Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಅರಸು ಜನ್ಮ ದಿನಾಚರಣೆ : ಡಿ.ದೇವರಾಜ ಅರಸು ಬಡವರು ಹಾಗೂ ಹಿಂದುಳಿದ ವರ್ಗಗಳ ಆಶಾಕಿರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಅರಸು ಜನ್ಮ ದಿನಾಚರಣೆ : ಡಿ.ದೇವರಾಜ ಅರಸು ಬಡವರು ಹಾಗೂ ಹಿಂದುಳಿದ ವರ್ಗಗಳ ಆಶಾಕಿರಣ*

ಆಗಷ್ಟ್ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.20 : ಉಳುವವನೇ ಭೂಮಿಯ ಒಡೆಯ, ಶಾಲಾ-ಕಾಲೇಜು ಆರಂಭ, ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಜೀತಪದ್ಧತಿ ನಿರ್ಮೂಲನೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ಡಿ.ದೇವರಾಜ ಅರಸು ಅವರು ಹತ್ತಿರವಾಗಿದ್ದರು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಮರಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108 ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳು ಹಾಗೂ ಇತರೆ ಸಣ್ಣ ಸಣ್ಣ ಸಮಾಜಗಳನ್ನು ಗುರ್ತಿಸಿ ಮೇಲೆತ್ತಲು ಶ್ರಮಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದರು.
‘ಡಿ.ದೇವರಾಜ ಅರಸು ಅವರು ಬಡವರ ಬಗ್ಗೆ ಸದಾ ಸಾಮಾಜಿಕ ಕಳಕಳಿ ಹೊಂದಿದ್ದರು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದರು. ದೇವರಾಜ ಅರಸು ಅವರಂತೆ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಧ್ವನಿಯಾಗಿ, ಹಿಂದುಳಿದ ವರ್ಗದವರ ಕಣ್ಮಣಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಂತರ್ ಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.’
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ 70 ರ ದಶಕದಲ್ಲಿ ಅರಸು ಅವರು ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಕಾರ್ಯಕ್ರಮಗಳು ಇಂದಿನ ಯುವಜನರು ಅನುಭವಿಸುತ್ತಿದ್ದಾರೆ ಎಂದರು.
ಅರಸು ಅವರ ತತ್ವ, ಸಿದ್ದಾಂತ, ಮೌಲ್ಯ ಹಾಗೂ ಸಂದೇಶಗಳು ಸಾರ್ವಕಾಲಿಕವಾಗಿವೆ. ಗ್ರಾಮೀಣ ಬದುಕಿನೊಂದಿಗೆ ಆರಂಭವಾದ ಅವರ ಸಾಮಾಜಿಕ ಜೀವನ ಹಲವು ಏಳುಬೀಳುಗಳ ನಡುವೆಯೂ ರಾಜ್ಯದಲ್ಲಿ ಪ್ರಜ್ವಲಿಸಿ ಬಡವರಿಗೆ ಧ್ವನಿಯಾದರು. ಶಿಕ್ಷಣ, ಆರೋಗ್ಯ, ಸಾಮಾಜಿಕ ಬದಲಾವಣೆ ಹೀಗೆ ಹಲವು ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಿದರು ಎಂದರು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಸಿ.ದಯಾನಂದ ಅವರು ಮಾತನಾಡಿ ಭೂಸುಧಾರಣಾ ಕಾಯ್ದೆ ಜಾರಿಗೊಳಿಸಿ, ರಾಜ್ಯದಲ್ಲಿ ಕ್ರಾಂತಿ ಉಂಟು ಮಾಡಿದರು. ಆಶ್ರಯ ಯೋಜನೆ, ಗ್ರಾಮೀಣ ಸಾಲ ಮನ್ನಾ, ಮನೆ ಮನೆಗೆ ವಿದ್ಯುತ್ ಸಂಪರ್ಕ ಹೀಗೆ ಹಲವು ಕಾರ್ಯಕ್ರಮ ಜಾರಿಗೊಳಿಸಿದರು ಎಂದು ತಿಳಿಸಿದರು.
‘ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಜಾರಿಗೊಳಿಸಿದರು. ಅರಸು ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದರು. ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಕಡಿಮೆ ಮಾಡಲು ಶ್ರಮಿಸಿದರು ಎಂದು ಕೆ.ಸಿ.ದಯಾನಂದ ಅವರು ಹೇಳಿದರು.’
ಡಿ.ದೇವರಾಜ ಅರಸು ಅವರು ಸಾಮಾಜಿಕ ನ್ಯಾಯಕ್ಕೆ ಭದ್ರಬುನಾದಿ ಹಾಕಿದರು. 1973 ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದ ಕೀರ್ತಿ ಡಿ.ದೇವರಾಜು ಅರಸು ಅವರಿಗೆ ಸಲ್ಲುತ್ತದೆ ಎಂದು ಅವರು ವಿವರಿಸಿದರು.
ಡಿ.ದೇವರಾಜ ಅರಸು ಅವರು ಸರ್ವರಿಗೂ ಸಮಬಾಳು-ಸಮಪಾಲು ನೀಡಲು ಪ್ರಯತ್ನಿಸಿದರು. ಡಿ.ದೇವರಾಜ ಅರಸು ಅವರ ಆಡಳಿತ ಅವಧಿಯಲ್ಲಿನ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿವೆ ಎಂದು ನುಡಿದರು.
ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಮಾತನಾಡಿ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಅವರು ರಾಜ್ಯದಲ್ಲಿ ಹಲವು ಭೂ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಶ್ರಮಿಸಿದರು, ತಾಲ್ಲೂಕು ಭೂ ಮಂಡಳಿ ಕಾಯ್ದೆಯನ್ನು ಜಾರಿಗೊಳಿಸಿದರು ಎಂದು ವರ್ಣಿಸಿದರು.
ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಬರುವ ವಸತಿ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಾಗೆಯೇ ಶಾಸಕರಾದ ಡಾ.ಮಂತರ್ ಗೌಡ, ಪ್ರಾಂಶುಪಾಲರಾದ ಕೆ.ಸಿ.ದಯಾನಂದ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಸದಸ್ಯರಾದ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನಿರ್ ಅಹಮದ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕೃಷಿ ಇಲಾಖೆ ಉಪ ನಿರ್ದೇಶಕರಾದ ಬಾಲರಾಜ್ ರಂಗರಾವ್, ಡಿಡಿಪಿಯು ಪುಟ್ಟರಾಜು ಇತರರು ಇದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿದರು. ಆಲೂರು ಸಿದ್ದಾಪುರ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಪ್ರಾಂಶುಪಾಲರಾದ ಭಾರತಿ ನಿರೂಪಿಸಿದರು. ಭಾಗಮಂಡಲ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.