ಸೋಮವಾರಪೇಟೆ ಆ.24: ಹುಣಸೂರು ತಾಲ್ಲೂಕು ರತ್ನಾಪುರಿ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ
ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಾಗೂ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ಗಮಿತ ಅಧ್ಯಕ್ಷ ಡಿ.ಪಿ.ಧರ್ಮಪ್ಪ ಅವರಿಗೆ ಸಂಘದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಸೋಮವಾರಪೇಟೆ
ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಡಿ.ಪಿ.ಧರ್ಮಪ್ಪ ಅವರಿಗೆ ಬಿಇಓ ಕೆ.ವಿ.ಸುರೇಶ್ ಸಂಘದ ಪರವಾಗಿ ಶಾಲು ಹೊದಿಸಿ ಸನ್ಮಾನಿಸಿದರು.
ಬಿಇಓ ಕೆ.ವಿ.ಸುರೇಶ್ ಮಾತನಾಡಿ, ವಿಜ್ಞಾನ ಶಿಕ್ಷಕರಾದ ಡಿ.ಪಿ.ಧರ್ಮಪ್ಪ ಅವರು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಸೇವೆಯೊಂದಿಗೆ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಶಿಕ್ಷಕರ ಸಂಘವು
ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸನ್ಮಾನಿತರಾದ ಡಿ.ಪಿ.ಧರ್ಮಪ್ಪ ಮಾತನಾಡಿ, ತಾವು ಶಾಲೆಯ ಕಾರ್ಯಭಾರದೊಂದಿಗೆ ಸಂಘದ ಮೂಲಕ ಶಿಕ್ಷಕರ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದು ತಮಗೆ ತೃಪ್ತಿ ತಂದಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಶಿಕ್ಷಕ ಧರ್ಮಪ್ಪ ಅವರು, ಜಿಲ್ಲೆಯಲ್ಲಿ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ ಇದೀಗ ಮೈಸೂರು ಜಿಲ್ಲೆಗೆ ವರ್ಗಾವಣೆಯಾಗಿದ್ದು, ಅವರು ಶಿಕ್ಷಕರ ಸಂಘಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಜಿ.ಕುಮಾರ್, ಖಜಾಂಚಿ ಎ.ಸಿ.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಪದಾಧಿಕಾರಿ ಪ್ರಕಾಶ್, ಸಿ.ಆರ್. ಲೋಕೇಶ್, ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ. ನವೀನ್ ಕುಮಾರ್ , ತಾಲ್ಲೂಕು ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್,
ಕಾರ್ಯದರ್ಶಿ ಟಿ.ವಿ.ಶೈಲಾ, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ.ಹೇಮಂತ್,
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್, ಮುಖ್ಯ ಶಿಕ್ಷಕರಾದ ಟಿ.ಜಿ.ಪ್ರೇಮಕುಮಾರ್, ಎಂ.ವಿ.ಮಂಜೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಪಿ.ಜಯಕುಮಾರ್, ಯಶವಂತ್, ಶ್ರೀಕಾಂತ್, ಪೂವಯ್ಯ, ಬಿ.ಪಿ.ಸವಿತಾ, ರಜನಿ, ಶಿವಕುಮಾರಿ, ಶಿವಣ್ಣ, ಇತರೆ ಪದಾಧಿಕಾರಿಗಳು ಇದ್ದರು.









