Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಗಮನ ಸೆಳೆದ “ಆಟಿ ಜಂಬರ” : ಭಾಷೆ ಉಳಿದರೆ ಸಂಸ್ಕೃತಿ ಉಳಿಯಲು ಸಾಧ್ಯ : ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಗಮನ ಸೆಳೆದ “ಆಟಿ ಜಂಬರ” : ಭಾಷೆ ಉಳಿದರೆ ಸಂಸ್ಕೃತಿ ಉಳಿಯಲು ಸಾಧ್ಯ : ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ*

ಆಗಷ್ಟ್ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.15 : ಭಾಷೆ ಉಳಿದರೆ ಮಾತ್ರ ನಮ್ಮ ಆಚಾರ, ವಿಚಾರ, ಸಂಸ್ಕೃತಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜನಾಂಗದ ಹಿರಿಯರು ಪಾಲಿಸಿಕೊಂಡು ಬಂದ ತಮ್ಮ ಪದ್ಧತಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹೇಳಿದರು.
ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಗೌಡ ಯುವ ವೇದಿಕೆ ಮಡಿಕೇರಿ ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಹಯೋಗದಲ್ಲಿ ಪಾರಾಣೆ ಗೌಡ ಸಮಾಜದಲ್ಲಿ ಏರ್ಪಡಿಸಲಾಗಿದ್ದ ಆಟಿ ಜಂಬರ 2023 ರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನಿಂದಲೂ ನಡೆದು ಬಂದ ಪದ್ಧತಿ ಪರಂಪರೆಗಳನ್ನು ಮರೆಯಬಾರದು. ಜಿಲ್ಲೆಯ ಪರಿಸರ ಉತ್ತಮವಾಗಿದ್ದು, ಸಮಾಜ ಬಾಂಧವರು ತಮ್ಮ ಭೂಮಿಗಳನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಮಾರ್ಗದರ್ಶಕ ರಾಗಬೇಕೆಂದರು.
ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ ಅನಂತಶಯನ ಮಾತನಾಡಿ, ಮನುಷ್ಯನಾಗಿ ಹುಟ್ಟಲು ಪುಣ್ಯ ಪಡೆದಿರಬೇಕು. ಅದರಲ್ಲೂ ಜಿಲ್ಲೆಯಲ್ಲಿ ಹುಟ್ಟಿದವರು ಪುಣ್ಯವಂತರು.ಇಂದಿನ ಜನಾಂಗ ಆಚರಿಸುತ್ತಿರುವಂತಹ ಕಾರ್ಯಕ್ರಮಗಳು ಕಳೆದುಹೋದ ಸಂಪ್ರದಾಯವನ್ನು ನೆನಪಿಸುತ್ತಿವೆ.ಇಂದಿನ ದಿನಗಳಲ್ಲಿ ಸ್ವಾರ್ಥ ಮೆರೆಯುತ್ತಿದ್ದು, ಸಾಮೂಹಿಕವಾಗಿ ಒಗ್ಗೂಡುವುದು ಅಪರೂಪವಾಗುತ್ತಿದೆ. ಗೌಡ ಜನಾಂಗ ಸಂಸ್ಕೃತಿ ಸಂಪ್ರದಾಯದ ಉಳಿವಿಕೆಗಾಗಿ ಒಗ್ಗಟು ಪ್ರದರ್ಶಿಸಿರುವುದು ಶ್ಲಾಘನೀಯ ಎಂದರು.
ಇಂತಹ ಕಾರ್ಯಕ್ರಮಗಳು ಕೇವಲ ಮನರಂಜನೆಗಷ್ಟೇ ಅಲ್ಲ. ಒಗ್ಗಟ್ಟು ಪ್ರದರ್ಶಿಸಲು ನೆರವಾಗುತ್ತದೆ. ಸೀಮಿತ ಬದುಕಿನಲ್ಲಿ ಇರುವಷ್ಟು ದಿನ ಸುಂದರ ಬದುಕು ರೂಪಿಸುವುದು ಅತ್ಯಗತ್ಯ ಎಂದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಮಾತನಾಡಿ ಭಾಷೆ,ಸಂಸ್ಕೃತಿ ನಾಶವಾದರೆ ಒಂದು ಜನಾಂಗದ ನಾಗರಿಕತೆಯೆ ನಾಶವಾದಂತೆ. ಮಕ್ಕಳಿಗೆ ಮನೆಯಿಂದಲೇ ಕಲಿಸುವ ಕೆಲಸ ಆಗಬೇಕು. ಸಾಂಪ್ರದಾಯಿಕ ತಿಂಡಿ,ತಿನಿಸು, ಹಣ್ಣು ಸೇರಿದಂತೆ ಜಾನಪದ ಸಂಸ್ಕೃತಿಯ ಅರಿವನ್ನು ಮಕ್ಕಳಿಗೆ ಮಕ್ಕಳಿಗೆ ಮೂಡಿಸಬೇಕು ಎಂದರು.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಗೌಡ ಯುವ ವೇದಿಕೆಯಿಂದ ಜಾನಪದ ಲೋಕ ನಿರ್ಮಾಣವಾಗಿದೆ. ಅಪರೂಪದ ಕಾರ್ಯಕ್ರಮದ ಮೂಲಕ ಜನರನ್ನು ಒಗ್ಗೂಡಿಸುವಲ್ಲಿ ಯುವ ವೇದಿಕೆ ಮತ್ತು ಯುವಕ ಸಂಘ ಯಶಸ್ವಿಯಾಗಿದೆ ಎಂದರು.
