Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ 207 ಕಡೆಗಳಲ್ಲಿ ಮಿಷನ್ ಇಂದ್ರಧನುಷ್ 5.0 ಲಸಿಕಾಕರಣ : ಹಲವು ಮಾರಕ ರೋಗಗಳ ನಿಯಂತ್ರಣಕ್ಕೆ ಲಸಿಕೆ ಸಹಕಾರಿ : ಡಾ.ಸತೀಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ 207 ಕಡೆಗಳಲ್ಲಿ ಮಿಷನ್ ಇಂದ್ರಧನುಷ್ 5.0 ಲಸಿಕಾಕರಣ : ಹಲವು ಮಾರಕ ರೋಗಗಳ ನಿಯಂತ್ರಣಕ್ಕೆ ಲಸಿಕೆ ಸಹಕಾರಿ : ಡಾ.ಸತೀಶ್ ಕುಮಾರ್*

ಆಗಷ್ಟ್ 7, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.7 : ದಡಾರ, ರುಬೆಲ್ಲಾ ಸೇರಿದಂತೆ ಹಲವು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಲಸಿಕೆಯನ್ನು ಕಾಲ ಕಾಲಕ್ಕೆ ಪಡೆಯದ ಮತ್ತು ಬಿಟ್ಟುಹೋದ ಹಾಗೂ ಹೊರಗುಳಿದ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.
ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯ 207 ಕಡೆಗಳಲ್ಲಿ ಇಂದ್ರಧನುಷ್ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ ಬರುವ ದಡಾರ, ರುಬೆಲ್ಲಾ ಸೇರಿದಂತೆ ಹಲವು ರೋಗಗಳನ್ನು ತಡೆಯಲು ಇಂದ್ರಧನುಷ್ 5.0 ಸಹಕಾರಿಯಾಗಿದೆ ಎಂದರು.
ಇಂದ್ರಧನುಷ್ 5.0 ಅಭಿಯಾನದಲ್ಲಿ ಲಸಿಕೆ ಬಿಟ್ಟು ಹೋಗಿರುವ, ವಿಶೇಷವಾಗಿ ದಡಾರ-ರುಬೆಲ್ಲಾ ಲಸಿಕಾಕರಣ, ಪಿಸಿವಿ ಲಸಿಕಾಕರಣ ಮತ್ತು ಇತ್ತೀಚೆಗೆ 3 ನೇ ಡೋಸ್ ಆಗಿ ಸೇರ್ಪಡೆಗೊಳಿಸಲಾಗಿರುವ ಎಫ್‍ಎಲ್‍ಪಿವಿ ಲಸಿಕಾಕರಣದ ಪ್ರಗತಿಯನ್ನು ಹೆಚ್ಚಿಸುವ ಸಲುವಾಗಿ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನ 5.0 ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ನಿರ್ದೇಶನದಂತೆ ರಾಜ್ಯ ಸರ್ಕಾರವು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮವನ್ನು ಮೂರು ಸುತ್ತುಗಳ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಆ.7 ರಿಂದ 12 ರವರೆಗೆ ಮೊದಲ ಸುತ್ತು, ಸೆಪ್ಟೆಂಬರ್, 11 ರಿಂದ 16 ರವರೆಗೆ 2ನೇ ಸುತ್ತು ಮತ್ತು ಅಕ್ಟೋಬರ್, 9 ರಿಂದ 14 ರವರೆಗೆ 3 ನೇ ಸುತ್ತಿನಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳು, ಉಪ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಮತ್ತು ಶಾಲೆಗಳಲ್ಲಿ ಪರಿಣಾಮಕಾರಿ ಇಂದ್ರಧನುಷ್ 5.0 ಲಸಿಕಾಕರಣ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ತಿಳಿಸಿದರು.

ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್  ಕೊಡಗು ಜಿಲ್ಲೆಯಲ್ಲಿ ಇಂದ್ರಧನುಷ್ ಲಸಿಕಾಕರಣ ಸಂಬಂಧಿಸಿದಂತೆ 2 ವರ್ಷದೊಳಗಿನ 1,169 ಮಕ್ಕಳನ್ನು ಗುರುತಿಸಲಾಗಿದೆ. 2 ರಿಂದ 5 ವರ್ಷದೊಳಗಿನ 23 ಮಕ್ಕಳನ್ನು ಗುರುತಿಸಲಾಗಿದೆ. ಹಾಗೆಯೇ ಗರ್ಭಿಣೀಯರಲ್ಲಿ 278 ಮಂದಿಯನ್ನು ಗುರುತಿಸಲಾಗಿದ್ದು, ಲಸಿಕೆಯನ್ನು ನೀಡಿದ ಲಸಿಕಾಕರಣ ವಿವರವನ್ನು ಯು-ವಿನ್ ಪೋರ್ಟಲ್‍ನಲ್ಲಿ ದಾಖಲಿಸಿ ಇ-ಲಸಿಕಾ ಕರಣದ ಪ್ರಮಾಣಪತ್ರ ನೀಡಲಾಗುತ್ತದೆ ಎಂದರು.
