ಮಡಿಕೇರಿ ಆ.18 : ಕರ್ಣಂಗೇರಿ ವಿದ್ಯಾಭಾರತಿ ಬಡಾವಣೆಯ ಸ್ಫೂರ್ತಿ ಯುವ ಸಂಘದ ವತಿಯಿಂದ ಸೆ.19 ರಂದು 13ನೇ ವರ್ಷದ ಗೌರಿ ಗಣೇಶೋತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ 7 ಗಂಟೆಗೆ ಗಣೇಶ ಮೂರ್ತಿಯನ್ನು ಗಣಪತಿ ಹೋಮದೊಂದಿಗೆ ಪ್ರತಿಷ್ಠಾಪಿಸಿ, ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ.
ಸೆ.23 ರಂದು ಸಂಜೆ 6 ಗಂಟೆಗೆ ಗಣೇಶ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಮನವಿ ಮಾಡಿದೆ.







