ಮಡಿಕೇರಿ ಆ.11 : ಸುಂಟಿಕೊಪ್ಪ ಗ್ರಾ.ಪಂ ಯ ಎಸ್‍ಡಿಪಿಐ ಬೆಂಬಲಿತ ಸದಸ್ಯೆ ರೇಷ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿರುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್ ತಿಳಿಸಿದ್ದಾರೆ.
ಎರಡನೇ ಅವಧಿಯ ಆಡಳಿತಕ್ಕಾಗಿ ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಸಂದರ್ಭ ರೇಷ್ಮಾ ಅವರು ಎಸ್‍ಡಿಪಿಐ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸದೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.







