Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೃಹ ಜ್ಯೋತಿ ಯೋಜನೆಗೆ ಚಾಲನೆ :  ಬಡ ಜನರ ಸುಸ್ಥಿರ ಬದುಕಿಗೆ ಸರ್ಕಾರದ ಗ್ಯಾರಂಟಿ ಯೋಜನೆ ಸಹಕಾರಿ: ಸಚಿವ ಭೋಸರಾಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೃಹ ಜ್ಯೋತಿ ಯೋಜನೆಗೆ ಚಾಲನೆ :  ಬಡ ಜನರ ಸುಸ್ಥಿರ ಬದುಕಿಗೆ ಸರ್ಕಾರದ ಗ್ಯಾರಂಟಿ ಯೋಜನೆ ಸಹಕಾರಿ: ಸಚಿವ ಭೋಸರಾಜು*

ಆಗಷ್ಟ್ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.15 : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಜೊತೆಗೆ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು  ತಿಳಿಸಿದ್ದಾರೆ.
ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ‘ಉಚಿತ ಬೆಳಕು, ಸುಸ್ಥಿರ ಬದುಕು’ ಕಾರ್ಯಕ್ರಮದಡಿ ‘ಶೂನ್ಯ ವಿದ್ಯುತ್ ಬಿಲ್ಲು’ ನೀಡುವ ಮೂಲಕ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಮತ್ತು ರಾಷ್ಟ್ರ ಅಭಿವೃದ್ಧಿ ಹೊಂದಲು ಎಲ್ಲಾ ಜಾತಿ, ಉಪ ಜಾತಿ, ಧರ್ಮದ ಜನರ ಜೀವನ ಮಟ್ಟ ಸುಧಾರಣೆ ಕಂಡಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ 5 ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆಗಳನ್ನು ಈಗಾಗಲೇ ಕಾರ್ಯರೂಪಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 1.30 ಲಕ್ಷ ಮಂದಿ ಹೆಸರು ನೋಂದಾಯಿಸಿದ್ದು, 2.90 ಕೋಟಿ ರೂ ವನ್ನು ಸರ್ಕಾರ ಭರಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗೃಹ ಜ್ಯೋತಿ ಜೊತೆಗೆ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಹೀಗೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಾರ್ಷಿಕ 60 ಸಾವಿರ ಕೋಟಿ ರೂ ಭರಿಸುತ್ತದೆ. ಡಿಸೆಂಬರ್ ವೇಳೆಗೆ ಎಲ್ಲಾ ಯೋಜನೆಗಳು ಜಾರಿಗೊಳ್ಳಲಿವೆ ಎಂದು ಎನ್.ಎಸ್.ಭೋಸರಾಜು  ತಿಳಿಸಿದರು.
ಇಂದಿನ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಗಗನಕ್ಕೆರಿದ್ದು, ಸಾಧ್ಯವಾದಷ್ಟು ಬಡ ಜನರಿಗೆ ಉತ್ತಮ ಜೀವನ ನಡೆಸಲು ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಲಿವೆ ಎಂದು ಸಚಿವರು ನುಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ತಳ ಸಮುದಾಯಗಳ ಜನರನ್ನು ಮೇಲೆತ್ತಲು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಹಿಂದೆ ಸರ್ಕಾರಿ ಬಸ್‍ಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಪ್ರಯಾಣ ಮಾಡುತ್ತಿದ್ದರು, ‘ಶಕ್ತಿ’ ಯೋಜನೆ ಜಾರಿಗೊಂಡ ನಂತರ ಬಸ್‍ನ ಆಸನಗಳು ಭರ್ತಿಯಾಗಿ ಸಂಚರಿಸುತ್ತಿದ್ದು, ಸರ್ಕಾರಿ ಸಾರಿಗೆ ಸಂಸ್ಥೆ ಮತ್ತಷ್ಟು ಸದೃಢವಾಗುವತ್ತ ಸಾಗಿದೆ ಎಂದು ಎ.ಎಸ್.ಪೊನ್ನಣ್ಣ  ವಿವರಿಸಿದರು.
ಅನ್ನಭಾಗ್ಯ ಯೋಜನೆ ಬಗ್ಗೆ ಮಾತನಾಡಿದ ಪೊನ್ನಣ್ಣ ಅವರು ಕೇಂದ್ರ ಆಹಾರ ನಿಗಮವು ‘ಅಕ್ಕಿ’ ನೀಡಲಾಗುವುದು ಎಂದು ಹೇಳಿ ನೀಡಲಿಲ್ಲ, ಆದರೂ ಸರ್ಕಾರ ಹಣ ನೀಡಲು ಮುಂದಾಯಿತು. ಆ ನಿಟ್ಟಿನಲ್ಲಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹೇಳಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಜನರ ಆರ್ಥಿಕ ಸುಧಾರಣೆಗೆ ಸಹಕಾರಿ ಆಗಿದೆ. ಸರ್ಕಾರ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಪತ್ತನ್ನು ಕ್ರೋಡಿಕರಿಸಿ ಎಲ್ಲರಿಗೂ ಹಂಚಿತ್ತಿದೆ ಎಂದರು.
ಇಂದಿನ ಆಧುನಿಕ ವೇಗದ ಬದುಕಿನಲ್ಲಿ ಜಾತಿ, ಮತ, ಪಂಥ, ಧರ್ಮ ಎಂಬುದು ಅಪ್ರಸ್ತುತ ಎಂದರೆ ಅತಿಶಯೋಕ್ತಿಯಲ್ಲ ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಗೃಹ ಜ್ಯೋತಿ ಯೋಜನೆಯಡಿ 1.68 ಲಕ್ಷ ಕುಟುಂಬಗಳ ಗುರಿಯಲ್ಲಿ, 1.29 ಲಕ್ಷ ಕುಟುಂಬಗಳು ಮಾತ್ರ ಹೆಸರು ನೋಂದಾಯಿಸಿದ್ದು, ಬಾಕಿ ಕುಟುಂಬಗಳ ಹೆಸರು ನೋಂದಣಿಗೆ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಬಡ ಜನರನ್ನು ಮೇಲೇತ್ತುವುದು ಸರ್ಕಾರದ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಬಡವರ ಪರ ಇದೆ. ಗೃಹ ಜ್ಯೋತಿ ಕಾರ್ಯಕ್ರಮದಿಂದ ಯಾವುದೇ ರೀತಿಯ ದುರುಪಯೋಗ ಇಲ್ಲ, 200 ಯುನಿಟ್ ಮೀರಿದ್ದಲ್ಲಿ ವಿದ್ಯುತ್ ಬಿಲ್ಲು ಪಾವತಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಡಾ.ಮಂತರ್ ಗೌಡ  ತಿಳಿಸಿದರು.
ಕೊಡಗು ಸೆಸ್ಕ್ ವಿಭಾಗದಿಂದ 30 ಕ್ಕೂ ಹೆಚ್ಚು ಮಂದಿ ವರ್ಗಾವಣೆಗೆ ಶಿಫಾರಸು ಆಗಿದ್ದು, ಈ ಪ್ರಕ್ರಿಯೆಯನ್ನು ತಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಶಾಸಕರು ಮನವಿ ಮಾಡಿದರು.

