Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರಳ ವ್ಯಕ್ತಿತ್ವದ ಬಿಇಓ  ಕೆ.ವಿ.ಸುರೇಶ್ ಗೆ ಆತ್ಮೀಯ ಬೀಳ್ಕೊಡುಗೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರಳ ವ್ಯಕ್ತಿತ್ವದ ಬಿಇಓ  ಕೆ.ವಿ.ಸುರೇಶ್ ಗೆ ಆತ್ಮೀಯ ಬೀಳ್ಕೊಡುಗೆ* 

ಆಗಷ್ಟ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ, ಆ.21 :  ಸಹೃದಯಿ, ಸ್ನೇಹಜೀವಿ, ಶಿಕ್ಷಕರ ಒಡನಾಡಿ, ಸದಾ ಹಸನ್ಮುಖಿ , ಕಾರ್ಯತತ್ಪರತೆ, ಸರಳ, ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ್ದು  ಮೈಸೂರಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆಗೊಂಡಿರುವ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಅವರಿಗೆ ಸೋಮವಾರಪೇಟೆ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಕಛೇರಿಯ ಅಧಿಕಾರಿಗಳು/ ಸಿಬ್ಬಂದಿ ವರ್ಗದ ವತಿಯಿಂದ ಸೋಮವಾರಪೇಟೆಯ ಬಿಇಓ ಕಛೇರಿಯಲ್ಲಿ ಆತ್ಮೀಯ ಬೀಳ್ಕೊಡುಗೆ‌ ಏರ್ಪಡಿಸಲಾಗಿದೆ.
ಸರಳತೆ ಮತ್ತು ಸಜ್ಜನಿಕೆ ಮೈಗೂಢಿಸಿಕೊಂಡಿರುವ‌ ಕೆ.ವಿ.ಸುರೇಶ್ ಅವರ ಯೋಚನೆ ಮತ್ತು ಯೋಜನೆಯನ್ನು ಪ್ರತಿಯೊಂದರಲ್ಲೂ ಶಿಸ್ತುಬದ್ಧವಾಗಿ ಅಳವಡಿಸಿ ಕರ್ತವ್ಯ ನಿರ್ವಹಿಸಿದ್ದು, ಎಲ್ಲಾ ಅಧಿಕಾರಿ ಮತ್ತು ಶಿಕ್ಷಕರು, ಪೋಷಕರು ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
ಕೊಡಗು ಜಿಲ್ಲೆಗೆ 2002 ರಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ ಆಗಮಿಸಿದ ಶ್ರೀ ಕೆ.ವಿ.ಸುರೇಶ್, ಆ ಶಾಲೆಯ ಸರ್ವಾಂಗೀಣ ಪ್ರಗತಿಗೆ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅವಿರತ ಶ್ರಮ ವಹಿಸಿ ಆ *ಮೊರಾರ್ಜಿ ಶಾಲೆಯನ್ನು ರಾಜ್ಯಕ್ಕೆ ಮಾದರಿ ಶಾಲೆಯನ್ನಾಗಿ ರೂಪಿಸುವ ಮೂಲಕ *ಮೊರಾರ್ಜಿ ಶಾಲೆಯ ಪ್ರಿನ್ಸಿಪಾಲ್ ಸುರೇಶ್ ಎಂಬ ಹೆಗ್ಗಳಿಕೆ ಪಾತ್ರರಾದರು.
ಆ ಶಾಲೆಯಲ್ಲಿನ ಕಟ್ಟಡದ ಭೌತಿಕ ಚಿತ್ರಣವನ್ನೇ ಬದಲಾಯಿಸಿ ಸುಸಜ್ಜಿತ ಕಟ್ಟಡ ನಿರ್ಮಾಣ ಹಾಗೂ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಗಳಿಸಲು ಅಹರ್ನಿಶಿ ಶ್ರಮಿಸಿರುವುದು ಅನುಕರಣೀಯವಾದುದು. ಅಲ್ಲಿಂದ 2011 ರಲ್ಲಿ ಪ್ರಾಂಶುಪಾಲರ ಹುದ್ದೆಯಿಂದ ಮಡಿಕೇರಿಯ ಡಿಡಿಪಿಐ ಕಛೇರಿಗೆ ಶಿಕ್ಷಣಾಧಿಕಾರಿಯಾಗಿ ಮುಂಬಡ್ತಿ ಹೊಂದಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ 2013 ರಲ್ಲಿ ಕೊಡಗು ಜಿಲ್ಲೆಯ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ನಾಲ್ಕೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿ 2018 ರ ಮಾರ್ಚ್ ನಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಿಇಓ ಆಗಿ ವರ್ಗಾವಣೆ ಹೊಂದಿದರು.

ನಂತರ 2018 ರ ನವೆಂಬರ್ ನಲ್ಲಿ ಮರಳಿ ಕೊಡಗು ಜಿಲ್ಲೆಯ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾಗಿ ನೇಮಕಗೊಂಡು ಸೇವೆ ಸಲ್ಲಿಸಿದರು. ಇದೇ ವೇಳೆ ಕೆಲವು ತಿಂಗಳ ಕಾಲ ಡಯಟ್ ನ ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರ ಮಾರ್ಚ್ 9 ಕ್ಕೆ ಕೂಡಿಗೆ ಡಯಟ್ ನಿಂದ ಸೋಮವಾರಪೇಟೆ ತಾಲ್ಲೂಕಿನ ಬಿಇಓ ಆಗಿ ನೇಮಕಗೊಂಡು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.
