Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
  • *ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*
  • *ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
  • *ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ‘ಆರೋಗ್ಯ ಅರಿವು’ ಕುರಿತು ಕಾರ್ಯಾಗಾರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತೆ ಅಗತ್ಯ : ಡಾ.ಸತೀಶ್ ಕುಮಾರ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ‘ಆರೋಗ್ಯ ಅರಿವು’ ಕುರಿತು ಕಾರ್ಯಾಗಾರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತೆ ಅಗತ್ಯ : ಡಾ.ಸತೀಶ್ ಕುಮಾರ್* 

ಆಗಷ್ಟ್ 11, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ, ಆ.11 : ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಮೂಲಕ ಯಾವುದೇ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತೆ ವಹಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ. ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್  ಹೇಳಿದರು.
ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿರಾಜಪೇಟೆ ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ
ಮಲೇರಿಯಾ ಮಾಸಾಚರಣೆ ಅಂಗವಾಗಿ ಡೆಂಗ್ಯೂ, ಮಲೇರಿಯಾ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ಆರೋಗ್ಯ ಅರಿವು” ಕಾರ್ಯಕ್ರಮದಡಿ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ವಿರಾಜಪೇಟೆ ತಾಲ್ಲೂಕು ಮಟ್ಟದ ಶಿಕ್ಷಕರ ಅಡ್ವೊಕೆಸಿ ಕಾರ್ಯಾಗಾರದಲ್ಲಿ “ರೋಗವಾಹಕಗಳ ನಿಯಂತ್ರಣ” ಕುರಿತ ಕೈಪಿಡಿ ಬಿಡುಗಡೆಗೊಳಿಸಿ ಆರೋಗ್ಯ ಮಾಹಿತಿ ನೀಡಿದರು.
ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ರೋಗಗಳು ಹರಡುವ ಕ್ರಮ ಮತ್ತು ಇವುಗಳನ್ನು ತಡೆಗಟ್ಟುವ ವಿಧಾನ ಕ್ರಮಗಳ ಬಗ್ಗೆ ಅವರು ವಿವರಿಸಿದರು.

ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ನವೀನ ವಿಧಾನವನ್ನು ಅಳವಡಿಸಿ ಅನುಷ್ಠಾನಗೊಳಿಸುವ ಮೂಲಕ 2025 ರ ವೇಳೆಗೆ ಶೂನ್ಯ ಮಲೇರಿಯಾವನ್ನು ತಲುಪಲು ಆರೋಗ್ಯ ಇಲಾಖೆಯು ಕಾರ್ಯಯೋಜನೆ ರೂಪಿಸಿಕೊಂಡಿದೆ ಎಂದು ಡಾ ಸತೀಶ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಈ ವರ್ಷದಲ್ಲಿ ಈ ತನಕ 92 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಮಳೆ ಕ್ಷೀಣಿಸಿದಂತೆ ಡೆಂಗ್ಯೂ ರೋಗ ಕ್ರಮೇಣವಾಗಿ ಕ್ಷೀಣಿಸಿದೆ ಎಂದರು.
ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಎಲ್ಲಾ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದರು.
ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ,
ಈ ಉಪಯುಕ್ತ ಆರೋಗ್ಯ ಕಾರ್ಯಕ್ರಮದಡಿ ಶಿಕ್ಷಕರು ಮಕ್ಕಳಿಗೆ ಸಾಂಕ್ರಾಮಿಕ ರೋಗ ಹರಡುವ ಎಚ್ಚರಿಕೆ ಹಾಗೂ ಇವುಗಳನ್ನು ತಡೆಗಟ್ಟಲು ಕೈಗೊಳ್ಳುವ ಕುರಿತು ಅವರಲ್ಲಿ ಆರೋಗ್ಯ ಅರಿವು ಮೂಡಿಸುವ ಮೂಲಕ ಸಮುದಾಯದಲ್ಲಿ ಆರೋಗ್ಯ ಅರಿವು ಮೂಡಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಸಹಕಾರಿಯಾಗಿದೆ ಎಂದರು.
ಜಿಲ್ಲಾ ಕಸಾಪ ವತಿಯಿಂದ ಶಾಲಾ ಮಕ್ಕಳಿಗೆ ಕನ್ನಡ ಪರ ಚಟುವಟಿಕೆಗಳೊಂದಿಗೆ ಆರೋಗ್ಯ, ವೈದ್ಯಕೀಯ ಕ್ಷೇತ್ರಕ್ಕೆ ಪೂರಕವಾದ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು ಎಂದು ಕೇಶವಕಾಮತ್ ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ.ಬಿ.ಎಲ್. ಶ್ರೀನಿವಾಸ್, ರೋಗವಾಹಕ ಆಶ್ರಿತ ರೋಗಗಳ ಹರಡುವಿಕೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು.
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದ
ವಿರಾಜಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ , ಮನೆ ಮತ್ತು ಸುತ್ತಮುತ್ತಲಿನ‌ ಸ್ಥಳಗಳಲ್ಲಿ ಟೈರುಗಳು, ತೆಂಗಿನ ಚಿಪ್ಪುಗಳಲ್ಲಿ ಹಾಗೂ ಮನೆಯ ನೀರಿನ ಮೂಲಗಳನ್ನು ಸೊಳ್ಳೆ ಪ್ರವೇಶಿಸದಂತೆ
ಸೊಳ್ಳೆಗಳ ಆಶ್ರಯ ತಾಣ ಗಳನ್ನು ನಿರ್ಮೂಲನೆ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದರು.
ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ರೋಗಗಳು ಹರಡುವ ಕ್ರಮ ಮತ್ತು ಇವುಗಳನ್ನು ತಡೆಗಟ್ಟುವ ವಿಧಾನ ಕ್ರಮಗಳ ಬಗ್ಗೆ ಅವರು ವಿವರಿಸಿದರು.
ಸ್ವಚ್ಛ ಪರಿಸರ ಹಾಗೂ ಆರೋಗ್ಯ ಅರಿವು ಕುರಿತು ಮಾಹಿತಿ ನೀಡಿದ ಸಂಪನ್ಮೂಲ ವ್ಯಕ್ತಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಕುರಿತು ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ವಿವರಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ , ಸ್ಲೈಡ್ಸ್ ಗಳ ಮೂಲಕ ಸೊಳ್ಳೆಗಳ ಹರಡುವಿಕೆ ಮತ್ತು
ಸೊಳ್ಳೆಗಳ ನಿಯಂತ್ರಣದ ಕುರಿತು ಹಾಗೂ ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ ಆರೋಗ್ಯ ರಕ್ಷಣೆ ಕುರಿತು
ಮಾಹಿತಿ ನೀಡಿದರು.

ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ವನಜಾಕ್ಷಿ, ಕಿರಿಯ ಆರೋಗ್ಯ ನಿರೀಕ್ಷಕ ಎಂ.ಪಿ.ಶಶಿಕಾಂತ್, ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಹೇಶ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಅನ್ರಿತಾ ಫುರ್ಟಾಡೋ, ಸಂಘದ ತಾಲ್ಲೂಕು ಘಟಕದ ಕೋಶಾಧಿಕಾರಿ ಡಿ.ಚಂದನ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ಸಿ.ಆರ್ ಪಿ ಬಿ.ಕೆ.ರಾಧಾ, ಬಿ.ಆರ್.ಪಿ ಗೀತಾಂಜಲಿ, ಇತರರು ಇದ್ದರು.
ಬಿ ಆರ್ ಪಿ ಗೀತಾಂಜಲಿ ಕಾರ್ಯಕ್ರಮ ನಿರ್ವಹಿಸಿದರು. ಆರೋಗ್ಯ ಸಹಾಯಕಿ ರುಕ್ಮಿಣಿ ಗೀತೆ ಹಾಡಿದರು.
ಕಾರ್ಯಾಗಾರದಲ್ಲಿ ವಿರಾಜಪೇಟೆ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳ ವಿಜ್ಞಾನ ಹಾಗೂ ಸಂಪನ್ಮೂಲ ಶಿಕ್ಷಕರು ಪಾಲ್ಗೊಂಡಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೯ : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ…

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026

*ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*

ಮಾರ್ಚ್ 9, 2026

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026

*ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.