Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗಿನ ಆರು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಆಚರಣೆ*
ಇತ್ತೀಚಿನ ಸುದ್ದಿಗಳು

*ಕೊಡಗಿನ ಆರು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಆಚರಣೆ*

August 4, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.4 : ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಡಗಿನ ಆರು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಪ್ರಯುಕ್ತ ಪಂಜಿನ ಮೆರವಣಿಗೆ, ವಾಹನ ಜಾಥ ಮತ್ತು ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆ.9 ರಂದು ವಿರಾಜಪೇಟೆಯಲ್ಲಿ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಮೆರವಣಿಗೆ ತೆಲುಗರ ಬೀದಿ ಮಾರಿಯಮ್ಮ ದೇವಾಲಯದಿಂದ ಆರಂಭಗೊಂಡು ಕ್ಲಾಕ್ ಟವರ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕಾಗಿ ಮಹಿಳಾ ಸಮಾಜದ ಬಳಿ ಸಂಜೆ 7.30 ಕ್ಕೆ ಮುಕ್ತಾಯಗೊಳ್ಳಲಿದೆ. ಸುಮಾರು 2 ಕಿ.ಮೀ. ಅಂತರದ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಗೋಣಿಕೊಪ್ಪಲಿನಲ್ಲಿ ಆ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 10 ಕಿ.ಮೀ. ಅಂತರದ ವಾಹನ ಜಾಥ ನಡೆಯಲಿದೆ. ಅಲ್ಲಿನ ಆರ್‍ಎಂಸಿ ಬಳಿಯಿಂದ ಜಾಥ ಆರಂಭಗೊಂಡು ಖಾಸಗಿ ಬಸ್ ನಿಲ್ದಾಣದ ಮೂಲಕ ಬೈಪಾಸ್ ಮಾರ್ಗವನ್ನು ಹಾದು ಪೊನ್ನಂಪೇಟೆ ಕೊಡವ ಸಮಾಜದ ಬಳಿ ಮುಕ್ತಾಯಗೊಳ್ಳಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆಯೆಂದು ತಿಳಿಸಿದರು.
ಜಿಲ್ಲಾ ಕೇಂದ್ರ್ರ ಮಡಿಕೇರಿಯಲ್ಲಿ ಆ.11 ರಂದು ಸಂಜೆ 6 ಗಂಟೆಗೆ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇಗುಲದಿಂದ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಮೆರವಣಿಗೆ ಇಂದಿರಾ ಗಾಂಧಿ ವೃತ್ತ, ಅಂಚೆ ಕಛೇರಿ, ಜ.ತಿಮ್ಮಯ್ಯ ವೃತ್ತ, ಶ್ರೀ ಓಂಕಾರೇಶ್ವರ ದೇವಸ್ಥಾನ ರಸ್ತೆಯ ಮೂಲಕ ಸಾಗಿ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಮುಕ್ತಾಯಗೊಳ್ಳಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಮಾದಾಪುರದಲ್ಲಿ ಆ.12 ರಂದು ಸಂಜೆ 6 ಗಂಟೆಗೆ ಜಂಬೂರಿನ ಎಫ್‍ಎಂಸಿ ಬಡಾವಣೆಯಿಂದ ಮಾದಾಪುರ ಪಟ್ಟಣಕ್ಕಾಗಿ ಶ್ರೀ ಗಣಪತಿ ದೇವಾಲಯದವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ. ಆ.13 ರಂದು ಕೊಡ್ಲಿಪೇಟೆಯಲ್ಲಿ ಸಂಜೆ 6 ಗಂಟೆಗೆ ಆರ್‍ಎಂಸಿ ಮಾರುಕಟ್ಟೆ ಸಮೀಪದ ಶ್ರೀ ಗಣಪತಿ ದೇವಾಲಯದಿಂದ ಆರಂಭಗೊಳ್ಳುವ ಪಂಜಿನ ಮೆರವಣಿಗೆ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದವರೆಗೆ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆಯೆಂದು ಹೇಳಿದರು.
ಆ.14 ರಂದು ಕುಶಾಲನಗರದ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದಿಂದ ಪಂಜಿನ ಮೆರವಣಿಗೆ ಆರಂಭಗೊಳ್ಳಲಿದ್ದು, ಮೆರವಣಿಗೆ ಆಕ್ಸಿಸ್ ಬ್ಯಾಂಕ್ ರಸ್ತೆಗಾಗಿ, ರಥ ಬೀದಿ ಐಬಿ ರಸ್ತೆಗಾಗಿ ರೈತ ಭವನದಲ್ಲಿ ಮುಕ್ತಾಯವಾಗಲಿದೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಅಜಿತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ಚೇತನ್ ಶಾಂತಿನಿಕೇತನ, ಸಹ ಸಂಚಾಲಕ ವೈ.ಬಿ.ಭೋಜೇಗೌಡ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರುಗಳಾದ ಚಾಮೇರ ಪ್ರದೀಪ್, ಸುನಿಲ್ ಮಾದಾಪುರ ಹಾಗೂ ಶಾಂತೆಯಂಡ ತಿಮ್ಮಯ್ಯ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚಣೆ*
Next Article *ಆ.12 ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.