ಮಡಿಕೇರಿ ಆ.11 : ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧು ರಾಜನ್, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ತಂಗಮ್ಮ ಅವಿರೋಧ ಆಯ್ಕೆ ಆಯ್ಕೆಯಾದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಜಿ.ಪಂ ಮಾಜಿ ಸದಸ್ಯೆ ಸುನೀತಾ ಮಂಜುನಾಥ್, ವಲಯಧ್ಯಕ್ಷ ಮೊಹಮ್ಮದ್ ರಫೀಕ್ , ಕಾರ್ಯದರ್ಶಿ ಝುಬೇರ್, ಕಾಂಗ್ರೆಸ್ ಮುಖಂಡರಾದ ಪಪ್ಪು ತಿಮ್ಮಯ್ಯ, ಜೋಸೆಫ್ ವಿಕ್ಟರ್ ಸೋನ್ಸ್ ಮತ್ತು ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.







