Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*
  • *ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*
  • *10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*
  • *ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*
  • *ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*
  • *ಶ್ರೀ ಭಗೀರಥ ಜಯಂತಿ : ಭಗೀರಥ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ : ಚಿ.ನಾ.ಸೋಮೇಶ್*
  • *ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಮತಾಂತರ ಮತ್ತು ದೌರ್ಜನ್ಯದ ವಿರುದ್ಧ ಪ್ರತಿಭಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ : ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ಮತ್ತು ಸ್ಪಂದನೆ ನೀಡಲು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ : ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ಮತ್ತು ಸ್ಪಂದನೆ ನೀಡಲು ಸೂಚನೆ*

ಆಗಷ್ಟ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.11 : ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಲೋಕಾಯುಕ್ತ ಡಿವೈಎಸ್‍ಪಿ ಎಂ.ಎಸ್.ಪವನ್‍ಕುಮಾರ್ ಅವರು ಅನೀರಿಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು.
ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಚೀಟಿಗಾಗಿ ಸಾಲುಗಟ್ಟಿ ನಿಂತಿದ್ದ ಸಾರ್ವಜನಿಕರನ್ನು ಗಮನಿಸಿದ ಲೋಕಾಯುಕ್ತ ಡಿವೈಎಸ್‍ಪಿ ಅವರು ಹೆಚ್ಚಿನ ಕೌಂಟರ್ ತೆರೆಯುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು.
ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಪ್ರತೀ ನಿತ್ಯ ಸಾರ್ವಜನಿಕರು ಔಷಧಿ ಪಡೆಯಲು ಬರುತ್ತಾರೆ. ಸೂಕ್ತ ಚಿಕಿತ್ಸೆ ಮತ್ತು ಸ್ಪಂದನೆ ದೊರೆಯಬೇಕು. ಯಾರನ್ನು ಕಾಯಿಸಬಾರದು ಎಂದು ಲೋಕಾಯುಕ್ತ ಡಿವೈಎಸ್‍ಪಿ ಎಂ.ಎಸ್.ಪವನ್ ಕುಮಾರ್ ಅವರು ನಿರ್ದೇಶನ ನೀಡಿದರು.
ಬೆಳಗಿನ 9.30 ಗಂಟೆ ವೇಳೆಗೆ ಕೆಲವು ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಹಾಜರಾಗದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಲೋಕಾಯುಕ್ತ ಡಿವೈಎಸ್‍ಪಿ ಅವರು ಸರಿಯಾದ ಸಮಯಕ್ಕೆ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಹಾಜರಾಗಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಅವರು ಸೂಚಿಸಿದರು.
ತಾಲ್ಲೂಕು ಆಸ್ಪತ್ರೆಯಲ್ಲಿ ಔಷಧಿಗಾಗಿ ಹೊರಗಡೆಗೆ ಚೀಟಿ ಬರೆಯುತ್ತಾರೆ ಎಂಬ ದೂರುಗಳು ಇದ್ದು, ಇದನ್ನು ಪರಿಹರಿಸಬೇಕು. ಆಸ್ಪತ್ರೆಯಲ್ಲಿ ಔಷಧಿ ಮತ್ತು ಮಾತ್ರೆ ಲಭ್ಯ ಇಲ್ಲದಿದ್ದಲ್ಲಿ ಆಸ್ಪತ್ರೆ ವೆಚ್ಚದಿಂದಲೇ ತರಿಸಿ ಚಿಕಿತ್ಸೆ ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ಚೀಟಿಯನ್ನು ಹೊರಗೆ ಬರೆಯಬಾರದು ಎಂದು ಲೋಕಾಯುಕ್ತ ಡಿವೈಎಸ್‍ಪಿ ಅವರು ನಿರ್ದೇಶನ ನೀಡಿದರು.
