ವಿರಾಜಪೇಟೆ ಆ.21 : ಹೆಗ್ಗಳ ಗ್ರಾಮದ ಪಾಲ್ಟ್ ಮಕ್ಕಿ ನಾಗ ಬನದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಅರ್ಚಕರಾದ ವೇಣುಗೋಪಾಲ್ ಭಟ್ ಮುಂಜಾನೆಯಿಂದಲೇ ಸಂಕಲ್ಪ, ಕ್ಷೀರಾಭಿಷೇಕ, ಸೀಯಾಳ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಂತರ ನೈವೇದ್ಯವನ್ನು ಸಮರ್ಪಿಸಿ ನಾಗತಂಬಿಲ ಸೇವೆಯನ್ನು ಮಾಡಿದರು.
ಮಹಾ ಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಪಾಲ್ಗೊಂಡಿದ್ದರು.







