Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
  • *ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
  • *ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ*

ಆಗಷ್ಟ್ 14, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.14 : ಕಳೆದ ಮೂರು ತಿಂಗಳಲ್ಲಿ ಕಾಡಾನೆ ದಾಳಿಯಿಂದ 44 ಪ್ರಕರಣಗಳು ವರದಿಯಾಗಿದ್ದು, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸೋಮವಾರಪೇಟೆಯ ತಾ.ಪಂ.ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕಾಡಾನೆ ಹಾವಳಿಯಿಂದ ಸಿದ್ದಾಪುರ ಬಳಿಯ ಅರೆಕಾಡು ಸಮೀಪದಲ್ಲಿ ಭಾನುವಾರ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆಗಳನ್ನು ಕಾಡು ಪ್ರದೇಶಕ್ಕೆ ಓಡಿಸುವ ಸಂದರ್ಭದಲ್ಲಿ ಸ್ಥಳೀಯರಿಗೆ ಮಾಹಿತಿ ನೀಡಬೇಕು. ಮುಂಚಿತವಾಗಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಕಾಡಾನೆ ಹಾವಳಿ ನಿಯಂತ್ರಣಕ್ಕೆ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಹೀಗೆ ಹಲವು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು.
ವಿಷಯ ಪ್ರಸ್ತಾಪಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಕಾಡಾನೆಗಳನ್ನು ಓಡಿಸುವ ಬಗ್ಗೆ ಸ್ಥಳೀಯರಿಗೆ ಮೊದಲೇ ಮಾಹಿತಿ ನೀಡಬೇಕು. ಅರಣ್ಯ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಮನುಷ್ಯನ ಜೀವಕ್ಕೆ ಬೆಲೆಕೊಡಬೇಕು. ಕಾಡಾನೆ ಹಾವಳಿಗೆ ತುತ್ತಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ವಿತರಿಸಬೇಕು ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರು ಕಳೆದ ಒಂದು ವರ್ಷದಿಂದ ಪರಿಹಾರ ನೀಡಲು 70 ಲಕ್ಷ ರೂ. ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ಕಾಲಮಿತಿಯಲ್ಲಿ ತಲುಪಿಸಬೇಕು. 94 ಸಿ ಅಡಿ 955 ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಆದ್ಯತೆ ಮೇಲೆ ಪರಿಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಸೋಮವಾರಪೇಟೆ ತಾಲ್ಲೂಕಿನಲ್ಲಿ 94ಸಿ ಸಂಬಂಧಿಸಿದಂತೆ 15 ವರ್ಷಗಳಿಂದ ಅರ್ಜಿಗಳ ವಿಲೇವಾರಿಗೆ ಬಾಕಿ ಇದೆ. ಸಕಾಲದಲ್ಲಿ ಅರ್ಜಿ ಇತ್ಯರ್ಥಪಡಿಸಬೇಕು ಎಂದು ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಷ್ಟು ಅರ್ಜಿಗಳು ಬಾಕಿ ಇವೆ ಎಂಬುದನ್ನು ಪಟ್ಟಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಬೇಕು. ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಹಿಂಬರಹವನ್ನಾದರೂ ನೀಡಿ ಬಗೆಹರಿಸಬೇಕು ಎಂದರು.
ಸರ್ಕಾರದ ನಿರ್ದೇಶನದಂತೆ 94ಸಿ, 94ಸಿಸಿ ಅಡಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸೋಮವಾರಪೇಟೆ ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ನಮೂನೆ 50, 53 ಅರ್ಜಿಗಳನ್ನು ವಿಲೇವಾರಿ ಮಾಡಿದ ನಂತರ ನಮೂನೆ 57 ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.
94ಸಿ, 94ಸಿಸಿ ರಡಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುವುದು ಎಂದು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮಾಹಿತಿ ನೀಡಿದರು.
ಪಡಿತರ ಚೀಟಿ ಸಂಬಂಧಿಸಿದಂತೆ ಆಧಾರ್ ಲಿಂಕ್ ಮಾಡಬೇಕು. ಈ ಸಂಬಂಧ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಆಗಸ್ಟ್ ಅಂತ್ಯದೊಳಗೆ 3 ಸಾವಿರ ಕುಟುಂಬಗಳಿಗೆ ಆಧಾರ್‍ಗೆ ಕೆವೈಸಿ ಲಿಂಕ್ ಆಗಬೇಕಿದೆ. ಈ ಸಂಬಂಧ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಬೇಕು. ದೂರು ಬರದಂತೆ ವಿಶೇಷ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎಸ್.ಭೋಸರಾಜು, ಸಾಮಾನ್ಯ ಜನರಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು. ಬಡವರ ಬಗ್ಗೆ ಕಾಳಜಿ ಇರಬೇಕು. ಶಿಕ್ಷಣ ಮತ್ತು ಆರೋಗ್ಯ ಜೊತೆಗೆ ಕಂದಾಯ ಇಲಾಖೆ ಕಾರ್ಯಕ್ರಮಗಳು ಅರ್ಹ ಬಡ ಜನರಿಗೆ ತಲುಪಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಮತ್ತು ತಾ.ಪಂ.ಇಒಗಳಿಗೆ ಸ್ಥಳೀಯ ಸಮಸ್ಯೆಗಳು ಹತ್ತಿರದಲ್ಲಿ ತಿಳಿಯಲಿವೆ. ಆ ನಿಟ್ಟಿನಲ್ಲಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಂದಾಗಬೇಕು ಎಂದು ಹೇಳಿದರು.
ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕೈಗೊಳ್ಳಬೇಕು. ಬಳಗುಂದ ಗ್ರಾಮದಲ್ಲಿ ಕುಡಿಯುವ ನೀರು ಚೆನ್ನಾಗಿಲ್ಲ ಎಂಬ ಬಗ್ಗೆ ದೂರುಗಳು ಬಂದಿದ್ದು, ಪೈಪು ಒಡೆದಿದೆಯೋ ಏನು ಎಂಬುದನ್ನು ತಕ್ಷಣವೇ ಪರಿಶೀಲಿಸಿ ಸರಿಪಡಿಸುವಂತೆ ಸಂಬಂಧಪಟ್ಟ ಎಂಜನಿಯರ್ ಗಳಿಗೆ ಸೂಚಿಸಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಎಂಜಿನಿಯರ್‍ಗಳು, ತಾ.ಪಂ.ಇಒ ಮತ್ತು ಪಿಡಿಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜಲಜೀವನ್ ಮಿಷನ್ ಯೋಜನೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಕೈಗೊಳ್ಳಲಾಗುವುದು. ಕೊಡಗು ಜಿಲ್ಲೆಯಿಂದ 10 ಮಂದಿ ಪಿಡಿಒಗಳು ವರ್ಗಾವಣೆಗೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ತಾ.ಪಂ.ಇಒ ಜಯಣ್ಣ ಅವರು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ ಒಟ್ಟು 39 ಗ್ರಾ.ಪಂ.ಗಳು ಇದ್ದು, 32 ಪಿಡಿಒಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಶಾಂತಳ್ಳಿ, ಸೂರ್ಲಬ್ಬಿ, ಗರ್ವಾಲೆ ಮತ್ತಿತರ ಕಡೆಗಳಲ್ಲಿ ಕಾಫಿ ಮತ್ತಿತರ ಬೆಳೆಗೆ ಹಾನಿಯಾಗಿದ್ದು, ನಿಖರ ವರದಿ ನೀಡುವಂತೆ ಶಾಸಕರು ಸೂಚಿಸಿದರು.
ಕೃಷಿ ಜೊತೆಗೆ ಮೀನು ಕೃಷಿಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಡಾ.ಮಂತರ್ ಗೌಡ ಸಲಹೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಧ್ಯಾಹ್ನದ ವೇಳೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಬಿಸಿ ಊಟವನ್ನು ನೀಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ಆಗಾಗ ಭೇಟಿ ನೀಡಿ ಪರಿಶೀಲಿಸುವಂತೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಅವರು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ 47 ವಿದ್ಯಾರ್ಥಿಗಳು ಶಾಲೆಯಿಂದ ಹೊರಗಿದ್ದಾರೆ ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಗಿದೆ ಎಂದು ತಿಳಿಸಿದರು.
ಅಂಗನವಾಡಿಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಯಾಗಬೇಕು. ಗುಣಮಟ್ಟದ ಮೊಟ್ಟೆ ಪೂರೈಸಬೇಕು. ಮಕ್ಕಳ ಹಾಜರಾತಿಯನ್ನು ನಿಖರವಾಗಿ ಬರೆಯಬೇಕು ಎಂದು ನಿರ್ದೇಶನ ನೀಡಿದರು.
ಬಡವರ ಮಕ್ಕಳಿಗೆ ನೀಡುವ ಕಾರ್ಯಕ್ರಮದಲ್ಲಿ ಮೋಸ ಮಾಡಬಾರದು. ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಸ್ಥಿತಿ ತಿಳಿದುಕೊಳ್ಳಬೇಕು. ತಪ್ಪು ಆಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ಗಳು ಮಳೆಯಿಂದ ರಸ್ತೆ, ಸೇತುವೆಗಳು ಹಾನಿಯಾಗಿದ್ದಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು. ಆದ್ಯತೆ ಮೇಲೆ ಗ್ರಾಮೀಣ ರಸ್ತೆಗಳನ್ನು ಸರಿಪಡಿಸುವಂತೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದ್ದು, 5 ಮಂದಿ ಈಗಾಗಲೇ ವರ್ಗಾವಣೆ ಆಗಿದ್ದಾರೆ ಎಂದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರು ಮುಂದೆ ಬರುತ್ತಿಲ್ಲ ಎಂದರು.
ಪಶುಪಾಲನೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಇಲಾಖೆ ಕಾರ್ಯಕ್ರಮಗಳನ್ನು ಬಡ ಜನರಿಗೆ ತಲುಪಿಸುವಂತೆ ಬಡ ಜನರಿಗೆ ತಲುಪಿಸುವಂತೆ ಡಾ.ಮಂತರ್ ಗೌಡ ಅವರು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.9 : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ…

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026

*ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*

ಮಾರ್ಚ್ 8, 2026

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.