Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿವಿ ಕಾರ್ಯಾಗಾರ : ಕೌಶಲ್ಯ ಅಭಿವೃದ್ಧಿ, ಜ್ಞಾನ, ಬೋಧನಾ ವಿಧಾನ ಹೆಚ್ಚಿಸುವ ಗುರಿ : ಕುಲಸಚಿವ ಡಾ.ಸೀನಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿವಿ ಕಾರ್ಯಾಗಾರ : ಕೌಶಲ್ಯ ಅಭಿವೃದ್ಧಿ, ಜ್ಞಾನ, ಬೋಧನಾ ವಿಧಾನ ಹೆಚ್ಚಿಸುವ ಗುರಿ : ಕುಲಸಚಿವ ಡಾ.ಸೀನಪ್ಪ*

ಆಗಷ್ಟ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.20 : ಕೊಡಗು ವಿಶ್ವ ವಿದ್ಯಾನಿಲಯವು ಅಧ್ಯಾಪಕರ ಅಭಿವೃದ್ಧಿಯ ಮಹತ್ವವನ್ನು ಅರ್ಥಮಾಡಿಕೊಂಡು ಅಧ್ಯಾಪಕರಲ್ಲಿ ಕೌಶಲ್ಯ ಅಭಿವೃದ್ಧಿ, ಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ತಿಳಿಸಿದ್ದಾರೆ.
ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರಿನ ಫೋರ್ಕ್ ಟೆಕ್ನಾಲಜಿಸ್ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಎರಡು ವಾರಗಳ ಕಾಲ ವಿವಿಧ ಕಾಲೇಜುಗಳ ಅಧ್ಯಾಪಕರಿಗೆ ನಡೆಯುವ “ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂತನವಾಗಿ ಆರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯವು ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲನ್ನು ಹೊಂದಿದ್ದು, ವಿದ್ಯಾರ್ಥಿಗಳ ಮನಸ್ಸು ಮತ್ತು ಸಮಾಜದ ಭವಿಷ್ಯವನ್ನು ರೂಪಿಸುವ ಸಲುವಾಗಿ ಬೋಧನಾ ವಿಭಾಗದ ಸದಸ್ಯರ ಕೌಶಲ್ಯ ಮತ್ತು ಸಾಮಥ್ರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರಂಭಿಕ ಹಂತವಾಗಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇಂದಿನ ವೇಗದ ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ, ಅಧ್ಯಾಪಕರು ನವೀಕೃತವಾಗಿರುವುದು ಬಹಳ ಮುಖ್ಯ. ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ಯುಗದ ಸವಾಲುಗಳನ್ನು ಎದುರಿಸುವ ಸಲುವಾಗಿ ಅಧ್ಯಾಪಕರುಗಳಿಗೆ ನವೀನ ಬೋಧನಾ ವಿಧಾನಗಳು, ಪರಿಣಾಮಕಾರಿ ತರಗತಿ ನಿರ್ವಹಣೆ, ಸಂಶೋಧನಾ ವಿಧಾನಗಳು, ಸುಧಾರಿತ ಶಿಕ್ಷಣ ವಿಧಾನಗಳು ಮತ್ತು ಶಿಕ್ಷಣದಲ್ಲಿ ತಂತ್ರಜ್ಞಾನದ ಏಕೀಕರಣ, ಬೋಧನಾ ಕೌಶಲ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುವ ಸಲುವಾಗಿ ಅಧ್ಯಾಪಕರಿಗೆ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.
ಕೊಡಗು ವಿಶ್ವ ವಿದ್ಯಾನಿಲಯದ ಸ್ಥಾಪನೆ ಬಹುಕಾಲದ ಕನಸಾಗಿದ್ದು, ವಿಶ್ವ ವಿದ್ಯಾನಿಲಯದಡಿಯಲ್ಲಿರುವ ಎಲ್ಲಾ ಸಂಸ್ಥೆಗಳ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು. ಕುಶಾಲನಗರದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್‍ನಲ್ಲಿ 2022ರಲ್ಲಿ ಸ್ಥಾಪಿತವಾದ ಕೊಡಗು ವಿಶ್ವ ವಿದ್ಯಾನಿಲಯ ತನ್ನ ಕಾರ್ಯವನ್ನು ಪ್ರಾರಂಭಿಸಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಸ್ಥೆಯು ಅಪಾರ ಸಾಮಥ್ರ್ಯವನ್ನು ಹೊಂದಿದೆ. ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳು ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಭೂಮಿ ಮತ್ತು ಮೂಲ ಸೌಕರ್ಯ ಒದಗಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದ ಡಾ.ಸೀನಪ್ಪ, ವಿಶ್ವ ವಿದ್ಯಾನಿಲಯದ ಮುಂದಿರುವ ಸವಾಲುಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕೊಡಗು ವಿಶ್ವವಿದ್ಯಾನಿಲಯ ದೂರ ದೃಷ್ಟಿಯನ್ನು ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ. ವಿಶ್ವ ವಿದ್ಯಾನಿಲಯ ಒಳಗೊಂಡಿರುವ 22 ಕಾಲೇಜುಗಳ ಅಧ್ಯಾಪಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಂಡು ಕ್ರಾಂತಿಕಾರಿ ಬದಲಾವಣೆ ಮಾಡುತ್ತಿದೆ. ಬೋಧಕ ವರ್ಗ ಇಂದಿನ ತಾಂತ್ರಿಕತೆಗೆ ಹೊಂದಿಕೊಂಡು ವಿದ್ಯಾರ್ಥಿಗಳಲ್ಲಿ ಬದಲಾವಣೆ ತರಲು ಈ ತರಬೇತಿ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
ಕೊಡಗು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿಲ್ಲ ಎಂಬ ಉದ್ದೇಶದಿಂದ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ತೆರಳುತ್ತಿದ್ದು, ಈ ಮನೋಭಾವನೆಯನ್ನು ದೂರ ಮಾಡುವ ಕೆಲಸವಾಗಬೇಕು. ಜಿಲ್ಲೆಯಲ್ಲಿ ಸಮರ್ಥ ಶಿಕ್ಷಕರಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಅಂಕ ದೊರೆಯುತ್ತಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತುದಾರ ಅವಿನಾಶ್, ನವೀನ ತಂತ್ರಜ್ಞಾನವನ್ನು ಅವಳಡಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕುರಿತು ಕಾರ್ಯಾಗಾರದಲ್ಲಿ ಅಧ್ಯಾಪಕರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಪ್ಪ ಕಾಲೇಜಿನ ಪ್ರೊ.ಈ.ತಿಪ್ಪೇಸ್ವಾಮಿ, ಪ್ರೊ.ಗಾಯತ್ರಿದೇವಿ, ಪ್ರೊ.ಕೃಷ್ಣ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜು ಸಿಬ್ಬಂದಿ ಚಂದ್ರಾವತಿ ಪ್ರಾರ್ಥಿಸಿ, ಎಂ.ಎ.ಕೊಡವ ವಿಭಾಗದ ಸಂಯೋಜಕ ರವಿಶಂಕರ್ ನಾಣಯ್ಯ ನಿರೂಪಿಸಿ, ಆಂಗ್ಲ ವಿಭಾಗದ ಸಂಯೋಜಕ ಪ್ರೊ.ಪೂಣಚ್ಚ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ…

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.