ಮಡಿಕೇರಿ ಜು.31 : 2023-24ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ನಂತರ (ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಬಿಎಸ್‍ಸಿ ನರ್ಸಿಂಗ್) ಕೋರ್ಸ್‍ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರವೇಶಾತಿಗೆ ರಾಜ್ಯ ವಿದ್ಯಾರ್ಥಿ ನಿಲಯ https://shp.karnataka.gov.in ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್, 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225528/ 220214, ನಿಲಯ ಪಾಲಕರು 9742116601, 9972171266 ಹಾಗೂ ಇಲಾಖಾ ವೆಬ್‍ಸೈಟ್ https://dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.







