತರ್ಜಾಲ ಸಂಪರ್ಕಕ್ಕೆ ಮನವಿ ಮಾಡುತ್ತಾರೆ. ಆ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ದೂರ ಸಂಪರ್ಕ ಸಚಿವರಲ್ಲಿ ಮನವಿ ಮಾಡಿದಾಗ ಕೊಡಗು ಜಿಲ್ಲೆಯ 62 ಸ್ಥಳಗಳಲ್ಲಿ ಬಿಎಸ್‍ಎನ್‍ಎಲ್ ಟವರ್ ಅಳವಡಿಕೆಗೆ ಅವಕಾಶ ಮಾಡಿದ್ದಾರೆ. ಇದರಿಂದ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಸಾಧ್ಯವಾದಷ್ಟು ಅಂತರ್ಜಾಲ ಸಂಪರ್ಕ ಕಲ್ಪಿಸಿದಂತಾಗುತ್ತದೆ ಎಂದು ಸಂಸದರು ಹೇಳಿದರು.’

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಸಂಚಾರ ನಿಗಮ ವಿಭಾಗದ ಎಂಜಿನಿಯರ್ ಪೊನ್ನುರಾಜು ಅವರು ಜಿಲ್ಲೆಯ 103 ಗ್ರಾ.ಪಂ.ವ್ಯಾಪ್ತಿಯಲ್ಲಿ ಬ್ರಾಡ್ ಬ್ಯಾಂಡ್ ಸಂಪರ್ಕವಿದೆ. ಉಳಿದಂತೆ ಹಲವು ಕಡೆಗಳಲ್ಲಿ 2ಜಿ ಮತ್ತು 3ಜಿ ಒಳಗೊಂಡ ಬಿಎಸ್‍ಎನ್‍ಎಲ್ ಟವರ್ ಇದೆ. ಜೊತೆಗೆ 4ಜಿ ಆಗಿ ಪರಿವರ್ತನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಬಿಎಸ್‍ಎಲ್‍ಎನ್ ಸಂಸ್ಥೆಯವರು ಸಾಧ್ಯವಾದಷ್ಟು ಹೆಚ್ಚಿನ ಬ್ಯಾಟರಿ ದಾಸ್ತಾನು ಮಾಡಿಕೊಳ್ಳುವಂತೆ ಸಲಹೆ ಮಾಡಿದರು. ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ವಿದ್ಯುತ್ ವ್ಯತ್ಯಯ ಆಗಾಗ ಉಂಟಾಗುತ್ತಿದ್ದು, ಆದಷ್ಟು ವಿದ್ಯುತ್ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಸಂಸದರು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ ಜಿಲ್ಲೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ಆದರೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇದನ್ನು ರೀ ಸ್ಟೋರ್ ಮಾಡಲು ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಸಹ ಅತೀ ಮುಖ್ಯವಾಗಿದೆ. ವಿದ್ಯುತ್ ಮಾರ್ಗ ಸರಿಪಡಿಸುವ ಸಂದರ್ಭದಲ್ಲಿ ನೆಟ್‍ವರ್ಕ್ ಇಲ್ಲದೆ ನಾವು ಸಹ ಪರಿತಪಿಸುವಂತಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಅವರು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 3 ಟವರ್‍ಗಳ ನಿರ್ಮಾಣಕ್ಕೆ ಪ್ರಸ್ತಾವನೆ ಇದ್ದು, ಇದನ್ನು ಪರಿಶೀಲಿಸಿ ವರದಿ ನೀಡಲಾಗುವುದು ಎಂದರು.

ಈ ಕುರಿತು ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಉಳಿದ 3 ಅರಣ್ಯ ಪೈಸಾರಿ ಜಾಗವೆಂದು ದಾಖಲಾಗಿದ್ದು, ಈ ಬಗ್ಗೆ ಅಭಿಪ್ರಾಯ ನೀಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಪ್ರತೀ ಗಂಟೆಗೆ 32 ರಿಂದ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಿರುವುದು ವರದಿಯಾಗಿದೆ. ಮಳೆಗಾಲದ ಅವಧಿಯಲ್ಲಿ 3-4 ತಿಂಗಳ ಮಟ್ಟಿಗಾದರೂ ಹೆಚ್ಚಿನ ಸಿಬ್ಬಂದಿಯನ್ನು ಸೆಸ್ಕ್ ವಿಭಾಗಕ್ಕೆ ಒದಗಿಸಬೇಕಿದೆ ಎಂದು ಅವರು ಹೇಳಿದರು.

ತಾ.ಪಂ. ಇಒ ಶೇಖರ್, ಜಯಣ್ಣ, ಅಪ್ಪಣ್ಣ, ಇತರರು ಟವರ್ ಅಳವಡಿಸುವ ಸಂಬಂಧ ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.