ಸೋಮವಾರಪೇಟೆ ಆ.23 : ಗೌಡಳ್ಳಿ ಗ್ರಾ.ಪಂ ಸಾಮಾನ್ಯಸಭೆಯು ಗ್ರಾ.ಪಂ ಅಧ್ಯಕ್ಷ ನವೀನ್ ಅಜ್ಜಳ್ಳಿ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರವು ಕಾರ್ಯನಿರ್ವಹಿಸದೆ ಇರುವುದರ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆ ಸೂಚಿಸದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಸರ್ವ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ ಗುತ್ತಿಗೆದಾರರ ಪರವಾನಗಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಪಿಡಿಒ ಸಭೆಗೆ ಭರವಸೆ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷರಾದ ವಿಶಾಲಾಕ್ಷಿ, ಸುಮಾ, ಪ್ರಸನ್ನ, ವೆಂಕಟೇಶ್ ಇದ್ದರು.