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ  ಮಾತನಾಡಿ, ಉಚಿತವಾಗಿ ಪಡೆಯುವ ಸೌಲಭ್ಯಗಳನ್ನು ಸರಿಯಾಗಿ ಬಳಸಬೇಕು. ಬೇಕಾಬಿಟ್ಟಿಯಾಗಿ ಬಳಸಿದರೆ, ತಮಗೆ(ಸಾರ್ವಜನಿಕರಿಗೆ) ಹೊರೆ ಎಂಬುದನ್ನು ಮರೆಯಬಾರದು ಎಂದರು.
ಉಚಿತ ಯೋಜನೆ ನೀಡುತ್ತಿರುವುದು ಸಹ ಸಾರ್ವಜನಿಕರ ತೆರಿಗೆ ಹಣ ಎಂಬುದನ್ನು ಮರೆಯಬಾರದು, ಉಚಿತ ಯೋಜನೆಗಳಿಗೆ ಕೆಲವು ನಿರ್ಬಂಧ ಹೇರಬೇಕು ಎಂದು ಅನಿತಾ ಪೂವಯ್ಯ ಅವರು ಸಲಹೆ ಮಾಡಿದರು.
ಎಲ್ಲರೂ ಒಟ್ಟುಗೂಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅನಿತಾ ಪೂವಯ್ಯ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಅಧೀಕ್ಷಕ ಎಂಜಿನಿಯರ್ ಎಂ.ಕೆ.ಸೋಮಶೇಖರ್, ಸೆಸ್ಕ್ ಇಇ ಅನಿತ ಬಾಯಿ, ಡೀನಾ ಪರ್ಲಕೋಟಿ ಇತರರು ಇದ್ದರು. ಕೃಷ್ಣರಾಜು ಮತ್ತು ತಂಡದವರು ನಾಡಗೀತೆ ಹಾಡಿದರು. 

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.