Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಪೊಲೀಸರಿಂದ ಸಭೆ : ಅಕ್ರಮ ಚಟುವಟಿಕೆಯಲ್ಲಿ ತೊಡಗುವ ಚಾಲಕರ ಪರವಾನಗಿ ರದ್ದುಗೊಳಿಸಿ : ಆಟೋ ಚಾಲಕರ ಸಂಘ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಪೊಲೀಸರಿಂದ ಸಭೆ : ಅಕ್ರಮ ಚಟುವಟಿಕೆಯಲ್ಲಿ ತೊಡಗುವ ಚಾಲಕರ ಪರವಾನಗಿ ರದ್ದುಗೊಳಿಸಿ : ಆಟೋ ಚಾಲಕರ ಸಂಘ ಒತ್ತಾಯ

ಆಗಷ್ಟ್ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.22 : ಗಾಂಜಾ ಸಾಗಾಟ, ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮತ್ತಿತರ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಆಟೋ ಚಾಲಕರ ‘ಚಾಲನಾ ಪರವಾನಗಿ’ಯನ್ನು ನಿರ್ದಿಷ್ಟ ಅವಧಿಗೆ ರದ್ದುಗೊಳಿಸುವಂತೆ ಆಟೋ ಚಾಲಕರ ಸಂಘದ ಪದಾಧಿಕಾರಿಗಳೇ ಪೊಲೀಸರನ್ನು ಆಗ್ರಹಿಸಿದ್ದಾರೆ.
ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೊಲೀಸ್ ಮತ್ತು ಚಾಲಕರ ಸಭೆಯಲ್ಲಿ ಜಿಲ್ಲಾ ಆಟೋ ಚಾಲಕರ ಮತ್ತು ಮಾಲೀಕರ ಸಂಘ ನಿಯಮ ಉಲ್ಲಂಘಿಸುತ್ತಿರುವ ಚಾಲಕರ ಬಗ್ಗೆ ಗಮನ ಸೆಳೆದರು.
ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುವ ಆಟೋ ಚಾಲಕರಿದ್ದಾರೆ. ಇವರುಗಳ ಚಾಲನಾ ಪರವಾನಗಿಯನ್ನು ಕನಿಷ್ಟ ಒಂದು ವರ್ಷದವರೆಗೆ ಸ್ಥಗಿತಗೊಳಿಸುವ ಕಠಿಣ ಕ್ರಮ ಕೈಗೊಳ್ಳಿ. ಇಂತಹ ವಿಚಾರದಲ್ಲಿ ಸಂಘ ಎಂದಿಗೂ ಚಾಲಕರ ಪರ ನಿಲ್ಲುವುದಿಲ್ಲವೆಂದು ಸ್ಪಷ್ಟಪಡಿಸಿದರು.
::: ನಿಲುಗಡೆ ಸಮಸ್ಯೆ :::
ಮಡಿಕೇರಿ ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ವಾಹನ ನಿಲುಗಡೆ ಕಷ್ಟವಾಗಿದೆ. ಆಟೋ ಚಾಲಕರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ತೆರಳಿದಾಗ ಆಸ್ಪತ್ರೆಯ ಬಳಿ ಸಾರ್ವಜನಿಕ ವಾಹನ ನಿಲುಗಡೆ ಸ್ಥಳದಲ್ಲಿ ಆಟೋ ರಿಕ್ಷಾ ನಿಲುಗಡೆಗೆ ಅವಕಾಶವಿಲ್ಲ. ಇದರಿಂದ ಚಾಲಕರಿಗೆ ತೊಂದರೆಯಾಗುತ್ತಿದ್ದು, ನಿಲುಗಡೆಗೆ ಅವಕಾಶ ನೀಡಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಎಸ್‍ಐ ಶ್ರೀಧರ್, ಆಟೋ ರಿಕ್ಷಾಗಳಿಗೆ ಸಾರ್ವಜನಿಕ ನಿಲುಗಡೆ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ನಿಲುಗಡೆಗೆ ಅವಕಾಶವಿಲ್ಲ. ಹೀಗಿದ್ದೂ ವೈಯಕ್ತಿಕ ಕಾರಣಗಳ ಹಿನ್ನೆಲೆ ಆಸ್ಪತ್ರೆಗೆ ತೆರಳುವ ಹಂತದಲ್ಲಿ ಒಂದು ಆಟೋ ನಿಲುಗಡೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಅದಕ್ಕೆ ಅಗತ್ಯವಾದ ಬೋರ್ಡ್ ಅಳವಡಿಸುವಂತೆ ಆಟೋ ಚಾಲಕರ ಸಂಘಕ್ಕೆ ಸೂಚಿಸಿ, ಯಾವುದೇ ಕಾರಣಕ್ಕೂ ಅಲ್ಲಿ ಹೆಚ್ಚಿನ ಆಟೋಗಳನ್ನು ನಿಲ್ಲಿಸುವುದಕ್ಕೆ ಅವಕಾಶವಿಲ್ಲವೆಂದು ಹೇಳಿದರು.
