Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *”ಜಾತ್ಯಾತೀತತೆ ಭಾರತದ ಧರ್ಮ” ಘೋಷಣೆಯೊಂದಿಗೆ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*”ಜಾತ್ಯಾತೀತತೆ ಭಾರತದ ಧರ್ಮ” ಘೋಷಣೆಯೊಂದಿಗೆ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ*

August 11, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.11 : ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಘೋಷಣೆಯೊಂದಿಗೆ ಆ.15 ರಂದು ನೆಲ್ಯಹುದಿಕೇರಿಯಲ್ಲಿ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ನೆಲ್ಯಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಹಾಯಕ ಖಾಝಿಗಳಾದ ಎಂ.ಎಂ.ಅಬ್ದುಲ್ಲ ಫೈಝಿ ಉದ್ಘಾಟಿಸಲಿದ್ದು, ಸಂಘಟನೆಯ ಜಿಲ್ಲಾಧ್ಯಕ್ಷ ಬಶೀರ್ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ, ಚೆಟ್ಟಳ್ಳಿಯ ಕ್ರೈಸ್ತ ಧರ್ಮ ಗುರುಗಳಾದ ಫಾದರ್ ಜೆರಾಲ್ಡ್ ಸ್ಕ್ವೇರಿಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಸಕಲೇಶಪುರದ ಆನೆಮಹಲ್ ಇಬ್ರಾಹಿಂ ಮುಸ್ಲಿಯಾರ್ ಭಾಗವಹಿಸಲಿದ್ದು, ಜಿಲ್ಲೆಯ ಸರ್ವ ಜನಾಂಗದ ಬಂಧುಗಳು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಇಬ್ಬರು ಶಾಸಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಶ್ರೇಷ್ಠವಾದ ಸಂವಿಧಾನವನ್ನು ಹೊಂದಿರುವ ಭಾರತವು 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದು, ಎಲ್ಲಾ ಧರ್ಮಗಳನ್ನು ಸ್ವೀಕರಿಸುವ ಮತ್ತು ಗೌರವಿಸುವ ದೇಶ ಇದಾಗಿದೆ. ಇಲ್ಲಿ ಹಲವಾರು ಧರ್ಮಗಳು, ಜಾತಿಗಳು, ಭಾಷೆ, ಪದ್ಧತಿ, ಸಂಸ್ಕೃತಿ ಇದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಶ್ರೇಷ್ಠ ರಾಷ್ಟ್ರವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಕೆಲವೆಡೆ ಜಾತಿ, ಧರ್ಮದ ಹೆಸರಿನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೇಸರದ ವಿಚಾರವಾಗಿದೆ.
ಜಾತ್ಯತೀತತೆಯನ್ನು ಉಳಿಸುವ ಮೂಲಕವೇ ಸುಂದರ ಭಾರತದ ನಿರ್ಮಾಣ ಸಾಧ್ಯ. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿಯು “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಉತ್ತಮ ಬಾಂಧವ್ಯವನ್ನು ಮತ್ತು ಸಹಬಾಳ್ವೆಯನ್ನು ಮೂಡಿಸುವ ಕೆಲಸವನ್ನು ಕಾರ್ಯಕ್ರಮದ ಮೂಲಕ ಮಾಡಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಸಿಪಿಎಂ ಬಶೀರ್ ಹಾಜಿ, ಕಾರ್ಯದರ್ಶಿ ಇಕ್ಬಾಲ್ ಮೌಲವಿ, ಉಪಾಧ್ಯಕ್ಷ ಮುಹಮ್ಮದ್ ಆಲಿ, ಸದಸ್ಯರಾದ ಹಾರೂನ್ ಹಾಜಿ ಹಾಗೂ ಅಬ್ದುಲ್ ಸಲಾಂ ಹಾಜಿ ಉಪಸ್ಥಿತರಿದ್ದರು. 

Share. Facebook Twitter Pinterest LinkedIn Tumblr Email WhatsApp
Previous Article*ಎಂಆರ್ ಐ ಮತ್ತು ಸಿಟಿ ಸ್ಕ್ಯಾನ್ ಉಚಿತ*
Next Article *ನರಿಯಂದದ ಗ್ರಾ.ಪಂ ಅಧ್ಯಕ್ಷರಾಗಿ ಪೆಮ್ಮಂಡ ಕಾವೇರಮ್ಮ, ಉಪಾಧ್ಯಕ್ಷರಾಗಿ ಕೋಡಿರ ಎಂ. ನಾಣಯ್ಯ ಆಯ್ಕೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.