ಹಿಂದಿನ ಸಂಸ್ಕೃತಿಯ ಜೊತೆಗೆ ಸಾಹಿತ್ಯವನ್ನೂ ಪಸರಿಸುವಂತಹ ಕೆಲಸ ಸಹ ಆಗಬೇಕು ಎಂದು ಆಶಿಸಿದರು.
ಮೈಸೂರು ಶೇಷಾದ್ರಿಪುರಂ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಕೊಟ್ಟಕೇರಿಯನ ಡಾ.ಸಿ.ಪಿ.ಲಾವಣ್ಯ ಆಟಿ ತಿಂಗಳ ವಿಶೇಷತೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪದ್ಧತಿ.ನಂಬಿಕೆ, ಆಚರಣೆಯನ್ನು ಪಾಲಿಸಿಕೊಂಡು ಬರಲಾಗುತ್ತಿದೆ. ಹಿರಿಯರ ಬದುಕಿನ ಕ್ರಮ ಶಿಸ್ತುಅನ್ನು ನಾವು ಪಾಲಿಸುವುದರ ಮೂಲಕ ಮುಂದಿನ ಪೀಳಿಗೆಗೆ ಪಸರಿಸುವಂತ ಕೆಲಸ ಮಾಡಬೇಕು ಎಂದರು.
ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ ಮಾತನಾಡಿ, ಗೌಡ ಸಮಾಜದ ಕಟ್ಟಡದ ಅಭಿವೃದ್ಧಿಗೆ ಸಹಕರಿಸುವಂತೆ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರಿಗೆ ಮನವಿ ಪತ್ರವನ್ನು ನೀಡಿದರು.
ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್ ಮಾತನಾಡಿದರು. ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತಲೆ ಜಗದೀಶ್ ಮಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತೋಟಂಬೈಲು ಬಿಂದು ಮಂತನ್ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಅಯ್ಯಪ್ಪ ಯುವಕ ಸಂಘದ ಗೌರವ ಅಧ್ಯಕ್ಷ ತೋಟಂಬೈಲು ಅನಂತಕುಮಾರ್ ಸ್ವಾಗತಿಸಿ ಮೂಡಗದ್ದೆ ವಿನೋದ್, ಪ್ಕೋಳಂಡ್ರ ಧನುಜ್, ಕಟ್ಟೆ ಮನೆ ಸೋನಾಜಿತ್ ಕಾರ್ಯಕ್ರಮ ನಿರೂಪಿಸಿದರು. ಪುದಿಯನೆರವನ ರಿಷಿತ್ ವಂದಿಸಿದರು.
ಈ ಸಂದರ್ಭ ಆಟಿ ಸಾಂಪ್ರದಾಯಿಕ ಅಡುಗೆ ತಿನಿಸುಗಳ ಸ್ಪರ್ಧೆ, ಆಟೋಟ ಪ್ರದರ್ಶನ, ಅರೆ ಭಾಷೆ ಜಾನಪದ ಹಾಡು, ಗುಂಪು ನೃತ್ಯ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮದ್ದು ಸೊಪ್ಪು, ಕೆಸ, ನಾಡು ಕೋಳಿ, ಎಸೆಂಡ್ ಕಡಿಮೆ ಸೇರಿದಂತೆ ವಿವಿಧ ಅಡುಗೆ ಪೈಪೋಟಿಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ನಶಿಸಿ ಹೋಗುತ್ತಿರುವ ಬಾರಿ ಅಪರೂಪದ ವಿವಿಧ ಪರಿಕರಗಲು ಹಾಗೂ ಕಾಡು ಹಣ್ಣುಗಳ ಪ್ರದರ್ಶನ ಆಟಿ ಆಟೋಟ ಪ್ರದರ್ಶನ ಗಮನ ಸೆಳೆಯಿತು.

ಸಭಾ ಕಾರ್ಯಕ್ರಮಕ್ಕೂ ಮೊದಲು ಆಟಿ ಜಂಬರ ಕಾರ್ಯಕ್ರಮವನ್ನು ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ ಜ್ಯೋತಿ ಬೆಳಗಿಸಿ ಸಮಾಜದ ಆವರಣದಲ್ಲಿ ನಿರ್ಮಿಸಲಾದ ಗದ್ದೆಯಲ್ಲಿ ಭತ್ತದ ಸಸಿ ನಾಟಿ ಮಾಡುವುದರ ಮೂಲಕ ಉದ್ಘಾಟನೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಿಯಂಡ್ರ ಹರಿಪ್ರಸಾದ್ ವಹಿಸಿದ್ದು, ಅಯ್ಯಪ್ಪ ಯುವಕ ಸಂಘದ ಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸೈನಿಕ ಬೆಳಿಯಂಡ್ರ ಲಕ್ಷ್ಮಣ್, ಕಾರ್ಯಕ್ರಮದಲ್ಲಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತಲೆ ಜಗದೀಶ್ ಮಂದಪ್ಪ ಹಾಜರಿದ್ದರು.
ಅಯ್ಯಪ್ಪ ಯುವಕ ಸಂಘದ ಗೌರವ ಅಧ್ಯಕ್ಷ ತೋಟಂಬೈಲು ಅನಂತಕುಮಾರ್ ಒಕ್ಕಣೆ ಯನ್ನು ನೆರವೇರಿಸಿದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.