ಮಡಿಕೇರಿ ಆ.5 : ಕೊಡಗು ಜಿಲ್ಲೆಯಲ್ಲಿ ಆ.7 ರಿಂದ ಮೂರು ತಿಂಗಳವರೆಗೆ ‘ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದು,್ದ ಈ ಕಾರ್ಯಕ್ರಮದ ಉದ್ಘಾಟನೆಯು ಆಗಸ್ಟ್, 7 ರಂದು ಬೆಳಗ್ಗೆ 10.30 ಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.







