Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಂಜಕ್ಟವೈಟೀಸ್ (Madras Eye) ಬಗ್ಗೆ ಭಯಬೇಡ, ಮುನ್ನೆಚ್ಚರ ಇರಲಿ : ಡಾ.ಆನಂದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಂಜಕ್ಟವೈಟೀಸ್ (Madras Eye) ಬಗ್ಗೆ ಭಯಬೇಡ, ಮುನ್ನೆಚ್ಚರ ಇರಲಿ : ಡಾ.ಆನಂದ್*

ಆಗಷ್ಟ್ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.5 : ಕಂಜಕ್ಟವೈಟೀಸ್(Madras Eye) ಇದು ಒಂದು ವೈರಸ್‍ನಿಂದ ಹರಡುವ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ (Discharge) ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ.
ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ. ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ.
ಲಕ್ಷಣಗಳು: ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು.
ಚಿಕಿತ್ಸೆ: ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಚಗೊಳಿಸುವುದು, ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸುವುದು, ಶಾಲಾ ವಿದ್ಯಾರ್ಥಿ/ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.
ಮುಂಜಾಗ್ರತಾ ಕ್ರಮಗಳು: ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ಕೊಡಿ, ಆರೋಗ್ಯವಂತ ವ್ಯಕ್ತಿಯು ಸೋಂಕುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು. ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆಯಬೇಕು.
ಏನು ಮಾಡಬೇಕು : ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು. ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಿರಿ, ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಅಹಾರ ನೀಡಿರಿ, ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ/ಟವಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.
ಏನು ಮಾಡಬಾರದು : ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬೇಡಿ, ಸ್ವಯಂ ಚಿಕಿತ್ಸೆ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು.
ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಿ ಪಡೆಯಬಹುದು ಎಂದು ಅಂಧತ್ವ ನಿಯಂತ್ರಣ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.