ಮಡಿಕೇರಿ ಆ.14 : ಕರ್ನಾಟಕ ಸರ್ಕಾರ, ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಆ.15 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು `ಗೃಹ ಜ್ಯೋತಿ ಯೋಜನೆಗೆ ಚಾಲನೆ’ ದೊರೆಯಲಿದೆ.
ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಪಾಲ್ಗೊಳ್ಳಲಿದ್ದಾರೆ.
ಮೈಸೂರು ಚಾ.ವಿ.ಸ.ನಿ.ನಿ. ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ, ನಿರ್ದೇಶಕ (ತಾಂತ್ರಿಕ) ಕೆ.ವಿ.ಉಮೇಶ್‍ಚಂದ್ರ, ಮುಖ್ಯ ಎಂಜಿನಿಯರ್(ವಿ) ಕೆ.ಎಂ.ಮಹದೇವಸ್ವಾಮಿ ಪ್ರಸನ್ನ, ಮುಖ್ಯ ಆರ್ಥಿಕ ಅಧಿಕಾರಿ ಕೆ.ಶೇಕ್ ಮೊಹ್ಮದ್ ಮಹೀಮುಲ್ಲಾ, ಪ್ರಧಾನ ವ್ಯವಸ್ಥಾಪಕರಾದ(ಆ ಮತ್ತು ಮಾ ಸಂ) ಪಿ.ರವಿಕುಮಾರ್, ಚಾಮರಾಜನಗರ-ಕೊಡಗು ಚಾ.ವಿ.ಸ.ನಿ.ನಿ. ಅಧೀಕ್ಷಕ ಎಂಜಿನಿಯರ್ ಎಂ.ಕೆ.ಸೋಮಶೇಖರ್, ಮಡಿಕೇರಿ ಚಾ.ವಿ.ಸ.ನಿ.ನಿ. ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಸ್.ಅನಿತ ಬಾಯಿ ಇತರರು ಪಾಲ್ಗೊಳ್ಳಲಿದ್ದಾರೆ.