ಯಾವುದೇ ಸರ್ಕಾರಿ ವೈದ್ಯರು ಸರ್ಕಾರಿ ಆಸ್ಪತ್ರೆ ಬಿಟ್ಟು ಹೊರಗೆ ಹೋಗಿ ಖಾಸಗಿ ಕ್ಲೀನಿಕ್‍ನಲ್ಲಿ ಕರ್ತವ್ಯ ನಿರ್ವಹಿಸುವುದು ಕಾನೂನು ಬಾಹಿರವಾಗಿದೆ ಎಂದು ಲೋಕಾಯುಕ್ತ ಡಿವೈಎಸ್‍ಪಿ ತಿಳಿಸಿದ್ದಾರೆ.
ವಿರಾಜಪೇಟೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸೇರಿದಂತೆ ಎಲ್ಲಾ ವೈದ್ಯರು ಸಮವಸ್ತ್ರದಲ್ಲಿ ಕರ್ತವ್ಯ ನಿರ್ವಹಿಸಬೇಕು. ಸರಿಯಾದ ಸಮಯಕ್ಕೆ ಹಾಜರಾಗಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಸೂಚಿಸಿದರು.
ಬಡ ಜನರ ಬಗ್ಗೆ ಕರುಣೆ ಇರಬೇಕು. ಯಾವುದೇ ಕಾರಣಕ್ಕೂ ಚಿಕಿತ್ಸೆ ವಿಳಂಬ ಮಾಡದೆ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದರು.
ಅಧಿಕಾರಿಗಳ ಜತೆ ಸಭೆ: ಲೋಕಾಯುಕ್ತ ಡಿವೈಎಸ್‍ಪಿ ಎಂ.ಎಸ್. ಪವನ್ ಕುಮಾರ್ ಅವರು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಸಾರ್ವಜನಿಕರಿಗೆ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ದೂರುಗಳು ಬರದಂತೆ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಹಣವನ್ನು ಸರಿಯಾಗಿ ಬಳಸಬೇಕು ಎಂದು ಸೂಚಿಸಿದರು. ದೂರು ಸ್ವೀಕಾರ ಸಂದರ್ಭದಲ್ಲಿ 5 ದೂರುಗಳು ದಾಖಲಾಗಿದ್ದು, ಈ ಸಂಬಂಧ ಪರಿಹರಿಸಲಾಗುವುದು ಎಂದು ಪವನ್ ಕುಮಾರ್ ಅವರು ಮಾಹಿತಿ ನೀಡಿದರು. ಲೋಕಾಯುಕ್ತ ಡಿವೈಎಸ್‍ಪಿ ಜೊತೆ ಸಿಬ್ಬಂದಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*

ಏಪ್ರಿಲ್ 23, 2026

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*

ಏಪ್ರಿಲ್ 23, 2026

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.23 NEWS DESK : ಪ್ರತಿಭೆ ಮತ್ತು ಕ್ರೀಡಾ ಚೈತನ್ಯ ಹೊಮ್ಮಿಸಿದ ಸಮಾಗಮ ಬೇಸಿಗೆ ಶಿಬಿರ ವಿವಿಧ ಕಲಾ…

*10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*

ಏಪ್ರಿಲ್ 23, 2026

*ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*

ಏಪ್ರಿಲ್ 23, 2026

*ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*

ಏಪ್ರಿಲ್ 23, 2026

*ಶ್ರೀ ಭಗೀರಥ ಜಯಂತಿ : ಭಗೀರಥ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ : ಚಿ.ನಾ.ಸೋಮೇಶ್*

ಏಪ್ರಿಲ್ 23, 2026

*ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಏಪ್ರಿಲ್ 23, 2026

*ಮತಾಂತರ ಮತ್ತು ದೌರ್ಜನ್ಯದ ವಿರುದ್ಧ ಪ್ರತಿಭಟನೆ*

ಏಪ್ರಿಲ್ 23, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 23, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*

ಏಪ್ರಿಲ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.