ಮಡಿಕೇರಿ ಆ.6 : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆ.8 ರಂದು ಮಂಗಳವಾರ ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅವರೊಂದಿಗೆ ಸಂವಾದ ಕಾಯ೯ಕ್ರಮ ಆಯೋಜಿಸಲಾಗಿದೆ.
ಮಡಿಕೇರಿ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಕಾನೂನು ಸಮಸ್ಯೆಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ರೋಟರಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘಸಂಸ್ಥೆಗಳ ಪ್ರಮುಖರೊಂದಿಗೆ ಆ 8 ರಂದು ಮಂಗಳವಾರ ಸಂಜೆ 7 ಗಂಟೆಗೆ ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ಸಂವಾದ ನಡೆಸಲಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್ ಪಾಲ್ಗೊಳ್ಳಲಿದ್ದಾರೆ ಎಂದು ಕಾಯ೯ಕ್ರಮ ಸಂಚಾಲಕ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








