ಸುಂಟಿಕೊಪ್ಪ ಆ.7 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರುಗಳು ಕಾನ್‍ಬೈಲ್ ಗ್ರಾಮದ ಶ್ರೀರಾಮ ಮಂದಿರ ದೇವಾಲಯದ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಬೆಳೆದಿದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು.
ವರ್ಷಂಪ್ರತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಘದ ಸದಸ್ಯರುಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಆದರಂತೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಕಾನ್‍ಬೈಲ್ ಗ್ರಾಮದ ಶ್ರೀ ರಾಮ ಮಂದಿರ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರುಗಳು ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿ, ಪ್ಲಾಸ್ಟಿಕ್ ಇನ್ನಿತರರ ತ್ಯಾಜ್ಯ ಹಾಗೂ ದೇವಾಲಯದ ಒಳಾಂಗಣವನ್ನು ಶುಭ್ರಗೊಳಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯವನ್ನು ಸಂಘದ ಸದಸ್ಯರುಗಳು ನೇರವೇರಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಉಪಾಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಯಶೋಧ, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಒಕ್ಕೂಟ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.









