ಮಡಿಕೇರಿ ಆ.13 : ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರೆಕಾಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ದೇವಪ್ಪ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಸಿದ್ದಾಪುರ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ನೋಡಿದ ನಂತರ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರುಗಳು ಕಾಡಾನೆ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.









