Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಳಿಬೀಡಿನಲ್ಲಿ ಗಮನ ಸೆಳೆದ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ : ಆಟೋಟದ ಸಂಭ್ರಮದ ಜತೆ ಸಂಸ್ಕೃತಿಯ ಪರಿಚಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಳಿಬೀಡಿನಲ್ಲಿ ಗಮನ ಸೆಳೆದ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ : ಆಟೋಟದ ಸಂಭ್ರಮದ ಜತೆ ಸಂಸ್ಕೃತಿಯ ಪರಿಚಯ*

ಜುಲೈ 31, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.31 :  ಅಬ್ಬರದ ಮಳೆ… ನಡು ನಡುವೆ ಅಲ್ಪ ಬಿಸಿಲು… ಮೈ ತಾಕುತ್ತಿದ್ದ ತಂಗಾಳಿ… ಕುಗ್ಗದ ಉತ್ಸಾಹದಲ್ಲಿ ಆಡಿ ನಲಿದು ಸಂಭ್ರಮಿಸುತ್ತಾ, ಹಿಂದಿನ ಪರಂಪರೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳುವಳಿಕೆ ಮೂಡಿಸುವಲ್ಲಿ ಗಾಳಿಬೀಡುವಿನಲ್ಲಿ ನಡೆದ ಬಂಟ ಸಮುದಾಯದವರ ‘ಆಟಿಡೊಂಜಿ ದಿನ ಕೆಸರ್ದ ಗೊಬ್ಬು’ ಕಾರ್ಯಕ್ರಮ ಯಶಸ್ವಿಯಾಯಿತು.
ಗಾಳಿಬೀಡುವಿನ ಕೃಷಿಕ ಹೊರಮಲೆ ಶಿವಪ್ರಸಾದ್ ರೈ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಯುವಕರು, ಮಹಿಳೆಯರು, ಮಕ್ಕಳು, ಹಿರಿಯರು ಎಲ್ಲರೂ ವಯಸ್ಸಿನ ಅಂತರದ ಅಂಜಿಕೆಯಿಲ್ಲದೆ ಆಡಿ ನಲಿದು ಸಂಭ್ರಮಿಸಿದರು. ಕೆಸರು ಗದ್ದೆಯಲ್ಲಿ ಮನರಂಜನೆಗಾಗಿ ಹ್ಯಾಂಡ್ ಬಾಲ್, ಹಗ್ಗ ಜಗ್ಗಾಟ, ಓಟ, ಮುಂತಾದ ಸ್ಪರ್ಧೆಗಳು ನಡೆದವು. ಆಕರ್ಷಕವಾಗಿ ವಿನ್ಯಾಸಗೊಂಡಿದ್ದ ಮುಖ್ಯ ವೇದಿಕೆ ‘ಹೊರಮಲೆ ಚಾವಡಿ’ಯಲ್ಲಿ ಸಾಂಪ್ರದಾಯಿಕ ಬದುಕಿನ ಚಿತ್ರಣವನ್ನು ತಿಳಿಸುವ ಪ್ರಯತ್ನವಾಯಿತು.
ಇಂಥದ್ದೊಂದು ಅಪರೂಪದ ಕಾರ್ಯಕ್ರಮಕ್ಕೆ ವೇದಿಕೆ ಒದಗಿಸಿದ್ದು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್. ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆಯಿಂದ 600ಕ್ಕೂ ಅಧಿಕ ಮಂದಿ ಪಾಲ್ಗೊಂಡು ಸಂಭ್ರಮಿಸಿದರು. ಯುವ ಸಮೂಹ, ಹಿರಿಯರೆಲ್ಲ ನಿತ್ಯದ ಜಂಜಡವನ್ನು ಮರೆತು ಕೆಸರಿನಲ್ಲಿ ಮಿಂದೆದ್ದು ಸಂಭ್ರಮಿಸಿದರು. ಪ್ರತಿ ದಿನ ಶಾಲೆ, ಪಠ್ಯದ ಚಟುವಟಿಕೆಗಳಲ್ಲಿ ಮಗ್ನರಾಗಿರುತ್ತಿದ್ದ ಮಕ್ಕಳು ತಮಗೆ ಸಿಕ್ಕ ಅಪರೂಪದ ಅವಕಾಶದಲ್ಲಿ ಗದ್ದೆಯಲ್ಲಿ ಆಡಿ, ನಲಿದು ಖುಷಿಪಟ್ಟರು.
