ಮಡಿಕೇರಿ ಜು.29 : ಪ್ರಸಕ್ತ(2023-24) ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ನ್ಯಾಷನಲ್ ಸ್ಕಾಲರ್‍ಶಿಪ್ ಪೋರ್ಟಲ್ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಯುಕ್ತ ಜಿಲ್ಲೆಯ ಟಾಪ್ ಕ್ಲಾಸ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೂಲಕ ಸೆಪ್ಟೆಂಬರ್, 29 ರಂದು ಪರೀಕ್ಷೆ ನಡೆಸಲಾಗುತ್ತದೆ.
ಈ ಯೋಜನೆಗೆ ಅರ್ಹರಿರುವ ವಿದ್ಯಾರ್ಥಿಗಳು ಆಗಸ್ಟ್, 10 ರೊಳಗೆ https://yet.nta.ac.in ಮುಖಾಂತರ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.