ಇದೀಗ ಇಲ್ಲಿಂದ ಮೈಸೂರಿನ ಡಯಟ್ ಗೆ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆಗೊಂಡಿರುವ  ಸುರೇಶ್  ಅವರಿಗೆ ತಾಲ್ಲೂಕಿನ ಎಲ್ಲಾ ಶಿಕ್ಷಕರ ಪರವಾಗಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಗುತ್ತಿದೆ.
ಉತ್ತಮ ವಾಗ್ಮಿ : ಕೊಡಗು ಜಿಲ್ಲೆಯಲ್ಲಿ ಎರಡು ದಶಕಗಳ ಕಾಲ ಉತ್ತಮ ಸೇವೆ ಸಲ್ಲಿಸುವ ಮೂಲಕ ಅವರ ಸೇವಾನಿಷ್ಠೆ, ಕಾರ್ಯತತ್ಪರತೆ, ಎಲ್ಲರೊಂದಿಗೆ ಬೆರೆಯುವ ಸ್ನೇಹಜೀವಿಯಾಗಿರುವ ಶ್ರೀ ಸುರೇಶ್ ಉತ್ತಮ ವಾಗ್ಮಿ ಕೂಡ ಆಗಿದ್ದಾರೆ.
ವೃತ್ತಿ ಜೀವನ ಆರಂಭ: ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕಂಚಗಾರಕೊಪ್ಪಲು ಗ್ರಾಮದವರಾದ ಶ್ರೀ ಸುರೇಶ್  1999 ರಲ್ಲಿ ಕೆ.ಇ.ಎಸ್.ಪರೀಕ್ಷೆ ತೇರ್ಗಡೆ ಹೊಂದಿ ತಾವು ಓದಿದ ಕೆ.ಆರ್.ನಗರ ತಾಲ್ಲೂಕಿನ ಮಾವತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ವೃತ್ತಿ ಜೀವನ ಆರಂಭಿಸಿದ  ಸುರೇಶ್ ಅವರು ಆ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತಮ ಫಲಿತಾಂಶದೊಂದಿಗೆ ಶಾಲೆಯ ಸರ್ವಾಂಗೀಣ ಪ್ರಗತಿಗೆ ಮೂರು ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸುವ ಮೂಲಕ ಹೆಸರು ಗಳಿಸಿರುತ್ತಾರೆ.
*ವರ್ಗಾವಣೆ ಒಂದು ರೀತಿ ಸಂತೋಷ ಹಾಗೂ ದುಃಖದ ಸಂಗತಿಯಾಗಿದೆ. ಮಾತೃ ಹೃದಯ ಹೊಂದಿರುವ ಅವರಲ್ಲಿ ಮಾನವೀಯತೆಯ ಮಮಕಾರ ಅಪಾರವಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರದ ಅಳಿಯರಾಗಿರುವ ಶ್ರೀಯುತ ಸುರೇಶ್ ಸರ್ ಅವರು ಅಪಾರ ಸ್ನೇಹಿತರು ಹಾಗೂ ಪೋಷಕರ ಪ್ರೀತಿಗೆ ಪಾತ್ರರಾಗಿದ್ದಾರೆ.
ಇವರ ಮುಂದಿನ ವೃತ್ತಿ ಜೀವನವು ಉತ್ತಮವಾಗಲಿ ಮತ್ತು ಪದೋನ್ನತಿ ಹೊಂದುವ ಮೂಲಕ ಉತ್ತಮ ಅಧಿಕಾರಿಯಾಗಿ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಕಾರಣೀಕರ್ತರಾಗಲಿ ಎಂದು ಎಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ. ಶ್ರೀಯುತ ಕೆ.ವಿ.ಸುರೇಶ್ ಅವರ ಕುಟುಂಬ ಹಾಗೂ ಮಕ್ಕಳ ಭವಿಷ್ಯಕ್ಕೂ ಶ್ರೇಯಸ್ಸು ಲಭಿಸಲಿ ಎಂದು ಆಶಿಸಲಾಗಿದೆ.
ಕೃತಜ್ಞತೆಗಳು ಜಿಲ್ಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಸಂದರ್ಭದಲ್ಲಿ ತಮಗೆ ಸಹಕರಿಸಿದ ಎಲ್ಲರಿಗೂ ಹೃದಯಾಂತರಾಳದಿಂದ ಶ್ರೀ ಸುರೇಶ್ ಸರ್ ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ : ಟಿ.ಜಿ.ಪ್ರೇಮಕುಮಾರ್,
ಮುಖ್ಯ ಶಿಕ್ಷಕರು,
ಸರ್ಕಾರಿ ಪ್ರೌಢಶಾಲೆ,
ಕೂಡುಮಂಗಳೂರು(ಕೂಡ್ಲೂರು), ಕೊಡಗು ಜಿಲ್ಲೆ:
( ಮೊ: 9448588352)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.