ಶಿವಪ್ರಸಾದ್ ರೈ ಅವರು ಎತ್ತುಗಳನ್ನು ಬಳಸಿ ಉಳುಮೆ ಮಾಡುವುದರ ಪ್ರಾತ್ಯಕ್ಷಿಕೆ ನೀಡಿದರು. ಯಾಂತ್ರೀಕೃತ ಚಟುವಟಿಕೆ ಹೆಚ್ಚಾಗಿರುವ ಇಂದಿನ ದಿನದಲ್ಲಿ ಮರೆಯಾಗುತ್ತಿರುವ ಎತ್ತಿನ ಉಳುಮೆ ವಿಶೇಷ ಎನಿಸಿತು. ಆಟಿ ತಿಂಗಳಿನಲ್ಲಿ ತುಳುನಾಡಿನಲ್ಲಿ ಕಾಣ ಸಿಗುವ ಆಟಿ ಕಳೆಂಜ ಪ್ರದರ್ಶನ ಜನರನ್ನು ಆಕರ್ಷಿಸಿತು. ವೇಷ ಧರಿಸಿ, ತೆಂಬರೆ ಭಾರಿಸುತ್ತಾ ಗದ್ದೆ, ವೇದಿಕೆ ಬಳಿ ಸಾಗಿದ ಕಲಾವಿದರ ಜತೆಗೆ ಫೋಟೋ ತೆಗೆಸಿಕೊಳ್ಳುತ್ತಾ ವಿಶೇಷ ಕ್ಷಣವನ್ನು ಅನುಭವಿಸಿದರು. ಬಂಟ ಸಮುದಾಯದಿಂದ ಮೊದಲ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮದ ಇತರೆ ಸಮುದಾಯದ ಬಂಧುಗಳು ಕೂಡಾ ಪಾಲ್ಗೊಂಡು, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಆಟಿ ಖಾದ್ಯಗಳ ಪ್ರದರ್ಶನ : ಚಳಿ ದೂರ ಮಾಡಲು ಬಿಸಿ ಬಿಸಿ ಬೆಲ್ಲದ ಕಾಫಿ ವಿತರಿಸಲಾಯಿತು. ಮಧ್ಯಾಹ್ನ ನಗರ ಮಹಿಳಾ ಘಟಕದಿಂದ ಆಟಿ ಸಂದರ್ಭದಲ್ಲಿ ಸೇವಿಸುವ ವಿಶೇಷ ಖಾದ್ಯಗಳ ಪ್ರದರ್ಶನ ನಡೆಯಿತು. ಮರುವಾಯಿ ಕಡುಬು, ಪತ್ರೊಡೆ, ಕೆಸ ಸಾರು, ಅಕ್ಕಿ ಕಡುಬು, ಸೀಗಡಿ ಚಟ್ನಿ, ಕಡ್ಲೆ ಬಲಿಯಾರ್, ಅಣಬೆ ಸಾರು, ಕಡ್ಲೆ ಬೇಳೆ ಮತ್ತು ಹೆಸರುಕಾಳು ಪಾಯಸ, ನಾಟಿ ಕೋಳಿ ಸಾರು, ಅರಶಿನ ಎಲೆ ಗಟ್ಟಿ, ಹಲಸಿನ ಗಟ್ಟಿ, ಮೂಡೆ, ನೀರ್ದೋಸೆ ಕೋಳಿ ಸಾರು ಮುಂತಾದ ಖಾದ್ಯಗಳನ್ನು ಮನೆಯಿಂದ ತಯಾರಿಸಿ ತಂದು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಹಂಚಿದರು.
ಗಾಳಿಬೀಡು ಹೋಬಳಿ ಅಧ್ಯಕ್ಷ ಸುಭಾಷ್ ಆಳ್ವ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಕೃಷಿಕ ಹೊರಮಲೆ ಶಿವಪ್ರಸಾದ್ ರೈ ಉದ್ಘಾಟಿಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ವಸಂತ ರೈ, ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ, ಕಾರ್ಯದರ್ಶಿ ರವೀಂದ್ರ ವಿ. ರೈ, ಸಹಕಾರ್ಯದರ್ಶಿ ಬಿ.ಸಿ. ಹರೀಶ್ ರೈ, ಉದ್ಯಮಿ ಜಯಪ್ರಕಾಶ್ ರೈ, ನಗರ ಮಹಿಳಾ ಘಟಕ ಕಾರ್ಯದರ್ಶಿ ಸುಜಾತ ಗಣೇಶ್, ಉಪಾಧ್ಯಕ್ಷೆ ಬೇಬಿ ಜಯರಾಮ್ ರೈ ವೇದಿಕೆಯಲ್ಲಿದ್ದರು. ಉಪನ್ಯಾಸಕಿ ಪ್ರತಿಮಾ ಹರೀಶ್ ರೈ ‘ಆಟಿ ತಿಂಗಳು ಮತ್ತು ಬಂಟ ಸಮುದಾಯ’ ವಿಷಯವಾಗಿ ವಿಚಾರ ಮಂಡಿಸಿದರು.
ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ::  ಸಂಜೆ ವಸಂತ ರೈ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಬಂಟರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಇದೇ ವೇಳೆ ಸಮುದಾಯದ ಸಾಧಕರಾದ ವಿ.ಡಿ. ದೀಕ್ಷಿತ್ ಶೆಟ್ಟಿ(ಸೇನಾ ಕ್ಷೇತ್ರ), ಪ್ರತಿಮಾ ಹರೀಶ್ ರೈ(ಶಿಕ್ಷಣ, ಸಾಹಿತ್ಯ), ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಕೃಷಿಕ ಹೊರಮಲೆ ಶಿವಪ್ರಸಾದ್ ರೈ, ಕಾರ್ಯಕ್ರಮ ಸಂಚಾಲಕ ನಿಖಿಲ್ ಆಳ್ವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಜಗದೀಶ್ ರೈ, ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ, ಉಪಾಧ್ಯಕ್ಷ ಬಿ.ಕೆ. ರವೀಂದ್ರ ರೈ, ಮಡಿಕೇರಿ ತಾಲೂಕು ಅಧ್ಯಕ್ಷ ರಮೇಶ್ ರೈ, ವಿರಾಜಪೇಟೆ ತಾಲೂಕು ಅಧ್ಯಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜನಾರ್ಧನ ಶೆಟ್ಟಿ, ನಗರ ಮಹಿಳಾ ಘಟಕ ಅಧ್ಯಕ್ಷೆ ಸೌಮ್ಯ ಶೆಟ್ಟಿ ಮುಂತಾದವರಿದ್ದರು. ಹಿತ ಯೋಗೇಶ್ ಶೆಟ್ಟಿ ಪ್ರಾರ್ಥಿಸಿದರು. ಬಾಲಕೃಷ್ಣ ರೈ ಸ್ವಾಗತಿಸಿದರು. ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು…

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.