Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡಿಗೆ : ನಿವೃತ್ತ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ ರಿಗೆ ಆತ್ಮೀಯ ಬೀಳ್ಕೊಡುಗೆ : ಸಮನ್ವಯತೆ ಕಾರ್ಯ ನಿರ್ವಹಿಸಿದರೆ ಉತ್ತಮ ಪ್ರಗತಿ ಸಾಧ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ : ನಿವೃತ್ತ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ ರಿಗೆ ಆತ್ಮೀಯ ಬೀಳ್ಕೊಡುಗೆ : ಸಮನ್ವಯತೆ ಕಾರ್ಯ ನಿರ್ವಹಿಸಿದರೆ ಉತ್ತಮ ಪ್ರಗತಿ ಸಾಧ್ಯ

ಆಗಷ್ಟ್ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, ಆ.3: ಕೊಡಗು ಜಿಲ್ಲೆಯ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪ ನಿರ್ದೇಶಕ (ಅಭಿವೃದ್ಧಿ)ರೂ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ಜುಲೈ ತಿಂಗಳ ಅಂತ್ಯಕ್ಕೆ ನಿವೃತ್ತಗೊಂಡ ಬಿ.ವಿ.ಮಲ್ಲೇಶಪ್ಪ ಅವರಿಗೆ ಕೂಡಿಗೆ ಡಯಟ್ ನಲ್ಲಿ  ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಡಯಟ್ ಸಂಸ್ಥೆಯ ಉಪನ್ಯಾಸಕ ವೃಂದ, ಸಿಬ್ಬಂದಿ ಸೇರಿದಂತೆ ಜಿಲ್ಲಾ ಹಾಗೂ ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ತಾಲ್ಲೂಕು ಸಹ ಶಿಕ್ಷಕರ ಸಂಘ ಮತ್ತು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಿವೃತ್ತಗೊಂಡ ಮಲ್ಲೇಶಪ್ಪ ಅವರಿಗೆ ಫಲತಾಂಬುಲ ನೀಡಿ ಶಾಲು ಹೊದಿಸಿ ಸತ್ಕರಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ, ತಾವು ಶಿಕ್ಷಣ ಇಲಾಖೆಯಲ್ಲಿ 37 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಲು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಕೆಲಸ ಕಾರ್ಯಗಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಸಹನೆ, ತಾಳ್ಮೆ ಅಧಿಕಾರದ
ಕುಟುಂಬದ ಸದಸ್ಯರಂತೆ ಕೆಲಸ ನಿರ್ವಹಿಸಿದರೆ ಅಧಿಕಾರದಲ್ಲಿ ಅಹಂ ಎಂಬ ಮನೋಭಾವವನ್ನು ಬದಿಗೊತ್ತಿ ಎಲ್ಲರೊಂದಿಗೆ ಸಮನ್ವಯತೆ ಕಾರ್ಯ ನಿರ್ವಹಿಸಿದರೆ ಉತ್ತಮ ಪ್ರಗತಿ ಸಾಧಿಸಲು ಸಾಧ್ಯ ಎಂದರು.
ತಮ್ಮ ಸೇವಾ ಜೀವನವನ್ನು ಉತ್ತಮ ಆರೋಗ್ಯದಿಂದ ಪೂರ್ಣಗೊಳಿಸಿರುವುದು ಒಂದು ಸಾಧನೆಯಾಗಿದೆ ಎಂದು ಮಲ್ಲೇಶಪ್ಪ ತಿಳಿಸಿದರು.
ತಮ್ಮ ಸೇವಾ ದಿನಗಳನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಬೆಂಬಲ ಮತ್ತು ಸಹಕಾರದಿಂದ ಮಾತ್ರ 37 ವರ್ಷಗಳ ಉತ್ತಮ ಸೇವೆಯನ್ನು ಪೂರ್ಣಗೊಳಿಸಲು ಸಾಧ್ಯ ಎಂದು ಹೇಳುವ ಮೂಲಕ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಡಿಡಿಪಿಐ ಸಿ.ರಂಗಧಾಮಯ್ಯ, ಶಿಕ್ಷಣ ಇಲಾಖೆಯಲ್ಲಿ
ವಿವಿಧ ಸ್ತರದ ಹುದ್ದೆಗಳಲ್ಲಿ ಅನ್ಯೋನ್ಯತೆಯಿಂದ ಕೆಲಸ ನಿರ್ವಹಿಸುವ ಮೂಲಕ ಇಲಾಖೆಯ ಪ್ರಗತಿಗೆ ಶ್ರಮಿಸಿರುವ ಮಲ್ಲೇಶಪ್ಪ ಅವರ ವೃತ್ತಿ ಜೀವನ ಮಾದರಿಯಾದುದು ಎಂದರು.
ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಮಾತನಾಡಿ, ಸರಳ ವ್ಯಕ್ತಿತ್ವ ಹೊಂದಿರುವ ಮಲ್ಲೇಶಪ್ಪ ಅವರು ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಪ್ರೇರಣೆ ನೀಡುತ್ತಿದ್ದರು. ಮಲ್ಲೇಶಪ್ಪ ಅವರ ಶಿಷ್ಯರಾದ ತಾವು ಅವರ ಸೂಕ್ತ ಸಲಹೆ, ಮಾರ್ಗದರ್ಶನದಿಂದ ತಾವು ಕೂಡ ಉತ್ತಮ ಸ್ಥಾನ ಹೊಂದಲು ಕಾರಣವಾಗಿದೆ ಎಂದು ತಮ್ಮ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.
ಇದೇ ವೇಳೆ ನಿವೃತ್ತಗೊಂಡ ಮಲ್ಲೇಶಪ್ಪ ದಂಪತಿಯನ್ನು ಡಯಟ್, ಬಿಇಓ ಕಛೇರಿಗಳು ಮತ್ತು ವಿವಿಧ ಶಿಕ್ಷಕರ ಸಂಘಟನೆಗಳಿಂದ ಶಾಲು ಹೊದಿಸಿ ಸನ್ಮಾನಿಸಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ವಿ.ಸುರೇಶ್, ಡಾ ಬಿ.ಸಿ. ದೊಡ್ಡೇಗೌಡ, ಪ್ರಕಾಶ್, ಡಯಟ್ ನ ಹಿರಿಯ ಉಪನ್ಯಾಸಕರಾದ ಶಿವಕುಮಾರ್, ಉಪನ್ಯಾಸಕ ಎಂ. ಕೃಷ್ಣಪ್ಪ, ಮುಖ್ಯ ಶಿಕ್ಷಕರಾದ ಟಿ.ಜಿ.ಪ್ರೇಮಕುಮಾರ್, ಸೋಮಯ್ಯ ಇತರರು ಮಾತನಾಡಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ.ಹೇಮಂತಕುಮಾರ್, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನಕುಮಾರ್, ಬಿಆರ್ ಸಿ ವನಜಾಕ್ಷಿ, ಹಿರಿಯ ಉಪನ್ಯಾಸಕರಾದ ನಿರುಪ್ ವೆಸ್ಲಿ, ಎಸ್.ಪಿ.ಮಹದೇವ್, ಅಲ್ಹುಸ್ನಾ, ಗಾಯಿತ್ರಿದೇವಿ, ಬಿ ಆರ್ ಸಿ ವನಜಾಕ್ಷಿ,
ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಿ.ಎನ್.ಪುಷ್ಪ, ಎಂ.ವಿ.ಮಂಜೇಶ್, ಕೆ.ಎಂ.ಅಯ್ಯಚ್ಚು, ನಿವೃತ್ತ ಉಪನ್ಯಾಸಕಿ ಬಿ.ಬಿ.ಸಾವಿತ್ರಿ, ಶಿಕ್ಷಕರ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.
ಡಯಟ್ ನ ಉಪನ್ಯಾಸಕರು ಸೇರಿದಂತೆ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಉಪನ್ಯಾಸಕ ಕೆ.ಜಿ.ನೀಲಕಂಠಪ್ಪ ,
ಉಪನ್ಯಾಸಕಿ ಕೆ.ಎಸ್.ನಳಿನಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.
ಡಯಟ್ ಸಂಸ್ಥೆಯ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಶಿಕ್ಷಕರ ಸಂಘದ ಪ್ರತಿನಿಧಿಗಳು ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ…

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.