ಮಡಿಕೇರಿ ಆ.9 : ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಇವರ ವತಿಯಿಂದ ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್ ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ”ಯು ಆ.27 ರಂದು ನಡೆಯಲಿದೆ.
ಸ್ಪರ್ಧೆಗೆ ಹೆಸರು ನೋಂದಾಯಿಸಲು ಆ.25 ಕೊನೆ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ “ಚೇತನ ಚಿಲುಮೆ” (ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದ ಹತ್ತಿರ) ದೂ.ಸಂ.9880985939, 9480745776 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.