ನಗರಸಭೆಯ ಮಾಜಿ ಸದಸ್ಯ ಉಣ್ಣಿ ಕೃಷ್ಣನ್ ಮಾತನಾಡಿ ಜಿಲ್ಲಾ ಆಸ್ಪತ್ರೆ ಮುಂಭಾಗದ ಮುಖ್ಯ ರಸ್ತೆಯ ಬದಿಗಳಲ್ಲಿ ಭಾರೀ ವಾಹನಗಳನ್ನು ದಿನಗಟ್ಟಲೆ ನಿಲುಗಡೆ ಮಾಡಲಾಗುತ್ತಿದೆ. ಇದಕ್ಕೆ ಅವಕಾಶ ನೀಡದಿದ್ದಲ್ಲಿ ಆ ವಿಭಾಗದ ವಾಹನ ನಿಲುಗಡೆ ಸಮಸ್ಯೆ ಪರಿಹಾರವಾಗಬಹುದು ಎಂದರು.
ನಗರ ವ್ಯಾಪ್ತಿಯ ಟ್ಯಾಕ್ಸಿ, ಪಿಕಪ್, ಆಟೋ ರಿಕ್ಷಾ, ಲಾರಿ ಸೇರಿದಂತೆ ವಿವಿಧ ವಾಹನಗಳ ನಿಲುಗಡೆಗೆ ಜಾಗವನ್ನು ಗೊತ್ತುಪಡಿಸಲಾಗಿದೆ. ಅಂತಹ ಸ್ಥಳದಲ್ಲಿ ಇತರೆ ವಾಹನಗಳ ನಿಲುಗಡೆಯಾಗುತ್ತಿದೆ. ಯಾವುದೇ ಕಾರಣಕ್ಕು ಸೂಚಿಸಿದ ವಾಹನಗಳು ಮಾತ್ರ ಅಲ್ಲಿ ನಿಲುಗಡೆಯಾಗಬೇಕು. ನಿಯಮ ಮೀರಿದಲ್ಲಿ ಕ್ರಮ ಅನಿವಾರ್ಯವೆಂದು ಠಾಣಾಧಿಕಾರಿ ತಿಳಿಸಿದರು.
ಈ ಸಂದರ್ಭ ಪಿಕ್ ಅಪ್, ಟ್ಯಾಕ್ಸಿ ಚಾಲಕರ ಸಂಘದ ಪ್ರತಿನಿಧಿಗಳು ಮಾತನಾಡಿ, ತಮಗೆ ನಿಗಧಿಪಡಿಸಿದ ಸ್ಥಳಗಳಲ್ಲಿ ವೈಟ್ ಬೋರ್ಡ್ ವಾಹನಗಳನ್ನು ಕೆಲವರು ನಿಲ್ಲಿಸುತ್ತಾರೆ. ಇದನ್ನು ಪ್ರಶ್ನಿಸಿದಲ್ಲಿ ಅನಗತ್ಯ ಸಂಘರ್ಷಗಳು ಉಂಟಾಗುತ್ತದೆ ಎಂದು ಸಮಸ್ಯೆ ಮುಂದಿಟ್ಟರು. ನಗರದ ಇಂದಿರಾಗಾಂಧಿ ವೃತ್ತದಿಂದ ರಾಮಮಂದಿರದವರೆಗೆ ಇರುವ ನಿಲುಗಡೆ ಸ್ಥಳದಲ್ಲಿ ಅಲ್ಲಿನ ಅಂಗಡಿ ಮಾಲೀಕರೆ ತಮ್ಮ ವಾಹನಗಳನ್ನು ಬೆಳಗ್ಗಿನಿಂದ ಸಂಜೆಯವರೆಗೆ ನಿಲ್ಲಿಸುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.
ಖಾಸಗಿ ಬಸ್ ನಿಲ್ದಾಣದಿಂದ ಪತ್ರಿಕಾಭವನಕ್ಕಾಗಿ ತೆರಳುವ ಹಾದಿಯಲ್ಲಿ ವಾಹನ ನಿಲುಗಡೆಯಿಂದ ಬಸ್ ಸಂಚಾರ ಕಷ್ಟಕರವಾಗಿದೆ ಎಂದು ಬಸ್ ನಿರ್ವಾಹಕರೊಬ್ಬರು ಗಮನ ಸೆಳೆದರು.
ಎಲ್ಲಾ ಸಮಸ್ಯೆಗಳನ್ನು ಆಲಿಸಿದ ಎಸ್‍ಐ ಶ್ರೀಧರ್, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಭೆಯಲ್ಲಿ ಎಎಸ್‍ಐ ನಂದ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು…

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.