ಮಡಿಕೇರಿ, ಆ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ವಿಶ್ವ ಹೆಪಟೈಟಿಸ್ ದಿನವು ಆ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಬೋಧಕ ಆಸ್ಪತ್ರೆ ಸೆಮಿನಾರ್ ಹಾಲ್(ಜಿಲ್ಲಾ ಆಸ್ಪತ್ರೆ) ನಲ್ಲಿ ನಡೆಯಲಿದೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಗೋಪಿನಾಥ್, ಐಎಂಎ ಅಧ್ಯಕ್ಷರಾದ ಡಾ.ಶ್ಯಾಮ್ ಅಪ್ಪಣ್ಣ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಸ್ಥಾನೀಯ ವೈದ್ಯರಾದ ಡಾ.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಯು. ಚೇತನ್ ಮತ್ತು ಎನ್‍ವಿಹೆಚ್‍ಸಿಪಿ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್. ನೋಡಲ್ ಅಧಿಕಾರಿ ಡಾ.ಅಬ್ದುಲ್ ಅಜೀಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.








