ವಿರಾಜಪೇಟೆ ಆ.21 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿರುವ ನಾಗ ದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಕಲ್ಪ, ಹಾಲು ಹಾಗೂ ಕ್ಷೀರಾಭಿಷೇಕ ಮಾಡಿ ದೇವರಿಗೆ ನೈವೇದ್ಯವನ್ನು ಸಮರ್ಪಿಸಿದರು. ವಿಶೇಷ ಸೇವೆಯಾದ ನಾಗ ತಂಬಿಲವನ್ನು ಮಾಡಿ ಮಹಾ ಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ ಹಾಗೂ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭ ಸಮೀಪದ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.







