Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್ ತಲುಪಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್ ತಲುಪಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಆಗಷ್ಟ್ 4, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.4 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‍ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ವಲಸಿಗ 5 ವರ್ಷದೊಳಗಿನ ಮಕ್ಕಳು, ಗರ್ಭಿಣೀಯರನ್ನು ಪತ್ತೆ ಹಚ್ಚಿ ಅರ್ಹರಿಗೆ ಲಸಿಕೆ ನೀಡುವಂತಾಗಬೇಕು. ತಾಲ್ಲೂಕುವಾರು ಮಾಹಿತಿಯನ್ನು ನಿಖರವಾಗಿ ಒದಗಿಸುವಂತೆ ಅವರು ಸೂಚಿಸಿದರು.
ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾಹಿತಿ ನೀಡಿ ಮಿಷನ್ ಇಂದ್ರಧನುಷ್ ಅನುಷ್ಠಾನ ಸಂಬಂಧಿಸಿದಂತೆ ಆ.7 ರಂದು ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಆ.7 ರಿಂದ 12 ರವರೆಗೆ ಮೊದಲ ಸುತ್ತು, ಸೆಪ್ಟೆಂಬರ್, 11 ರಿಂದ 16 ರವರೆಗೆ ಎರಡನೇ ಸುತ್ತು ಮತ್ತು ಅಕ್ಟೋಬರ್, 09 ರಿಂದ 14 ರವರೆಗೆ ಮೂರನೇ ಸುತ್ತಿನಲ್ಲಿ ಮಿಷನ್ ಇಂದ್ರಧನುಷ್ ಲಸಿಕಾಕರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇಂದ್ರಧನುಷ್ ಲಸಿಕಾಕರಣಕ್ಕೆ 2 ವರ್ಷದೊಳಗಿನ 1,169 ಮಕ್ಕಳು ಹಾಗೆಯೇ 2 ರಿಂದ 5 ವರ್ಷದೊಳಗಿನ 23 ಮಕ್ಕಳಿಗೆ ಜೊತೆಗೆ 278 ಗರ್ಭಿಣೀಯರಿಗೆ ಲಸಿಕಾ ಡೋಸ್ ನೀಡಲು ಬಾಕಿ ಇದೆ ಎಂದು ಡಾ.ಗೋಪಿನಾಥ್ ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣೀಯರು ಮತ್ತು 5 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತರಿಗೆ ನೀಡುವಂತಾಗಬೇಕು. ಮನೆ ಮನೆಗೆ ಭೇಟಿ ಮಾಡಿ ಲಸಿಕೆ ಪಡೆಯಬೇಕಿರುವ, ಇದುವರೆಗೆ ಪಡೆಯದಿರುವ, ಹಾಗೆಯೇ ಬಿಟ್ಟು ಹೋಗಿರುವ ಪಟ್ಟಿ ಮಾಡಿ ಒದಗಿಸುವಂತೆ ಕೋರಿದರು.
ವಿಶೇಷವಾಗಿ 2 ರಿಂದ 5 ವರ್ಷದೊಳಗಿನ ಮಕ್ಕಳು ದಡಾರ, ರುಬೆಲ್ಲಾ-2, ಡಿಬಿಟಿ ಬೂಸ್ಟರ್, ಒಪಿವಿ ಬೂಸ್ಟರ್ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ಕೋರಿದರು.
ಗರ್ಭಿಣಿ ಮಹಿಳೆಯರ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ಮಾಹಿತಿ ನೀಡುವುದು. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ತೋಟದ ಮನೆಗಳು, ವಲಸಿಗರು, ಹೀಗೆ ಹಲವು ಅರ್ಹರು ಲಸಿಕಾಕರಣದಿಂದ ಬಿಟ್ಟು ಹೋಗಿದ್ದರೆ ಮಾಹಿತಿ ನೀಡುವುದು. ಅಭಿಯಾನದ ಸಮಯದಲ್ಲಿ ಅಂಗನವಾಡಿ ಕೇಂದ್ರ ತೆರೆಯಬೇಕು ಎಂದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ತೀವ್ರತರವಾದ ಇಂದ್ರಧನುಷ್ 5.0 ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುವುದು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳನ್ನು ಗುರುತಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು.
ಲಸಿಕೆ ನಿರಾಕರಿಸುವ ಕುಟುಂಬಗಳನ್ನು ಮನವೊಲಿಸಿ ಲಸಿಕಾಕರಣಕ್ಕೆ ಕೋರುವುದು. ಅಗತ್ಯ ಜಾಗೃತಿ ಮೂಡಿಸುವುದು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಪಡೆ ಸಮಿತಿ ರಚಿಸಿ ಲಸಿಕಾಕರಣಕ್ಕೆ ಹೆಚ್ಚಿನ ಜಾಗೃತಿ ಮೂಡಿಸುವುದು, ಶಿಕ್ಷಣ ಇಲಾಖೆ ವತಿಯಿಂದ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳನ್ನು ಲಸಿಕೆ ಪಡೆಯಲು ಪೋಷಕರಿಗೆ ಮಾಹಿತಿ ನೀಡುವುದು. ವೈದ್ಯಕೀಯ ಇಲಾಖೆಯಿಂದ ಇಂದ್ರಧನುಷ್ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವುದು, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಮೂಲಕ ಲಸಿಕಾಕರಣದ ಕುರಿತು ಜಾಗೃತಿ ಮೂಡಿಸುವುದು ಹೀಗೆ ಎಲ್ಲಾ ಇಲಾಖೆಗಳ ಸಹಕಾರ ಪಡೆದು ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಗತಿಗೆ ಶ್ರಮಿಸಲಾಗುವುದು ಎಂದು ಡಾ.ಗೋಪಿನಾಥ್ ಅವರು ಮಾಹಿತಿ ನೀಡಿದರು.
‘ಮಿಷನ್ ಇಂದ್ರಧನುಷ್ ಐಎಂಐ ಕಾರ್ಯಕ್ರಮದಿಂದ ಸರ್ಕಾರ ಹೊಸ ಆ್ಯಪ್ ಯು-ವಿನ್(U-WIN ) ಬಿಡುಗಡೆ ಮಾಡಿದ್ದು, ಇದರಲ್ಲಿ ನೋಂದಾಯಿಸಿಕೊಂಡು ಲಸಿಕೆ ಪಡೆದ ನಂತರ ಪ್ರಮಾಣ ಪತ್ರ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಮಾಹಿತಿ ನೀಡಿದರು.’
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಆರೋಗ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
‘ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನ’ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರತಂದಿರುವ ಪೋಸ್ಟರ್‍ನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜು, ಡಾ.ಚೇತನ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ನಗರಸಭೆ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.