ಇಂದ್ರಧನುಷ್ ಸರ್ಕಾರದ ಅತೀ ಮುಖ್ಯ ಕಾರ್ಯಕ್ರಮವಾಗಿದ್ದು, 7 ಮಾರಕ ರೋಗಗಳನ್ನು ತಡೆಯಲು ಈ ಲಸಿಕಾಕರಣ ಸಹಕಾರಿಯಾಗಲಿದೆ ಎಂದು ಡಾ.ಗೋಪಿನಾಥ್  ವಿವರಿಸಿದರು.
ದಡಾರ ಮತ್ತು ರುಬೆಲ್ಲಾವನ್ನು ನಿರ್ಮೂಲನೆ ಮಾಡಬೇಕಿದೆ. ಆ ನಿಟ್ಟಿನಲ್ಲಿ ಲಸಿಕಾಕರಣಕ್ಕೆ ಬಿಟ್ಟುಹೋದ ಮಕ್ಕಳು ಮತ್ತು ಗರ್ಭಿಣೀಯರಿಗೆ ಇಂದ್ರಧನುಷ್ 5.0 ಲಸಿಕಾಕರಣವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯದಿಂದ ರೋಗವನ್ನು ತಡೆಯಲು ಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಬಿಟ್ಟುಹೋದ ಮತ್ತು ಹೊರಗುಳಿದ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಲಸಿಕಾಕರಣ ಕೊಡಿಸಬೇಕು ಎಂದು ಡಾ.ಗೋಪಿನಾಥ್ ಹೇಳಿದರು.
ಈಗಾಗಲೇ ಸರ್ವೇ ನಡೆಸಿರುವುದನ್ನು ಹೊರತುಪಡಿಸಿ ಲಸಿಕೆ ಬಿಟ್ಟು ಹೋಗಿದ್ದಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ   ಮಾತನಾಡಿ, ಇಂದ್ರಧನುಷ್ ಅತೀ ಮುಖ್ಯವಾದ ಲಸಿಕಾ ಕಾರ್ಯಕ್ರಮವಾಗಿದೆ. 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರು ಇಂದ್ರಧನುಷ್ ಲಸಿಕೆ ಪಡೆಯಬೇಕು ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ  ಮಾತನಾಡಿ, ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕೆಂಬ ಉದ್ದೇಶದಿಂದ ಇಂದ್ರಧನುಷ್ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ. ಲಸಿಕಾಕರಣ ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥ  ಡಾ.ಪುರುಷೋತ್ತಮ  ಮಾತನಾಡಿ,  ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬಂತೆ ಮಕ್ಕಳ ಬೆಳವಣಿಗೆಗೆ ಚುಚ್ಚುಮದ್ದು ಅತ್ಯವಶ್ಯಕ ಎಂದರು.
ಮಕ್ಕಳ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ. ಪೊಲಿಯೋ, ಧನುರ್‍ವಾಯು, ದಡಾರ, ರುಬೆಲ್ಲಾ ಹೀಗೆ ಹಲವು ರೋಗವನ್ನು ತಡೆಯಲು ಚುಚ್ಚುಮದ್ದು ಅವಶ್ಯಕ. ಮಕ್ಕಳ ಬೆಳೆವಣಿಗೆಗೆ ಲಸಿಕಾಕರಣ ಅತೀ ಮುಖ್ಯ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಇರುವ ತಾಯಿ ಕಾರ್ಡ್ ಪ್ರತೀಯೊಬ್ಬರು ಓದಬೇಕು. ಚುಚ್ಚುಮದ್ದು ನೀಡಿದ ನಂತರ ನಿಗಾವಹಿಸಬೇಕು. ಕಾಲ ಕಾಲಕ್ಕೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ದಿನಚರಿಯಲ್ಲಿ ಬರೆದಿಟ್ಟುಕೊಳ್ಳಬೇಕು ಎಂದು ಡಾ.ಪುರುಷೋತ್ತಮ ವಿವರಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್, ಡಾ.ಸೋಮಶೇಖರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ಯು.ಚೇತನ್, ಮಕ್ಕಳ ವಿಭಾಗದ ತಜ್ಞ ವೈದ್ಯರಾದ ಡಾ.ಕುಶ್ವಂತ್ ಕೋಳಿಬೈಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಇತರರು ಇದ್ದರು. 5 ವರ್ಷದೊಳಗಿನ ಮಕ್ಕಳಿಗೆ ಇದೇ ಸಂದರ್ಭದಲ್ಲಿ ಇಂದ್ರಧನುಷ್ 5.0 ಲಸಿಕೆ ನೀಡಲಾಯಿತು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.